ಭ್ರಷ್ಟಾಚಾರ ಮೊಟ್ಟೆಗೆ ಕಾವು ಕೊಟ್ಟಿದ್ದೇ ಕಾಂಗ್ರೆಸ್: ಸಚಿವ ಪ್ರಹ್ಲಾದ ಜೋಶಿ
Team Udayavani, Oct 2, 2022, 8:54 PM IST
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮೊಟ್ಟೆಯಿಟ್ಟು, ಅದಕ್ಕೆ ದಿನವೂ ಕಾವು ಕೊಟ್ಟು, ನೂರಾರು ಮರಿ ಹುಟ್ಟು ಹಾಕಿ ರಕ್ತಬೀಜಾಸುರರಂತೆ ಬೆಳೆಸಿದೆ. ಅದನ್ನು ಎಷ್ಟೇ ತೊಡೆದು ಹಾಕಲು ಪ್ರಯತ್ನಿಸಿದರೂ ಕಾಂಗ್ರೆಸ್ ಕಸ(ಹುಲ್ಲು)ದಂತೆ ಬೆಳೆಯುತ್ತಿದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಈಗ ನಕಲಿ ಗಾಂಧಿ ಪರಿವಾರ ಈ ಬಗ್ಗೆ ಮಾತನಾಡುತ್ತಿರುವುದೇ ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯತೆ ಇಲ್ಲ. ಸೋನಿಯಾ, ರಾಹುಲ್ ನೇತೃತ್ವದಲ್ಲಿ ಬೋಪೋರ್ಸ್ ಸೇರಿ ಹಳೆಯದು ಹೊರತುಪಡಿಸಿ 2004ರಿಂದ 2014ರವರೆಗೆ ಯುಪಿಎ ಸರ್ಕಾರವಿದ್ದಾಗ ಒಂದು ದಿನವೂ ಹಗರಣವಿಲ್ಲದೆ ಸರ್ಕಾರ ನಡೆದಿಲ್ಲ. ಇಂತಹ ಹಗರಣಗಳಿಂದಲೇ ಸರ್ಕಾರ ತನ್ನ ಅಸ್ತಿತ್ವ ಕಳೆದುಕೊಂಡಿತು. ವೀಸಾದಲ್ಲೂ ಹಣ ಪಡೆಯುತ್ತಿದ್ದ ಬಗ್ಗೆ ಗಂಭೀರ ಆರೋಪವಿದೆ.
ಜತೆಗೆ 2ಜಿ, ಕಾಮನವೆಲ್ತ್ ಗೇಮ್‌ನಿಂದ ಹಿಡಿದು ಹಲವು ಹಗರಣ ಹಾಗೂ ಇಂದಿಗೂ ಕಲ್ಲಿದ್ದಲು ಹಗರಣ ಕುರಿತ ಸಿಬಿಐ ತನಿಖೆಯ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಹಲವರಿಗೆ ಶಿಕ್ಷೆ ಕೂಡ ಆಗಿದೆ. ಅಂಥವರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಬಹಳ ಆಶ್ಚರ್ಯವಾಗಿದೆ. ಪ್ರಧಾನಿ ಮೋದಿ ಸರ್ಕಾರದ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಆರೋಪ ಮಾಡಲು ಸಾಧ್ಯವಿಲ್ಲ ಎಂದರು.
ರಾಜಸ್ಥಾನ, ಗೋವಾದಲ್ಲಿ ಕಾಂಗ್ರೆಸ್ ತೋಡೊ, ಚೋಡೋ ಆಗುತ್ತಿದೆ. ಕಾರಣ ಕಾಂಗ್ರೆಸ್‌ನವರು ಮೊದಲು ತಮ್ಮ ಪಕ್ಷ ಸರಿಪಡಿಸಿಕೊಳ್ಳಲಿ. ಆನಂತರ ದೇಶದ ಜೋಡಣೆ ಮತ್ತು ಇತರರ ಬಗ್ಗೆ ಮಾತನಾಡಲಿ. ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಕಾರಣ ರಾಹುಲ್‌ಗೆ ಬರೆದುಕೊಡುವವರು ಸರಿಯಾಗಿ ಬರೆದುಕೊಡಿ. ಜನ ಮೊದಲೇ ಅವರ ಹೇಳಿಕೆ ಗಂಭೀರವಾಗಿ ಪರಿಗಣಿಸಲ್ಲ. ಇಲ್ಲವಾದರೆ ಇನ್ನಷ್ಟು ನಗೆಪಾಟಲಿಗೆ ಒಳಗಾಗುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.