ಕಾಮಗಾರಿಗಳಿಗೆ ಷರತ್ತುಬದ್ಧ ಅನುಮತಿ
Team Udayavani, Apr 18, 2020, 11:29 AM IST
ಧಾರವಾಡ: ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎಂಬ ಆಶಯದಲ್ಲಿ ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿ ಆರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು, ನಿರ್ಮಿತಿ ಕೇಂದ್ರ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಿವಿಲ್ ಕಾಮಗಾರಿ ಇಲಾಖೆಗಳ ಇಂಜಿನಿಯರ್‌ಗಳ ಸಭೆಯಲ್ಲಿ ಅವರು ಮಾತನಾಡಿದರು.
ಇಂಜಿನಿಯರ್‌ಗಳ ಸಭೆ ; ಗುತ್ತಿಗೆದಾರರು ಕಾರ್ಮಿಕರಿಗೆ ವಸತಿ, ಕ್ಯಾಂಪ್‌ಗ್ಳನ್ನು ನಿರ್ಮಿಸಿ ಅಲ್ಲಿಯೇ ಊಟ, ಉಪಾಹಾರ, ವಸತಿ ಒದಗಿಸಬೇಕು. ಪ್ರತಿದಿನ ಕಾರ್ಮಿಕರು ತಮ್ಮ ಸ್ಥಳಗಳಿಗೆ ಸಂಚರಿಸಲು ಅವಕಾಶ ಇರಲ್ಲ. ನಿರ್ಮಾಣ ಕಾಮಗಾರಿಗಳನ್ನು ಅನುಮತಿ ಪಡೆದು ಕೈಗೊಳ್ಳಬಹುದು. ಸಾಮಾಜಿಕ ಅಂತರ, ಶುಚಿತ್ವ ಕಾಪಾಡಬೇಕು. ಪ್ಲಂಬರ್‌ಗಳು, ಮೋಟಾರ್ ಮೆಕ್ಯಾನಿಕ್‌ಗಳು ಹಾಗೂ ಪೂರಕ ಚಟುವಟಿಕೆಗಳ ಕಾರ್ಮಿಕರಿಗೂ ಈ ವಿನಾಯಿತಿ ಅನ್ವಯಿಸುತ್ತದೆ ಎಂದರು.
ನವಲಗುಂದದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಮಲಪ್ರಭಾ ಬಲದಂಡೆ ಕಾಲುವೆಯು ಬೆಳಗಾವಿ, ಧಾರವಾಡ, ಗದಗ ಹಾಗೂ ಭಾಗಶಃ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಮುಂಗಾರು ಮಳೆ ಆರಂಭಕ್ಕೂ ಮುನ್ನ ಇಲ್ಲಿನ ಕಾಮಗಾರಿಗಳು ನಡೆಯಬೇಕು. ಗುತ್ತಿಗೆದಾರರು ಕಾರ್ಮಿಕರಿಗೆ ಕ್ಯಾಂಪ್‌ಗ್ಳಲ್ಲಿ ಎಲ್ಲ ಸೌಲಭ್ಯ ಒದಗಿಸುವ ಷರತ್ತಿನೊಂದಿಗೆ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದರು.
ಇದಲ್ಲದೇ ತಮ್ಮ ಕ್ಷೇತ್ರದ ಪಡೇಸೂರು, ಶಾನವಾಡ ಸೇರಿದಂತೆ ವಿವಿಧ ಗ್ರಾಮಗಳಿಗೆ ಹೆಗ್ಗಡದೇವನಕೋಟೆ ತಾಲೂಕಿಗೆ ಗುಳೆ ಹೋಗಿದ್ದ ಹಲವು ಜನ ಮರಳಿ ಬಂದಿದ್ದು, ಅಂತಹ ಜನರ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಮಿಕ ಇಲಾಖೆಯಿಂದ ಆರೋಗ್ಯ ತಪಾಸಣೆ ಮಾಡಬೇಕೆಂದು ಸೂಚಿಸಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ವಲಸೆ ಕಾರ್ಮಿಕರು ಹಾಗೂ ಇಟ್ಟಿಗೆ ಭಟ್ಟಿ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಬೀಡು ಬಿಟ್ಟಿರುವ ಕಾರ್ಮಿಕರಿಗೆ ಆಹಾರಕಿಟ್ ವಿತರಣೆ ಮುಂದುವರಿಯಬೇಕು ಎಂದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಎಸ್‌ಡಿಆರ್‌ಎಫ್ ನಿ ಧಿಯಡಿ 436 ವಲಸೆ ಕಾರ್ಮಿಕರಿಗೆ ಸರ್ಕಾರದ ಹಾಸ್ಟೇಲ್‌ಗಳಲ್ಲಿ ವಸತಿ ಕಲ್ಪಿಸಿ ಊಟ, ಉಪಾಹಾರ, ಬಟ್ಟೆ ನೀಡಲಾಗಿದೆ. ಇಟ್ಟಿಗೆಭಟ್ಟಿ ಕಾರ್ಮಿಕರಿಗೆ ಸುಮಾರು 3,000 ಆಹಾರ ಕಿಟ್ ವಿತರಿಸಲಾಗಿದೆ ಎಂದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ್ ಮಾತನಾಡಿ, ಕಳೆದ ಸಾಲಿನಲ್ಲಿ ಕಾಮಗಾರಿ ಮುಂದುವರಿಸಲಾಗಿದೆ. ಲಾಕ್‌ಡೌನ್ ನಿಯಮಗಳು ವ್ಯತ್ಯಯವಾಗದಂತೆ ಗ್ರಾಮೀಣ ಭಾಗದಲ್ಲಿ ನರೇಗಾ ಚಟುವಟಿಕೆಗಳು ನಡೆಯುತ್ತಿವೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿ ಕೈಗೊಳ್ಳಲು ಅನುಮತಿಗಾಗಿ ಕಾಯುತ್ತಿದ್ದೇವೆ. ಶೀಘ್ರದಲ್ಲೇ ಈ ಕಾರ್ಯಗಳು ಆರಂಭವಾಗಲಿವೆ ಎಂದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ಜಲಮಂಡಳಿ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ವಿವಿಧ ಇಲಾಖೆಗಳ ಇಂಜಿನಿಯರ್‌ಗಳು ಇದ್ದರು.
