ನನ್ನ ಸೋಲಿಸಲು ಕಾರ್ಯಕರ್ತರ ಮೇಲೆ ಭಾಜಪ ಒತ್ತಡ: ಶೆಟ್ಟರ
Team Udayavani, May 2, 2023, 11:16 AM IST
ಹುಬ್ಬಳ್ಳಿ: ರಾಜಕಾರಣದಲ್ಲಿ ಒಳ ಮತ್ತು ಹೊರ ಹೊಡೆತಗಳಿವೆ. ಇದೀಗ ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುತ್ತಿದ್ದಾರೆ. ಇದರಿಂದ ತಾಳ್ಮೆಯ ಕಟ್ಟೆ ಒಡೆದು ಹೋಗುತ್ತಿದ್ದು, ಇದರ ಪರಿಣಾಮ ಮುಂದಿನ ಲೋಕಸಭಾ ಚುನಾವಣೆ ಮೇಲೆ ಬೀರುತ್ತದೆ ಕಾದುನೋಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವರ್ಚಸ್ಸು ಕಡಿಮೆಯಾಗಿಲ್ಲ. ಒಂದು ಕಪ್ಪುಚುಕ್ಕೆ ಇಲ್ಲದ ರಾಜಕಾರಣ ಮಾಡಿದ್ದೇನೆ. ಏನೂ ತಪ್ಪು ಮಾಡದವರಿಗೆ ಟಿಕೆಟ್ ಕೈ ತಪ್ಪಿಸಿದ್ದಾರೆಂಬ ಅನುಕಂಪ ಇದೆ. ಜನರ ಕರುಣೆ, ಬೇಸರವು ನನ್ನನ್ನು ಶಾಸಕನಾಗಿ ಆರಿಸಿ ತರಬೇಕೆಂಬ ಛಲಕ್ಕೆ ಕಾರಣವಾಗಿದೆ. ಹಿಂದಿನ ಚುನಾವಣೆಗಿಂತ ಈ ಬಾರಿ ಅತಿಹೆಚ್ಚು ಮತಗಳನ್ನು ಪಡೆದು ಆರಿಸಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಪದಾಧಿಕಾರಿಗಳ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರೆಲ್ಲ ಮೊದಲೇ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಪುನಃ ಉಚ್ಛಾಟನೆ ಮಾಡಿರುವುದು ಹಾಸ್ಯಾಸ್ಪದ. ಇದೀಗ ಕಾರ್ಯಕರ್ತರ ಮೇಲೆ ಒತ್ತಡ ತರುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ. ಅಮಿತ್ ಶಾ ಹೇಳಲಿ ಯಾರೇ ಹೇಳಲಿ ಬಿಜೆಪಿ ಅಭ್ಯರ್ಥಿಗಿಂತ ಅತಿಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದರು.
ತಮ್ಮ ವಿರುದ್ಧ ಕೇಂದ್ರ ಸಚಿವರು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದು, ಈ ಹಿಂದೆ ಅವರ ಪರ ಕ್ಯಾಂಪೇನ್‌ನಲ್ಲಿ ತಾವು ಭಾಗಿಯಾಗಿದ್ದರಲ್ಲ ಎಂದು ಪ್ರಶ್ನಿಸಿದಾಗ, ಮುಂದೆ ಲೋಕಸಭಾ ಚುನಾವಣೆ ಬರುತ್ತದೆ ಕಾದುನೋಡಿ ಎಂದಷ್ಟೆ ಹೇಳಿದರು.
ವಿತಂಡ ವಾದ ಸರಿಯಲ್ಲ: ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಮಂತ್ರಿ ಸ್ಥಾನ ಬೇಡ ಎಂದಿದ್ದಕ್ಕೆ ಟಿಕೆಟ್ ಕೊಡಲಿಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಶೆಟ್ಟರ, ಸಚಿವ ಸಂಪುಟದಲ್ಲಿ ಮಂತ್ರಿ ಆಗಲಿಲ್ಲ ಎಂದರೆ ಎಂಎಲ್‌ಎ ಟಿಕೆಟ್ ಕೊಡುವುದಿಲ್ಲ ಎಂಬುದು ಸರಿಯಲ್ಲ. ಇದು ವಿಚಿತ್ರ ಹೇಳಿಕೆ. ನಾನು ಅಧಿಕಾರ ಬೇಡವೆಂದು ಸುಮ್ಮನೆ ಮನೆಯಲ್ಲಿ ಕುಳಿತರೆ ಅದನ್ನು ಗುರುತು ಮಾಡಬೇಕಿತ್ತು. ಅದು ಬಿಟ್ಟು ಕ್ಯಾಬಿನೆಟ್ ಸ್ಥಾನ ಬೇಡ ಎಂದಾಗ ಟಿಕೆಟ್ ಕೊಡುವುದಿಲ್ಲ ಎಂದಿದ್ದರೆ ಅಥವಾ ಚುನಾವಣೆಗೂ ಮೂರ್‍ನಾಲ್ಕು ತಿಂಗಳ ಮುಂಚೆಯೇ ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದ್ದರೆ ಆಗಲೇ ಮುಗಿದು ಹೋಗುತ್ತಿತ್ತು. ಅದು ಬಿಟ್ಟು ಈಗ ವಿತಂಡ ವಾದ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇಷ್ಟು ದಿನ ಪ್ರಹ್ಲಾದ ಜೋಶಿ ಯಾವತ್ತೂ ಈ ಕ್ಷೇತ್ರದಲ್ಲಿ ಇಷ್ಟೊಂದು ಕ್ಯಾಂಪೇನ್ ಮಾಡಿರಲಿಲ್ಲ. ಅವರ ಮೇಲೆ ಕೇಂದ್ರದ ಒತ್ತಡ ಇದ್ದೇ ಇದೆ. ಅದನ್ನು ಅವರು ಬೇರೆಯವರ ಮೇಲೆ ಹಾಕಲು ಮುಂದಾಗುತ್ತಿದ್ದಾರೆ. ಸೋಲುವ ಭಯದಲ್ಲಿ ಜನರಿಗೆ ಹೆದರಿಕೆ, ದಬ್ಟಾಳಿಕೆ ಮಾಡುವುದು ಪ್ರಾರಂಭವಾಗಿದೆ. ನನ್ನ ಜೀವನದಲ್ಲಿಯೇ ಈ ತರಹದ ಪರಿಸ್ಥಿತಿ ನೋಡಿರಲಿಲ್ಲ. ಈ ಚುನಾವಣೆ ಶೆಟ್ಟರ ವರ್ಸಸ್ ಬಿಜೆಪಿ ಹೈಕಮಾಂಡ್ ಅಲ್ಲ. ಕಾಂಗ್ರೆಸ್ ವರ್ಸಸ್ ಬಿಜೆಪಿ ಅಷ್ಟೆ. -ಜಗದೀಶ ಶೆಟ್ಟರ, ಹು-ಧಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.