ಕವಿಸಂಗೆ 5 ಎಕರೆ ಜಾಗ ನೀಡಲು ಬದ್ಧ


Team Udayavani, Jul 21, 2017, 11:53 AM IST

hub1.jpg

ಧಾರವಾಡ: ಕನ್ನಡ ನಾಡು ನುಡಿ ಕಟ್ಟಲು ಶ್ರಮಿಸುತ್ತಿರುವ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಸ್ತರಣೆಗೆ ಅನುಕೂಲವಾಗಲು ಧಾರವಾಡದಲ್ಲಿ 5 ಎಕರೆ ಜಾಗ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಕವಿಸಂನಲ್ಲಿ ಹಮ್ಮಿಕೊಂಡಿದ್ದ ಕವಿಸಂನ 128ನೇ ಸ್ಥಾಪನಾ ದಿನಾಚರಣೆ, ಕವಿಸಂ ಅಧ್ಯಕ್ಷರಾಗಿ ಪಾಪು-50 ಮತ್ತು ನಾಡೋಜ ಪಾಪು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಕನ್ನಡದ ನಾಡು-ನುಡಿ ಮತ್ತು ಜಲ ರಕ್ಷಣೆಗೆ ಅನೇಕ ವರ್ಷಗಳಿಂದ ಅನೇಕ ಕನ್ನಡ ಸಂಘ-ಸಂಸ್ಥೆಗಳು ಕೆಲಸ ಮಾಡಿಕೊಂಡು ಬಂದಿವೆ. ಅವರೆಲ್ಲರ ಬೆಂಬಲಕ್ಕೂ ಸರ್ಕಾರವಿದೆ. ಇತಿಹಾಸ ತಿಳಿಯದವರು ಇತಿಹಾಸ ಬರೆಯಲಾರರು. ಕನ್ನಡ ಚರಿತ್ರೆಯಲ್ಲಿನ ವಿಚಾರಗಳನ್ನು ತಿಳಿದುಕೊಂಡು ಭವಿಷ್ಯತ್ತಿನಲ್ಲಿ ನಾಡ ಕಟ್ಟುವ ಕೆಲಸ ಮಾಡಬೇಕಿದೆ.

ಹೀಗಾಗಿ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಗತ್ಯವಾದ 5 ಎಕರೆ ಜಾಗ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ. ನಿಮ್ಮ ವ್ಯಾಪ್ತಿಯಲ್ಲಿದ್ದರೆ ನೀವೇ ಕೊಟ್ಟು ಬಿಡಿ ಇಲ್ಲವಾದರೆ, ಸರ್ಕಾರಕ್ಕೆ ಈ ಕುರಿತು ಬರೆಯಿರಿ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. 

ಪಾಪುಗಟ್ಟಿ ಧ್ವನಿ: ನಾಡೋಜ ಡಾ|ಪಾಟೀಲ ಪುಟ್ಟಪ್ಪ ಅವರು ತಮ್ಮ 98ನೇ ವಯಸ್ಸಿನಲ್ಲಿಯೂ ಕನ್ನಡಕ್ಕಾಗಿ ಶ್ರಮಿಸುತ್ತಿರುವುದನ್ನು ನೋಡಿದರೆ ಹೆಮ್ಮೆ ಎನಿಸುತ್ತದೆ. ಅವರು ಕನ್ನಡದ ವಿಚಾರದಲ್ಲಿ ಗಟ್ಟಿ ಧ್ವನಿಯಾಗಿದ್ದಾರೆ. 60ಸಾವಿರ ಪುಟಗಳಷ್ಟು ಸಾಹಿತ್ಯ ಬರೆದು, ಯಶಸ್ವಿ ಪತ್ರಕರ್ತರಾಗಿ, ಗಾಂಧಿವಾದಿಯಾಗಿ ಕೆಲಸ ಮಾಡಿದ್ದು ಎಲ್ಲ ಕನ್ನಡಿಗರು ಹೆಮ್ಮೆ ಪಡುವ ವಿಚಾರ.

ಅವರ ಮಾರ್ಗದರ್ಶನ ಸರ್ಕಾರಕ್ಕೆ ಇದ್ದೇ ಇದೆ ಎಂದರು. ಬುದ್ಧ, ಬಸವ, ಅಂಬೇಡ್ಕರ್‌ ಅವರಂತಹ ಮಹನೀಯರು ಈ ನೆಲದಲ್ಲಿ ಹಾಕಿದ ಗಟ್ಟಿ ಬೀಜಗಳು ಇಂದಿಗೂ ಇದನ್ನು ಸಾಮರಸ್ಯದ ನಾಡಾಗಿರುವಂತೆ ನೋಡಿಕೊಂಡಿವೆ. ಇಲ್ಲಿ ಕೋಮುವಾದಿಗಳು ವಿಷ ಬೀಜ ಬಿತ್ತುತ್ತಿದ್ದಾರೆ. ಅದಕ್ಕೆ ಬಸವಣ್ಣನ ನಾಡಿನಲ್ಲಿ ಅವಕಾಶವಿಲ್ಲ ಎಂದರು. 

