ಸರ್ಕಾರದ ರಕ್ಷಣೆಗೆ ಸಿಎಂ ಟೆಂಪಲ್ ರನ್: ಶೆಟ್ಟರ್
Team Udayavani, Sep 23, 2018, 6:20 AM IST
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ಕೈ ತಪ್ಪುವ ಭಯದಲ್ಲಿ ದೇವಸ್ಥಾನಗಳನ್ನು ಸುತ್ತುವ ಬದಲು ಆಡಳಿತದತ್ತ ಲಕ್ಷÂ ವಹಿಸಲಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಸಲಹೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವಾಗಲೇ ಜನರ ಆಶೀರ್ವಾದದಿಂದ ನಾನು ಸಿಎಂ ಆಗಿಲ್ಲ. ದೇವರ ಕೃಪೆಯಿಂದ ಆಗಿದ್ದೇನೆ ಎಂದಿದ್ದರು. ಹೀಗಾಗಿ, ದೇವರ ಆಶೀರ್ವಾದ ತಪ್ಪುತ್ತದೆ ಇಲ್ಲವೇ ಅಧಿಕಾರ ಕೈ ತಪ್ಪುತ್ತದೆ ಎಂಬ ಭಯದಿಂದಾಗಿ ಎರಡು ದಿನಕ್ಕೊಮ್ಮೆ ದೇವಸ್ಥಾನಗಳನ್ನು ಸುತ್ತುವರಿಯುವುದನ್ನು ಮುಂದುವರಿಸಿದ್ದಾರೆ. ಸರ್ಕಾರದ ಅಸ್ಥಿರತೆಯಿಂದ ಅವರು ದೇವಸ್ಥಾನ ಸುತ್ತುತ್ತಿದ್ದಾರೆ. ದೇವಸ್ಥಾನಗಳನ್ನು ಸುತ್ತಾಡುವಾಗಲೂ ತಾರತಮ್ಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ದೇವಸ್ಥಾನಗಳಿಗೂ ಸುತ್ತಾಡಲಿ. ಇಲ್ಲಿನ ತಾಲೂಕುಗಳಲ್ಲಿನ ಭೀಕರ ಬರ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಅಧ್ಯಯನ ಮಾಡಲಿ ಎಂದರು.
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ದಂಗೆ ಏಳಿ ಎಂದು ಹೇಳುವ ಮೂಲಕ ಆ ಸ್ಥಾನಕ್ಕೆ ಅನರ್ಹರಾಗಿದ್ದಾರೆ. ಸಿಎಂ ಸ್ಥಾನಕ್ಕೆ ಕಪ್ಪುಚುಕ್ಕೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ಅಸಮಾಧಾನಗೊಂಡು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆ ಸಿಟ್ಟನ್ನು ತೀರಿಸಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇನ್ನು ಆರು ತಿಂಗಳು ಮಾತ್ರ ಕುಮಾರಸ್ವಾಮಿ ಅಧಿಕಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.