ವೃತ್ತಿ ಘನತೆ ಮರೆತ ಶಿಕ್ಷಕರನ್ನು ಸಹಿಸಲ್ಲ 


Team Udayavani, Sep 20, 2018, 5:36 PM IST

20-sepctember-22.jpg

ಧಾರವಾಡ: ವೃತ್ತಿಯ ಘನತೆಯನ್ನು ಮರೆತು ದಕ್ಷತೆಯಿಲ್ಲದೇ ಜವಾಬ್ದಾರಿ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರುವ ಮುಖ್ಯ ಶಿಕ್ಷಕರನ್ನು ಇಲಾಖೆ ಎಂದಿಗೂ ಸಹಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಎಚ್ಚರಿಸಿದರು.

ಇಲ್ಲಿಯ ಡಯಟ್‌ ಸಭಾಭವನದಲ್ಲಿ ಬೆಳಗಾವಿ ವಿಭಾಗ ಮಟ್ಟದ 9 ಜಿಲ್ಲೆಗಳ ಸರಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ಪತ್ರಾಂಕಿತ ಗ್ರುಪ್‌-ಬಿ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ ಮೊದಲ ವರ್ಗಾವಣೆ ಆದೇಶವನ್ನು ಮುಖ್ಯಾಧ್ಯಾಪಕ ಮಹಾದೇವ ಜಿ. ನಾಯ್ಕ ಅವರಿಗೆ ವಿತರಿಸಿ ಅವರು ಮಾತನಾಡಿದರು.

ಜನಸಾಮಾನ್ಯರ ಮಕ್ಕಳಿಗೆ ಜ್ಞಾನ ದಾಸೋಹ ನೀಡುವ ಅತ್ಯಂತ ಮಹತ್ವದ ತಾಣಗಳಾಗಿರುವ ಸರಕಾರಿ ಶಾಲೆಗಳು ಉಳಿದು ಬೆಳೆದು ಬರಬೇಕಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವ್ಯಾಪಕ ಪೈಪೋಟಿಯನ್ನು ನಾವಿಂದು ಎದುರಿಸುತ್ತಿದ್ದೇವೆ. ಸರಕಾರಿ ಶಾಲೆಗಳ ವಿಕಾಸಕ್ಕೆ ಮುಖ್ಯಾಧ್ಯಾಪಕರು ನಿರಂತರ ಕಾಳಜಿ ವಹಿಸಬೇಕಿದೆ. ಸರಕಾರಿ ಶಾಲೆಗಳನ್ನು ಬೆಳೆಸಲು ಶ್ರಮಿಸದೇ ತಮ್ಮ ಸಮೀಪದಲ್ಲಿಯೇ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿಸಿ ಎನ್‌ಒಸಿ ನೀಡುವ ಮುಖ್ಯಾಧ್ಯಾಪಕರ ಮೇಲೆ ಇಲಾಖೆ ಶಿಸ್ತು ಕ್ರಮ ಕೈಕೊಳ್ಳುತ್ತದೆ ಎಂದರು.

ಇಲಾಖೆಯ ಜಂಟಿ ನಿರ್ದೇಶಕ ಡಾ|ಬಿ. ಕೆ.ಎಸ್‌.ವರ್ಧನ್‌ ಮಾತನಾಡಿ, ಶಾಲೆಯನ್ನು ಸಮರ್ಥವಾಗಿ ಮುನ್ನಡೆಸಿದ ಹಿರಿಮೆ ಎಲ್ಲ ಮುಖ್ಯಾಧ್ಯಾಪಕರಲ್ಲಿ ಇರಬೇಕಾಗುತ್ತದೆ. ಎಲ್ಲ ಸಹ ಶಿಕ್ಷಕ-ಶಿಕ್ಷಕಿಯರು ಬೋಧನೆಗೆ ತಕ್ಕುದಾದ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಗತಿ ಪ್ರವೇಶ ಮಾಡದಂತೆ ಮೇಲ್ವಿಚಾರಣೆ ಮಾಡಬೇಕು ಎಂದರು.

ಇಲಾಖೆಯ ಜಂಟಿ ನಿರ್ದೇಶಕ ಡಾ|ಬಿ.ಕೆ.ಎಸ್‌.ವರ್ಧನ್‌, ಉಪ ನಿರ್ದೇಶಕ ಮೃತ್ಯುಂಜಯ ಕುಂದಗೋಳ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಬಮ್ಮೊಕ್ಕನವರ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ, ಕಿರಿಯ ಸಂಶೋಧನಾ ಅಧಿಕಾರಿ ಮಹಾದೇವಿ ಮಾಡಲಗೇರಿ, ಇ-ಆಡಳಿತ ಕಾರ್ಯಕ್ರಮಾಧಿಕಾರಿ ಶಾಂತಾ ಮೀಸಿ, ಹಿರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪುಂಡಲೀಕ ಬಾರಕೇರ ಇದ್ದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.