ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ
Team Udayavani, Dec 29, 2019, 10:43 AM IST
ಹುಬ್ಬಳ್ಳಿ: ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡುವಂತೆ ಸರಕಾರಿ ಶಾಲೆಯ ಶಿಕ್ಷಕರು ಮಕ್ಕಳನ್ನು ಅಣಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಹಳೇಹುಬ್ಬಳ್ಳಿ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರ 120ನೇ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಖಾಸಗಿ ಶಾಲೆಗಳ ಸ್ಪರ್ಧೆಗಳ ಮುಂದೆ ಸರಕಾರಿ ಶಾಲೆಗಳು ಹಿನ್ನಡೆ ಅನುಭವಿಸುತ್ತಿವೆ. ಇಂತಹ ಸಮಯದಲ್ಲೂ ಸರಕಾರಿ ಶಾಲೆ ಯಾವುದಕ್ಕೂ ಕಡಿಮೆಇಲ್ಲ ಎನ್ನುವಂತೆ ನಡೆಯುತ್ತಿದ್ದು, ಸರಕಾರಿ ನಂ.1 ಶಾಲೆ ಸದಾ ನಂ.1 ಶಾಲೆಯಾಗಿಯೇ ಹೊರಹೊಮ್ಮಬೇಕು. ಸದ್ಗುರು ಗುರುನಾಥಾರೂಢರು ಅಧ್ಯಯನ ಮಾಡಿರುವ ಶಾಲೆ ಎನ್ನುವ ಹೆಮ್ಮೆ ಎಲ್ಲರಿಗೂ ಇದ್ದು, ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸೋಣ ಎಂದರು. ಉತ್ತರ ಕರ್ನಾಟಕ ಎಂದರೆ ಕೀಳುಭಾವನೆ ಇದ್ದು, ಇದರಿಂದಲೇ ಈ ಭಾಗದಲ್ಲಿ ಸರಕಾರಿ ಶಾಲೆಗಳಿಗೆ ಕೊರತೆ ಇದೆ. ಅದೇ ದಕ್ಷಿಣ ಭಾಗದಲ್ಲಿ ಅತೀ ಹೆಚ್ಚು ಸರಕಾರಿ ಶಾಲೆಗಳಿರುವುದನ್ನು ನಾವು ನೋಡಿದ್ದೆವೆ. ಈ ಭಾಗದ ಮಠಮಾನ್ಯಗಳು ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ಎಲ್ಲರಿಗೂ ಶಿಕ್ಷಣ ಸಿಗುವಂತಾಗಲಿ ಎಂದು ಮುಂದೆ ಬಂದು ಹಲವಾರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ಹೇಳಿದರು.
ಖಾಸಗಿ ಟಿವಿ ವಾಹಿನಿ ಕಾರ್ಯವೊಂದರಲ್ಲಿ ಸ್ಪರ್ಧಿಸಿದ್ದ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರುಬಿನಾ ನದಾಫ್ ಹಾಡು ಹಾಡಿದಳು. ನಂತರ ಶಾಲೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಹಲವರನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿಜ್ಞಾನ ಪ್ರಯೋಗಾಲಯ, ಸಿಸಿ ಕ್ಯಾಮರಾ, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಶಾಲೆ ನಡೆದು ಬಂದ ದಾರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ಮುಖೋಪಾಧ್ಯಾಯ ಎಚ್.ಎಂ. ಕುಂದರಗಿ ಪ್ರಾಸ್ತಾವಿಕ ಮಾತನಾಡಿದರು. ರುದ್ರಾಕ್ಷಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ತಾಪಂ ಅಧ್ಯಕ್ಷೆ ಚನ್ನಮ್ಮ ಗೋರ್ಲ, ಬಸಪ್ಪ ಬೀರಣ್ಣವರ, ಡಾ| ಪಾಂಡುರಂಗ ಪಾಟೀಲ, ರಾಧಾಬಾಯಿ ಸಫಾರೆ, ಪ್ರೇಮನಾಥ ಚಿಕ್ಕತುಂಬಳ, ರವಿ ಬಂಕಾಪುರ, ಬಿಇಒ ಶ್ರೀಶೈಲ ಕರಿಕಟ್ಟಿ, ತೋಟಪ್ಪ ನಿಡಗುಂದಿ, ಎಲ್.ಬಿ.ಚುಳಕಿ, ಇನ್ಸ್‌ಪೆಕ್ಟರ್ ಮಾರುತಿ ಗುಳ್ಳಾರಿ, ನಾರಾಯಣ ಪಾಂಡುರಂಗಿ, ಎ.ಎ. ಮಿರ್ಜಿ, ಎಂ.ಎಸ್. ಶಿವಳ್ಳಿಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.