ಎಪಿಎಂಸಿ ತಾತ್ಕಾಲಿಕ ವಿಕೇಂದ್ರೀಕರಣಕ್ಕೆ ಕಾಂಗ್ರೆಸ್‌ ಮನವಿ


Team Udayavani, Apr 29, 2020, 2:26 PM IST

ಎಪಿಎಂಸಿ ತಾತ್ಕಾಲಿಕ ವಿಕೇಂದ್ರೀಕರಣಕ್ಕೆ ಕಾಂಗ್ರೆಸ್‌ ಮನವಿ

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರೆಯಲು, ಎಪಿಎಂಸಿಗಳಲ್ಲಿನ ಜನದಟ್ಟಣೆ ಕುಗ್ಗಿಸಲು, ತಾತ್ಕಾಲಿಕವಾಗಿ ಮಾರುಕಟ್ಟೆ ವಿಕೇಂದ್ರೀಕರಣ ವ್ಯವಸ್ಥೆ ಕೈಗೊಳ್ಳಬೇಕೆಂದು ಕೆಪಿಸಿಸಿ ಕೋವಿಡ್‌ -19 ಕಾರ್ಯಪಡೆ ಜಿಲ್ಲಾ ಘಟಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ತೆರಳಿದ್ದ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಮಹಾನಗರ ಜಿಲ್ಲಾ ಕಾರ್ಯಪಡೆ ಅಧ್ಯಕ್ಷರಾದ ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ತು ಮಾಜಿ ಸದಸ್ಯ ನಾಗರಾಜ ಛಬ್ಬಿ, ಕಾಂಗ್ರೆಸ್‌ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಅಲ್ತಾಫ್‌ ಹಳ್ಳೂರು, ಅನಿಲಕುಮಾರ ಪಾಟೀಲ ಇನ್ನಿತರ ಮುಖಂಡರು ಮನವಿ ಸಲ್ಲಿಸಿದರು.

ಹುಬ್ಬಳ್ಳಿ ಎಪಿಎಂಸಿಗೆ ಪ್ರತಿನಿತ್ಯ 2500-3000 ವರೆಗೆ ರೈತರು, ದಲ್ಲಾಳಿಗಳು, ವ್ಯಾಪಾರಸ್ಥರು, ಗ್ರಾಹಕರು ಇನ್ನಿತರರು ಆಗಮಿಸುತ್ತಿದ್ದಾರೆ. ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿದೆ. ಇದರಿಂದ  ಕೋವಿಡ್ 19 ವೈರಸ್‌ ಹರಡುವಿಕೆ ತಡೆ ಅಸಾಧ್ಯವಾಗಲಿದೆ. ಪೊಲೀಸರ ಆತಂಕದಲ್ಲಿ ಕೆಲ ರೈತರು ಸಿಕ್ಕ ಬೆಲೆಗೆ ತಮ್ಮ ಉತ್ಪನ್ನ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಲಾಕ್‌ಡೌನ್‌ನಂಥ ಸಂಕಷ್ಟದ ಸಮಯದಲ್ಲಿ ರೈತರಿಗೆ ಯೋಗ್ಯ ಬೆಲೆ ಸಿಗದೇ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಡುವಂತಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ರೈತರ ಬೆಳೆಗೂ ನ್ಯಾಯಯುತ ಬೆಲೆ ಸಿಗಬೇಕೆಂದರೆ ಅಮರಗೋಳ ಎಪಿಎಂಸಿಯನ್ನು ತಾತ್ಕಾಲಿಕವಾಗಿ ವಿಭಜಿಸಿ ಹುಬ್ಬಳ್ಳಿ ಹೊರವಲಯದ ಟ್ರಕ್‌ ಟರ್ಮಿನಲ್ಸ್‌ಗಳಲ್ಲಿ ಮಾರುಕಟ್ಟೆಗೆ ಅವಕಾಶ ನೀಡಿದರೆ ಕುಂದಗೋಳ, ಕಲಘಟಗಿ, ಅಳ್ನಾವರ ಹುಬ್ಬಳ್ಳಿ ಸುತ್ತಲಿನ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಅಮರಗೋಳ ಎಪಿಎಂಸಿಯಲ್ಲಿ ಧಾರವಾಡ, ನವಲಗುಂದ, ಅಣ್ಣಗೇರಿ, ಗಾಮನಗಟ್ಟಿ ಸುತ್ತಲಿನ ಭಾಗದ ರೈತರಿಗೆ ಅವಕಾಶ ನೀಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಜನದಟ್ಟಣೆಯೂ ನಿವಾರಣೆಯಾಗಲಿದ್ದು ರೈತರ ಉತ್ಪನ್ನಗಳಿಗೂ ಯೋಗ್ಯ ಬೆಲೆ ದೊರೆಯುವಂತಾಗಲಿದೆ ಎಂದು ತಿಳಿಸಿದರು.

ಈ ಕುರಿತು ಎಪಿಎಂಸಿ ಅಧ್ಯಕ್ಷರು, ಕಾರ್ಯದರ್ಶಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಸಾಧ್ಯವಾದಲ್ಲಿ ಇನ್ನೊಂದು ಯೋಗ್ಯ ಸ್ಥಳದಲ್ಲಿ ಮಾರುಕಟ್ಟೆಗೆ ಅವಕಾಶ ನೀಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು. ಅಲ್ಲದೇ ರೈತರ ಇನ್ನಿತರೆ ಸಮಸ್ಯೆಗಳಾದ ಹತ್ತಿ, ಕಾಳು ಖರೀದಿ ವಿಳಂಬ ಹಾಗೂ ಬೀಜ-ರಸಗೊಬ್ಬರ ವಿತರಣೆ ಸೇರಿದಂತೆ ರೈತರ ಇನ್ನಿತರ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರವೇ ರೈತರ ಸಮ್ಮುಖದಲ್ಲಿ ಕೃಷಿ ಮತ್ತು ತೋಟಗಾರಿಕೆ ಸಚಿವರ ಸಭೆ ನಡೆಸುವಂತೆ ಸಚಿವ ಜಗದೀಶ ಶೆಟ್ಟರ ಅವರಿಗೆ ಒತ್ತಾಯಿಸಲಾಯಿತು.

ಎಪಿಎಂಸಿ ಮಾಜಿ ಅಧ್ಯಕ್ಷ ಜಗನ್ನಾಥ ಸಿದ್ದನಗೌಡ್ರ, ಸದಸ್ಯ ಕೆಂಪಲಿಂಗಗೌಡ್ರ, ಕೆಪಿಸಿಸಿ ಸದಸ್ಯ ಸತೀಶ ಮೆಹರವಾಡೆ, ಪಾಲಿಕೆ ಮಾಜಿ ಸದಸ್ಯ ವಿಜನಗೌಡ ಪಾಟೀಲ, ರೈತ ಮುಖಂಡರಾದ ಪರುತಪ್ಪ ಬಳಗಣ್ಣವರ, ಸಿದ್ದಪ್ಪಣ್ಣ ಮೇಟಿ, ಗುರು ದಾನೇನವರ, ಮುತ್ತು ಉಗರಗೋಳ, ಗುರುಸಿದ್ದಪ್ಪ ಕಟಗಿ, ಮಲ್ಲಿಕಾರ್ಜುನ ಕುಂದನಹಳ್ಳಿ, ಪ್ರಸನ್ನಕುಮಾರ ಮಿರಜಕರ, ವಿರೂಪಾಕ್ಷಪ್ಪ, ಸಾಗರ ಗಾಯಕವಾಡ ಇನ್ನಿತರರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.