ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಸದನದಲ್ಲಿ ಉತ್ತರ ನೀಡಿದ್ದೇನೆ : ಸಿಎಂ
Team Udayavani, Sep 25, 2021, 7:55 PM IST
ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ನಾನು ಈಗಾಗಲೇ ಸದನದಲ್ಲಿ ಉತ್ತರ ನೀಡಿದ್ದೇನೆ. ಯತ್ನಾಳಗೆ ತಿಳಿಸಿದ್ದೇವೆ. ಅವರು ಹೋಗಿ ಸ್ವಾಮೀಜಿ ಜೊತೆ ಚರ್ಚೆ ಮಾಡಿ ಬಂದಿದ್ದಾರೆ. ಸತತವಾಗಿ ಸಂಪರ್ಕದಲ್ಲಿ ಇದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಂತರ ಜನರು ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರಿಗೆ ತೊಂದರೆ ಆಗಬಾರದು. ಎಲ್ಲರು ಸಹಕಾರ ನೀಡಬೇಕು. ಜನರ ಬದುಕು ಈಗಷ್ಟೆ ಸಹಜ ಸ್ಥಿತಿಗೆ ಬರುತ್ತಿದೆ. ಕಾರಣ ಇಂತಹ ಸಂದರ್ಭದಲ್ಲಿ ಭಾರತ ಬಂದ್ ಮಾಡುವುದು ಸರಿಯಲ್ಲ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಈಗಾಗಲೇ ಮೂರು ವರ್ಷ ವಿವಿಧ ಹಂತದಲ್ಲಿ ಶಿಕ್ಷಣ ತಜ್ಞರು, ಶ್ರೇಷ್ಠ ತಜ್ಞರ ಸಮಿತಿ ಚರ್ಚೆ ಮಾಡಿದೆ. 21ನೇ ಶತಮಾನಕ್ಕೆ ಯಾವ ಶಿಕ್ಷಣ ಬೇಕು ಅದನ್ನು ಜಾರಿ ಮಾಡಲಾಗಿದೆ. ನಮ್ಮ ಮಕ್ಕಳು ರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ನಡೆಸಬೇಕಾಗಿದೆ. ಅದಕ್ಕಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರುವ ಉದ್ದೇಶ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದೆ. ಪ್ರಧಾನಿ ಮೋದಿ ಭಾರತ ಭವಿಷ್ಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆ ತರಲು ಮುಂದಾಗಿದ್ದಾರೆ. ಭಾರತೀಯರಿಂದ, ಭಾರತೀಯರಿಗೋಸ್ಕರ. ಭಾರತೀಯ ಮಕ್ಕಳಿಗೋಸ್ಕರ ಆಗುತ್ತಿರುವ ಬದಲಾವಣೆ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.