ಮೀಸಲಾತಿ ಜೇನಿನಿಂದ ಕಚ್ಚಿಸಿಕೊಂಡರೂ ಜನರಿಗೆ ಸಿಹಿ ನೀಡಿದ್ದೇನೆ: ಸಿಎಂ ಬೊಮ್ಮಾಯಿ
Team Udayavani, Mar 26, 2023, 11:14 AM IST
ಹುಬ್ಬಳ್ಳಿ: ಮೀಸಲಾತಿ ಎನ್ನುವ ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡರೂ ಪರವಾಗಿಲ್ಲ ಅವರಿಗೆ ಜೇನಿನ ಸಿಹಿ ಕೊಡುವುದಾಗಿ ಹೇಳಿದಂತೆ ನಡೆದು ಕೊಂಡಿದ್ದೇನೆ. ಆದರೆ ಪ್ರತಿಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಒಳ ಮೀಸಲಾತಿ ನೀಡುವ ವಿಚಾರ ಮೂವತ್ತು ವರ್ಷಗಳಿಂದ ಹಾಗೆಯೇ ಉಳಿದಿತ್ತು. ಆದರೆ ಕಾಂಗ್ರೆಸ್ ನವರು ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತ್ತು. ಆದರೆ ನಮಗೆ ಬದ್ಧತೆ ಇರುವ ಕಾರಣದಿಂದ ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ ಸಮಿತಿ ರಚಿಸಿ, ಕಾನೂನು ಪ್ರಕಾರ ಮಾಡಿದ್ದೇವೆ. ಅವರಿಗೆ ಮಾಡಿದರುವುದನ್ನು ನಾವು ನಾವು ಮಾಡಿರುವುದಕ್ಕೆ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದ್ಯಾವುದಕ್ಕೂ ಬೆಲೆ ಇಲ್ಲ ಎಂದರು.
ಕಾಂಗ್ರೆಸ್ ಸದಾ ಎಸ್ಸಿ., ಎಸ್ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು. ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಎಂದುಕೊಂಡಿದ್ದರು. ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆ ಕಾರಣ. ಆ ಜನಾಂಗಕ್ಕೆ ನ್ಯಾಯ ಕೊಡಿಸುವವರೆಗೂ ವಿಶ್ರಮಿಸಲ್ಲ. ಜೇನು ಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಮುಸ್ಲಿಂಮರನ್ನು ಇ.ಡಬ್ಲ್ಯು.ಎಸ್. ಸೇರ್ಪಡೆ ಮಾಡಿರುವುದರಿಂದ ಅವರಿಗೆ ಮತ್ತಷ್ಟು ಅನುಕೂಲವಾಗಿದೆ. ಮೊದಲು ಶೇ.4 ಪರ್ಸೆಂಟ್ ಮೀಸಲಾತಿ ಇತ್ತು. ಈಗ ಶೇ. 10 ರಷ್ಟು ಮೀಸಲಾತಿ ಇರುವ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತದೆ. ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ.
ಮಹಾದಾಯಿ ಯೋಜನೆ ಕಾಮಗಾರಿ ಆರಂಭಕ್ಕೆ. ಚುನಾವಣಾ ಪ್ರಕ್ರಿಯೆ ಇದಕ್ಕೆ ತೊಡಕಾಗುವುದಿಲ್ಲ. ನೀತಿ ಸಂಹಿತೆ ಜಾರಿಯಾದ್ರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗುವ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ ಎಂದರು
ಚುನಾವಣೆ ಘೋಷಣೆ ಆದ ನಂತರವೇ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ. ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಚರ್ಚೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.