Congress candidate; ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಸಚಿವ ಸಂತೋಷ್ ಲಾಡ್

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದರೆ ಏನು ?

Team Udayavani, Dec 23, 2023, 6:42 PM IST

santhosh-Lad

ಧಾರವಾಡ : ರಾಷ್ಟ್ರ ರಾಜಕಾರಣದ ಬಗ್ಗೆ ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾರಾಗುತ್ತಾರೆ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಆದರೆ ಈ ಬಾರಿ ಖಂಡಿತವಾಗಿಯೂ ಬಿಜೆಪಿ ವಿರುದ್ಧ ಕಠಿಣ ಹೋರಾಟ ನಮ್ಮದಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎನ್ನುವ ಮೂಲಕ ಅವರು ತಾವು ಧಾರವಾಡ ಲೋಕಸಭೆ ಅಭ್ಯರ್ಥಿಯಾಗಲು ಮನಸ್ಸಿಲ್ಲ ಎಂಬ ಸಂದೇಶವನ್ನು ಪಕ್ಷದ ವರಿಷ್ಠರಿಗೆ ನೀಡಿದ್ದಾರೆ. ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆರೇಳು ಬಾರಿ ಸೋಲುಂಡಿದೆ.ಈ ಬಾರಿ ಅಷ್ಟು ಸುಲಭಕ್ಕೆ ಅವರನ್ನು ಗೆಲ್ಲಲುಬಿಡುವುದಿಲ್ಲ. ಒಳ್ಳೆ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬಿಜೆಪಿ ವಿರುದ್ಧ ಕಠಿಣ ಹೋರಾಟ ರೂಪಿಸುತ್ತೇವೆ. ಈಗಾಗಲೇ 15 ಕ್ಕೂ ಜನ ಆಕಾಂಕ್ಷಿಗಳು ಟಿಕೇಟ್ ಗಾಗಿ ಚುನಾವಣಾ ಉಸ್ತುವಾರಿ ಅಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಂತಿಮವಾಗಿ ಯಾರು ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ” ಎಂದರು.

”ನಾನು ಬೇರೆ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ, ಅಲ್ಲಿ ಲೋಕಸಭೆ ಟಿಕೆಟ್ ಬಗ್ಗೆ ಚರ್ಚೆಯಾಗಿಲ್ಲ, ಲೋಕಸಭೆ ಚುನಾವಣೆಗೆ ನಾವು ಮಾಡಿದ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ.ನಿಗಮ ಮಂಡಳಿಗಳನ್ನು ಶಾಸಕರು ಮತ್ತು ಕಾರ್ಯಕರ್ತರಿಗೆ ಕೊಡುವ ನಿರ್ಧಾರವಾಗಿದೆ ಆ ಬಗ್ಗೆ ರಾಜ್ಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಧರ್ಮ ದಂಗಲ್ ಪದ ಬಳಕೆಗೆ ಆಕ್ರೋಶ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ನೀಡಿರುವುದಕ್ಕೆ ಮಾಧ್ಯಮಗಳು ಧರ್ಮ ದಂಗಲ್ ಎಂಬ ಪದ ಬಳಸುತ್ತಿವೆ. ಅದು ದಂಗಲ್ ಹೇಗೆ ಆಗುತ್ತದೆ ? ಸಿಎಂ ಹೇಳಿದ್ದು ಕಾನೂನಾತ್ಮಕವಾಗಿ ಇದೆ. ಅದಕ್ಕೆ ದಂಗಲ್ ಎಂಬ ಪದ ಬಳಸಿದ್ದು ಸರಿಯಲ್ಲ ಎಂದು ಲಾಡ್ ಮಾಧ್ಯಮಗಳ ಮೇಲೆ ಹರಿಹಾಯ್ದರು.

ಹಿಜಾಬ್ ಬಗ್ಗೆ ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ ಮಾಡಲಿ. ನಾನೂ ಒಬ್ಬ ಹಿಂದೂ ಅಲ್ಲವಾ? ನಾನೇನು ಅದಕ್ಕೆ ವಿರೋಧ ಮಾಡುತ್ತಿಲ್ಲ. ಮಾಧ್ಯಮದಲ್ಲೂ ಹಿಂದೂಗಳಿದ್ದಾರೆ ಅವರೂ ವಿರೋಧ ಮಾಡುತ್ತಾರಾ? ನಿಮ್ಮ ನಿಲುವು ಏನು ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಮುಸ್ಲಿಂ ತುಷ್ಟೀಕರಣ ಎಂಬುದು ವಿರೋಧ ಪಕ್ಷಗಳ ದೃಷ್ಟಿಕೋನ ಆಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದರೆ ಏನು ? ಹಿಂದೂ, ಮುಸ್ಲಿಂ, ಸಿಖ್, ಬುದ್ಧ ಎಲ್ಲರನ್ನೂ ಒಂದೇ ರೀತಿ ನೋಡಿಕೊಳ್ಳುತ್ತೇವೆ ಎಂಬುದಲ್ಲವೇ ? ಎಂದರು.

ಹಿಜಾಬ್ ನಿಷೇಧ ವಾಪಸ್ ಸೇರಿದಂತೆ ಇತರೆ ನಿಯಮಗಳನ್ನು ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕು ಅಂತಿದೆಯೋ ಅದೇ ರೀತಿ ಮಾಡುತ್ತಾರೆ. ಅದೇ ರೀತಿಯಲ್ಲಿ ಮಾಡಲು ಸಿಎಂ ಪರಿಶೀಲಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.