ದೇಶ ಒಡೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರೇ: ರಾಹುಲ್ ಗೆ ಸಿಎಂ ಬೊಮ್ಮಾಯಿ ತಿರುಗೇಟು
Team Udayavani, Oct 23, 2022, 3:19 PM IST
ಹುಬ್ಬಳ್ಳಿ: ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳು ಹಾಗೂ ತುಷ್ಟೀಕರಣದ ರಾಜಕಾರಣ ಮುಚ್ಚಿಕೊಳ್ಳಲು ರಾಹುಲ್ ಗಾಂಧಿಯವರು ಆರ್ ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ನಡೆಸುವ ಅವಧಿಯಲ್ಲಿ ದೇಶದ ಯಾವ್ಯಾವ ಭಾಗಗಳಲ್ಲಿ ಎಷ್ಟೆಷ್ಟು ದೊಡ್ಡ ಭಯೋತ್ಪಾದನೆ ಕೃತ್ಯಗಳು ನಡೆದಿವೆ ಎಂದು ಅವರೇ ಒಮ್ಮೆ ತಿರುಗಿ ನೋಡಲಿ. ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇಸ್ಲಾಂ ರಾಷ್ಟ್ರಗಳು ಸಹ ಪ್ರಧಾನಿ ಮೋದಿ ಅವರ ಯೋಜನೆ ಒಪ್ಪಿಕೊಳ್ಳುತ್ತಿವೆ. ಹೀಗಿದ್ದಾಗ ಆರ್ ಎಸ್ಎಸ್ ಮತ್ತು ಬಿಜೆಪಿಯವರನ್ನು ಕೋಮು ಸೌಹಾರ್ದ ಕದಡುವವರು ಎಂದು ಆರೋಪಿಸುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ನ್ಯೂಯಾರ್ಕ್: ಶಾಲೆಗಳಿಗೆ ದೀಪಾವಳಿಗೆ ಸಾರ್ವಜನಿಕ ರಜೆ; ಪ್ರಿಯಾಂಕಾ ಚೋಪ್ರಾ ಭಾವುಕ
ರಾಜ್ಯವನ್ನು ಕೋಮು ಗಲಭೆಗಳ ಪ್ರಯೋಗಾಲಯವನ್ನಾಗಿ ಮಾಡಲಾಗುತ್ತಿದೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಗೆ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಚಟವಿದೆ. ದೇಶ ಒಡೆಯುವ ಕೆಲಸ ಮಾಡುತ್ತಿರುವುದು ಅವರೇ. ಮೊದಲು ಅವರು ಆಡಳಿತ ನಡೆಸುವ ರಾಜ್ಯಗಳಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ತಡೆಗಟ್ಟಲಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.