ಎಪಿಎಂಸಿ ನಿಯಂತ್ರಣ ಕ್ರಮ ಬಿಗಿಗೊಳಿಸಲು ಸೂಚನೆ : ರೈತರು, ವ್ಯಾಪಾರಸ್ಥರು ಹಾಗೂ ಗ್ರಾಹಕರ ಹಿತ ಗಮನ ದಲ್ಲಿಟ್ಟುಕೊಂಡುಕೃಷಿ ಮಾರುಕಟ್ಟೆ ಚಟುವಟಿಕೆ ಕೈಗೊಳ್ಳಲು ಸರ್ಕಾರ ಅವಕಾಶ ನೀಡಿದೆ. ಇದನ್ನು ದುರುಪಯೋಗ ಪಡಿಸಿಕೊಂಡರೆ ಅಂತಹ ವರ್ತಕರು ಹಾಗೂ ಚಿಲ್ಲರೆ ವ್ಯಾಪಾರಿಗಳ ಲೈಸೆನ್ಸ್ ರದ್ದುಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಎಪಿಎಂಸಿ ವರ್ತಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಎಪಿಎಂಸಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ದಿನವಿಡೀ ವ್ಯಾಪಾರ ಚಟುವಟಿಕೆ ನಡೆಸಬಹುದು. ನೆರೆ ರಾಜ್ಯದವರೂ ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಅವಕಾಶವಿದೆ. ಮೆಣಸಿನಕಾಯಿ ಹೊರತುಪಡಿಸಿ ಎಲ್ಲ ಕೃಷಿ ಉತ್ಪನ್ನಗಳ ಆನ್‌ಲೈನ್ ಟೆಂಡರ್ ಕಾರ್ಯ ನಡೆದಿದೆ. ಈ ಅವಕಾಶ ದುರುಪಯೋಗ ಮಾಡಿಕೊಂಡು ಅಶಿಸ್ತಿನಿಂದ ವರ್ತಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಎಪಿಎಂಸಿ ವರ್ತಕರು ಮಾತನಾಡಿ, ಜಿಲ್ಲೆಯಲ್ಲಿ ಮೆಣಸಿನಕಾಯಿ ಫಸಲು ಬಂದಿದ್ದು, ಜಿಲ್ಲೆಯ ರೈತರಿಗೆ ತಮ್ಮ ಉತ್ಪನ್ನ ಮಾರಾಟಕ್ಕೆ ಎರಡು ವಾರಗಳ ಕಾಲ ಅವಕಾಶ ನೀಡಿ ನಂತರ ನೆರೆ ರಾಜ್ಯಗಳ ಮೆಣಸಿನಕಾಯಿ ಉತ್ಪನ್ನ ಆಮದು ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ತಡಸಿನಕೊಪ್ಪದ ಬಳಿ ಐಐಐಟಿ ಕಾಮಗಾರಿ ಸ್ಥಗಿತವಾಗಿದೆ. ಆದರೆ ಕಾರ್ಮಿಕರು ಅಲ್ಲಿಯೇ ಇದ್ದಾರೆ. ಅಂತಹ ಕಡೆಗಳಲ್ಲಿ ಕೆಲಸಗಳನ್ನು ಪುನರಾರಂಭಿಸಬಹುದು. ಲಾಕ್‌ಡೌನ್ ನಿಯಮಗಳು ಉಲ್ಲಂಘನೆಯಾಗದಂತೆ ನರೇಗಾ ಯೋಜನೆಯಡಿ ವೈಯಕ್ತಿಕ ಚಟುವಟಿಕೆಗಳು ನಡೆಯುತ್ತಿವೆ. ಅದೇ ರೀತಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಕಾರ್ಯ ಕೈಗೊಳ್ಳಬಹುದು. – ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.