ಅನ್ನದಾತರ ಸಂಪೂರ್ಣ ಸಾಲಮನ್ನಾಕ್ಕೆಸಮ್ಮಿಶ್ರ ಸರ್ಕಾರ ಸಿದ್ಧ: ಶಿವಶಂಕರರಡ್ಡಿ
•ಕೃಷಿಕ ಸಮಾಜದ ವಿಚಾರ ಸಂಕಿರಣ ಕಟ್ಟಡ ಉದ್ಘಾಟನೆ•ಬ್ಯಾಂಕ್ ನೋಟಿಸ್‌ಗಳಿಗೆ ಭಯ ಪಡುವ ಅಗತ್ಯವಿಲ್ಲ
Team Udayavani, Jun 17, 2019, 12:35 PM IST
ಹುಬ್ಬಳ್ಳಿ: ವಿಚಾರ ಸಂಕಿರಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಸಮ್ಮಿಶ್ರ ಸರಕಾರ ಸಿದ್ಧವಿದ್ದು, ರೈತರು ಯಾವುದೇ ಕಾರಣಕ್ಕೂ ಬ್ಯಾಂಕ್ ನೋಟಿಸ್‌ಗಳಿಗೆ ಭಯ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರರಡ್ಡಿ ಹೇಳಿದರು.
ಕುಂದಗೋಳ ಎಪಿಎಂಸಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಕೃಷಿಕ ಸಮಾಜದ ವಿಚಾರ ಸಂಕಿರಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್ ನೋಟಿಸ್ ನೀಡುವ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಬಾರದು ಎಂದರು.
ಸರ್ಕಾರ ಪ್ರತಿವರ್ಷ 10 ಸಾವಿರ ಕೋಟಿ ರೂ. ಮನ್ನಾ ಮಾಡಲಿದೆ. ಇದರಿಂದ ಬಡ್ಡಿ ಹೆಚ್ಚಾಗಲಿದೆ ಎನ್ನುವ ಭಯ ರೈತರಿಗೆ ಬೇಡ. ಈ ಬಡ್ಡಿಯನ್ನು ಸರಕಾರವೇ ಭರಿಸಲಿದೆ ಎಂದರು.
ರೈತರು ಬೆಳೆಗೆ ಬೆಲೆ ಕಡಿಮೆಯಾದ ಸಂದರ್ಭದಲ್ಲಿ ಬೆಳೆ ಗೋದಾಮಿನಲ್ಲಿಟ್ಟು ಬೇಕಾದಾಗ ಮಾರಾಟ ಮಾಡಬಹುದು. ಗೋದಾಮು ಬಾಡಿಗೆಯನ್ನು ಸರಕಾರವೇ ಭರಿಸಲಿದೆ. ಇದಕ್ಕಾಗಿ 500 ಕೋಟಿ ರೂ. ಆವರ್ತ ನಿಧಿ ಮೀಸಲಿಡಲಾಗಿದೆ. ದಾಸ್ತಾನು ಮಾಡಿದ ಬೆಳೆ ಮೇಲೆ ರೈತರು ಬ್ಯಾಂಕ್‌ಗಳಿಂದ ಸಾಲ ಪಡೆಯಬಹುದಾಗಿದೆ. ಇದು ದೇಶದಲ್ಲೇ ಮಾದರಿ ಯೋಜನೆಯಾಗಿದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಸಂಬಂಧಿಸಿ ಬೀಜ, ರಸಗೊಬ್ಬರ ಬೇಡಿಕೆಯಂತೆ ದಾಸ್ತಾನು ಮಾಡಲಾಗಿದೆ ಎಂದರು.
ಕೇಂದ್ರ ಸರಕಾರ ಕೇವಲ ಗೋದಿ ಮತ್ತು ಭತ್ತಕ್ಕೆ ಮಾತ್ರ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ಉಳಿದ ಬೆಳೆ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಆದರೆ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಕೃಷಿ ಕ್ಷೇತ್ರದ ಬದಲಾವಣೆಗೆ ಯೋಜನೆ ರೂಪಿಸಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಕೃಷಿ ಯಂತ್ರ ಖರೀದಿಸಲು ಸಾಮಾನ್ಯ ರೈತರಿಗೆ ಸಬ್ಸಿಡಿ ಪ್ರಮಾಣವನ್ನು ಶೇ.50ರಿಂದ 75ಕ್ಕೆ ಹೆಚ್ಚಿಸಲಾಗುವುದು. ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆಯಲ್ಲಿ ಪ್ರತಿ ಎಕರೆಗೆ 4 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು. ಒಟ್ಟು 50 ಸಾವಿರ ಹೆಕ್ಟರ್ ಪ್ರದೇಶಕ್ಕೆ ಈ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.
ಶಾಸಕಿ ಕುಸುಮಾವತಿ ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಬಸವನಗೌಡ ಮಾಲಿಪಾಟೀಲ, ಮಾಜಿ ಅಧ್ಯಕ್ಷ ಒಡಗೂರ ಡಿ.ಎಲ್.ನಾಗರಾಜ, ಉಮೇಶ ಹೆಬಸೂರ, ಅರವಿಂದ ಕಟಗಿ, ಎನ್.ಎನ್. ಪಾಟೀಲ, ಭೀಮಪ್ಪ ಮುಗಳಿ, ರಾಧಿಕಾ ಮೂಸೂರ, ಬೀರಪ್ಪ ಕುರುಬರ, ಎ.ಬಿ. ಉಪ್ಪಿನ, ಪಿ.ಎನ್. ಪಾಟೀಲ, ಸಿ.ಬಿ. ಮೇತ್ರಿ ಇನ್ನಿತರರಿದ್ದರು. ಕೃಷಿ ಇಲಾಖೆಯಿಂದ ಕೃಷಿ ಸಲಕರಣೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.