ಮಳೆಗಾಲಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ
Team Udayavani, May 19, 2020, 10:55 AM IST
ಹುಬ್ಬಳ್ಳಿ: ಅವಳಿ ನಗರದಲ್ಲಿ ಲೋಕೋಪಯೋಗಿ ಇಲಾಖೆ, ಸಿಆರ್‌ಎಫ್ ಹಾಗೂ ವಿಶೇಷ ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ರಾಜೀವ ನಗರದಲ್ಲಿ ಲೋಕೋಪಯೋಗಿ ಇಲಾಖೆ 5 ಕೋಟಿ ರೂ. ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಸರಕಾರ ರಚನೆಯಾದ ಹತ್ತು ತಿಂಗಳಲ್ಲಿ ಅವಳಿ ನಗರದ ಮುಖ್ಯ ಹಾಗೂ ಒಳರಸ್ತೆಗಳನ್ನು ನಿರ್ಮಿಸಿ ನಗರದ ಚಿತ್ರಣ ಬದಲು ಮಾಡುವ ಆಶಯ ಸರಕಾರಕ್ಕೆ ಇತ್ತು. ಕೋವಿಡ್ ದಿಂದಾಗಿ ತಾತ್ಕಾಲಿಕವಾಗಿ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಲಾಕ್‌ಡೌನ್ ಸಡಿಲವಾದ ನಂತರ ಈ ಕಾಮಗಾರಿಗಳಿಗೆ ಮರು ಚಾಲನೆ ನೀಡಲಾಗಿದೆ ಎಂದರು.
ಲೋಕೋಪಯೋಗಿ ಇಲಾಖೆಯ 35 ಕೋಟಿ ಅನುದಾನದಲ್ಲಿ ಹುಬ್ಬಳ್ಳಿ ನಗರದ ಪ್ರಮುಖ ಪ್ರದೇಶಗಳ ಒಳ ರಸ್ತೆಗಳನ್ನು ಮುಖ್ಯ ರಸ್ತೆಗೆ ಸಂಪರ್ಕಿಸುವ ಕಾರ್ಯ ಮಾಡಲಾಗುತ್ತಿದೆ. ನೆರೆ ಹಾವಳಿಯಲ್ಲಿ ಹಾನಿಯಾದ ಸೇತುವೆಗಳ ನಿರ್ಮಾಣಕ್ಕಾಗಿ 8 ಕೋಟಿ ವಿಶೇಷ ಅನುದಾನ ಸಹ ನೀಡಲಾಗಿದೆ. ಇದರಲ್ಲಿ 3 ಸೇತುವೆಗಳ ಕಾರ್ಯ ಪೂರ್ಣಗೊಂಡಿದೆ. ವಾರ್ಡ್ ನಂಬರ್ 35ರಲ್ಲಿ 15 ಕೋಟಿ ವೆಚ್ಚದಲ್ಲಿ ಎಲ್ಲಾ ರಸ್ತೆಗಳ ನಿರ್ಮಾಣ, ಡಾಂಬರೀಕರಣ ಹಾಗೂ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಲಾಗಿದೆ. ನಗರವನ್ನು ಸಂಪರ್ಕಿಸುವ ಮುಖ್ಯ ರಸ್ತೆಗಳ ಅಗಲೀಕರಣ, ವರ್ತುಲ ರಸ್ತೆ ಕಾಮಗಾರಿಗಳು ಬಹುತೇಕ ಮುಗಿಯುವ ಹಂತಕ್ಕೆ ಬಂದಿವೆ. ಫ್ಲೆ$çಓವರ್ ಹಾಗೂ ಓವರ್ ಬ್ರಿಡ್ಜ್ಗಳ ನಿರ್ಮಾಣ ಬಾಕಿ ಇದೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿ.ವಿ. ಪಾಟೀಲ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರಲಿ, ಗುತ್ತಿಗೆದಾರ ಎಂ.ಬಿ. ಕಲ್ಲೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.