CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಸಿಐಡಿಗೆ ಆದೇಶಿಸಿರುವುದು ನಮ್ಮ ವ್ಯಾಪ್ತಿಗೆ ಬರಲ್ಲ: ಸಭಾಪತಿ

Team Udayavani, Dec 25, 2024, 7:15 AM IST

Basavaraj-horatti

ಹುಬ್ಬಳ್ಳಿ: ರಾಜ್ಯ ಸರಕಾರ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ ಸಿಐಡಿಗೆ ಆದೇಶಿಸಿರುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಪ್ರಕರಣ ಸಿಐಡಿಗೆ ವಹಿಸುವಾಗ ಪೊಲೀಸರು ವಿಧಾನ ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖೀಸಿದ್ದು ತಪ್ಪು. ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗಾರರ ಜತೆ ಅವರು ಮಾತನಾಡಿ, ಘಟನೆ ಸದನದ ಮುಂದೆ ನಡೆದಿದೆ. ಅದನ್ನೀಗ ಸಿಐಡಿಗೆ ಕೊಟ್ಟಿರುವುದಾಗಿ ಗೃಹ ಸಚಿವರು ಹೇಳುತ್ತಿದ್ದಾರೆ. ಸ್ಥಳ ಮಹಜರು ಕುರಿತು ಬೆಳಗಾವಿ ಪೊಲೀಸ್‌ ಆಯುಕ್ತರು ಪತ್ರ ಬರೆದಿದ್ದಾರೆ. ಅಂತಹ ಪರಿಸ್ಥಿತಿ ಎದುರಾದರೆ ನಮ್ಮದೇ ನಿಯಮದ ಪ್ರಕಾರ ಅವಕಾಶ ಮಾಡಿಕೊಡುತ್ತೇವೆ. ಕಾನೂನು ವ್ಯಾಪ್ತಿ ಬಿಟ್ಟು ನಾವು ಏನೂ ಮಾಡಲಾಗುವುದಿಲ್ಲ. ಪ್ರಕರಣವು ಸದನ ಮುಂದೂಡಿದಾಗ ನಡೆದಿದ್ದರೂ ಪರಿಷತ್‌ನಲ್ಲಿಯೇ ನಡೆದಿರುವುದು. ಆದರೆ, ಸರಕಾರ ಸದನದ ಹೊರಗೆ ನಡೆದ ಪ್ರಕರಣವೆಂದು ಸಿಐಡಿಗೆ ವಹಿಸಿದೆ ಎಂದು ತಿಳಿದು ಬಂದಿದೆ. ಏನೇ ಕ್ರಮ ಕೈಗೊಳ್ಳುವುದಿದ್ದರೂ ಸಭಾಪತಿ ಅನುಮತಿ ಬೇಕಾಗುತ್ತದೆ ಎಂದರು.

ಪೊಲೀಸರ ನಡೆ ತಪ್ಪು
ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಒಬ್ಬ ಮಂತ್ರಿಯಾಗಿ ಅಲ್ಲ, ಮಹಿಳೆಯಾಗಿ ನಾವು ನೋಡಬೇಕು. ಅಲ್ಲದೇ ಸಿ.ಟಿ.ರವಿ ಅವರನ್ನು ಪೊಲೀಸರು ಅಮಾನುಷವಾಗಿ ಎತ್ತಿಕೊಂಡು ಹೋಗಿದ್ದು ತಪ್ಪು. ಅವರು ಸದನದ ಸದಸ್ಯರಾಗಿ ದೂರು ಕೊಟ್ಟರೆ ಪರಿಶೀಲನೆ ಮಾಡಲು ಸಮಿತಿ ಎದುರು ಅವರನ್ನು ಕರೆಯಿಸುತ್ತೇವೆ. ಚರ್ಚಿಸಿ ತಪ್ಪಿತಸ್ಥರೆಂದು ಕಂಡು ಬಂದರೆ ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದರು.

ಪ್ರಕರಣ ನಮ್ಮ ವ್ಯಾಪ್ತಿಗೆ ಬಂದಾಗ ತೀರ್ಮಾನ ಕೈಗೊಂಡು ಮುಗಿಸಲಾಗಿತ್ತು. ಅದಕ್ಕಾಗಿ ಮುಗಿದ ಅಧ್ಯಾಯ ಎಂದು ಕೂಡ ನಾನು ಹೇಳಿದ್ದೆ. ಲಕ್ಷ್ಮೀ ಹೆಬ್ಟಾಳ್ಕರ್‌ ಅಥವಾ ಇನ್ಯಾರಾದರೂ ಮತ್ತೆ ಹೊಸದಾಗಿ ದೂರು ಕೊಟ್ಟರೂ ಎಫ್‌ಎಸ್‌ಎಲ್‌ಗೆ ಕಳುಹಿಸಿ, ವರದಿ ಆಧರಿಸಿ ಸಮಿತಿ ಎದುರು ಕರೆಯುತ್ತೇವೆ. ಆದರೆ ಸದನದೊಳಗೆ ಆಗಿರುವ ಘಟನೆ ಬಗ್ಗೆ ನನಗೆ ಮಾಹಿತಿ ಇಲ್ಲ. ಎರಡೂ ಕಡೆ ಯೋಚನೆ ಮಾಡಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.