ಕವಿಸಂ ಸಾಧನೆ: ಸ್ವಾತಂತ್ರ ಮತ್ತು ನಾಡಿನ ಏಕೀಕರಣದ ಪೂರ್ವದಲ್ಲಿಯೇ 128 ವರ್ಷಗಳ ಹಿಂದೆಯೇ ಧಾರವಾಡದಲ್ಲಿ ಕನ್ನಡವನ್ನು  ಕಟ್ಟುವುದಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಹುಟ್ಟಿಕೊಂಡಿದ್ದೇ ಒಂದು ವಿಸ್ಮಯ. ಮುಂಬೈ ಕರ್ನಾಟಕ ಭಾಗದಲ್ಲಿ ಮರಾಠಿ ಪ್ರಾಬಲ್ಯದಿಂದ ಕುಗ್ಗಿ ಹೋಗಿದ್ದ ಕನ್ನಡವನ್ನು ಈ ಸಂಸ್ಥೆ ಕಟ್ಟಿ ಬೆಳೆಸಿರುವುದು ಹೆಮ್ಮೆಯ ವಿಚಾರ ಎಂದು ಸಿದ್ದರಾಮಯ್ಯ ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಧನೆಯನ್ನು ಕೊಂಡಾಡಿದರು. 

ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ, ಕರ್ನಾಟಕ ವಿದ್ಯಾವರ್ಧಕ ಸಂಘ ಮತ್ತು ನಾಡೋಜ ಡಾ|ಪಾಟೀಲ ಪುಟ್ಟಪ್ಪ ಅವರು ಕನ್ನಡ ನಾಡು ನುಡಿಗೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಅಂತಹ ಸಂಘ ಇನ್ನಷ್ಟು ಬೆಳೆಯಲಿ ಎಂದು ಆಶಿಸಿದರು. ನಾಡೋಜ ಡಾ| ಪಾಟೀಲ ಪುಟ್ಟಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು ಕನ್ನಡಕ್ಕಾಗಿ ಏನೇ ಕೇಳಿದರೂ ಇಲ್ಲ ಎನ್ನುವುದಿಲ್ಲ.

ಹೀಗಾಗಿ ಅವರು ಬೆಳವಡಿ ಮಲ್ಲಮ್ಮನ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ವಿದ್ಯಾವರ್ಧಕ ಸಂಘದ ಕಾರ್ಯಕ್ಷೇತ್ರ ವಿಸ್ತರಣೆಗೆ ಅಗತ್ಯವಾದ 5 ಎಕರೆ ಜಾಗವನ್ನು ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ ನೀಡಬೇಕೆಂದು ಮನವಿ ಮಾಡಿದರು. ಮುಂಡರಗಿ ತೋಂಟದಾರ್ಯಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ  ಸ್ವಾಮೀಜಿ, ಮನುಗುಂಡಿಯ ಶ್ರೀ ಬಸವಾನಂದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಜೆಡಿಎಸ್‌ ಮುಖಂಡ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಸ್‌. ಶಿವಳ್ಳಿ, ಪ್ರಸಾದ್‌ ಅಬ್ಬಯ್ಯ,ವೀರಣ್ಣ ಮತ್ತಿಕಟ್ಟಿ ಮತ್ತಿತರರಿದ್ದರು. 

ಸಾಹಿತಿ ಮೋಹನ ನಾಗಮ್ಮನವರ ಪ್ರಾಸ್ತಾವಿಕ ಮಾತನಾಡಿ, ಕವಿಸಂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗ 1ಕೋಟಿ ರೂ. ನೀಡಿದೆ. ಆದರೆ ಅದನ್ನು ಕಟ್ಟಿ ಬೆಳೆಸಲು 5 ಕೋಟಿ ರೂ.ಗಳನ್ನು ನೀಡಬೇಕು ಎಂದರು. ಕೃಷ್ಣಾ ಜೋಷಿ ಸ್ವಾಗತಿಸಿದರು. ಶಂಕರ ಹಲಗತ್ತಿ ವಂದಿಸಿದರು. ಬಸವಪ್ರಭು ಹೊಸಕೇರಿ ಸೇರಿದಂತೆ ಕವಿಸಂ ಪದಾಧಿಕಾರಿಗಳು ಇದ್ದರು. ಹೆಬ್ಬಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಬಸವರಾಜ ಶಿಗ್ಗಾಂವ ಮತ್ತು ತಂಡದವರು ಹೋರಾಟದ ಪದಗಳನ್ನು ಹಾಡಿದರು. 

ಟಾಪ್ ನ್ಯೂಸ್

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.