ಹಿಂದೂ-ಮುಸ್ಲಿಮರ ನಡುವೆ ಕಾಂಗ್ರೆಸ್‌ನಿಂದ ಕಂದಕ


Team Udayavani, Oct 10, 2017, 11:59 AM IST

hb4.jpg

ಹುಬ್ಬಳ್ಳಿ: ಕಳೆದ 70 ವರ್ಷಗಳಿಂದ ಹಿಂದೂ-ಮುಸ್ಲಿಂ ಸಮಾಜಗಳ ನಡುವೆ ದೊಡ್ಡ ಕಂದಕ ನಿರ್ಮಾಣ ಮಾಡುವ ಕಾರ್ಯವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಆರೆಸ್ಸೆಸ್‌ ಮುಖಂಡ ಕಲ್ಲಡ್ಕ  ಪ್ರಭಾಕರ ಭಟ್ಟ ಆರೋಪಿಸಿದರು. 

ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಗಾಯಗೊಂಡು ನಗರದ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರವೀಣ ಕಳಸೂರ ಹಾಗೂ ಪ್ರವೀಣ ಬಡ್ನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 

ಮತ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಎರಡು ಧರ್ಮದ ನಡುವೆ ಸಂಘರ್ಷ ಏರ್ಪಡುವಂತಹ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಕಾಂಗ್ರೆಸ್‌ ನಾಯಕರು ರಾಜಕಾರಣಕ್ಕಾಗಿ ಸಮಾಜವನ್ನು ಹಾಳು ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಇವರಿಗೆ ಶಾಂತಿ ನೆಲೆಸುವುದು ಬೇಕಾಗಿದ್ದರೆ ದುಷ್ಕರ್ಮಿಗಳ ಬೆನ್ನಿಗೆ ನಿಲ್ಲುತ್ತಿರಲಿಲ್ಲ. 

ಕಳಸ ಗ್ರಾಮದಲ್ಲಿ ನಡೆದ ಘಟನೆಯಲ್ಲೂ ರಾಜ್ಯ ಸರಕಾರ ದುಷ್ಕರ್ಮಿಗಳ ಬೆನ್ನಿಗೆ ನಿಂತಿದೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಪ್ರತಿ ಗ್ರಾಮದಲ್ಲಿ ಎರಡು ಗುಂಪುಗಳಾಗಿ ಸಂಘರ್ಷಕ್ಕೆ ಕಾರಣವಾಗಲಿದೆ ಎಂದರು. ಮುಸ್ಲಿಂ ಸಮಾಜದಲ್ಲೂ ಸಜ್ಜನರಿದ್ದಾರೆ. ಅವರು ಮೌನ ವಹಿಸದೆ ಇಂತಹ ಘಟನೆಗಳು ನಡೆದಾಗ ಖಂಡಿಸಬೇಕು.

ದುಷ್ಕರ್ಮಿಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು. ಈ ಬಗ್ಗೆ ಸಮಾಜದ ಪ್ರಮುಖರು ಗಂಭೀರ ಚಿಂತನೆ ನಡೆಸುವಂತೆ ಮನವಿ ಮಾಡುವುದಾಗಿ ತಿಳಿಸಿದರು. ದೇವಸ್ಥಾನದ ಜಾಗ ಒತ್ತುವರಿ, ಯುವತಿಯರನ್ನು ಚುಡಾಯಿಸುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. 

ಇಂತಹ ದುಷ್ಕೃತ್ಯ ಖಂಡಿಸಿದವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವುದು ಎಷ್ಟು ಸರಿ. ಕೂಡಲೇ ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಬೇಕು. ಯಾವುದೇ ರಾಜಕೀಯ  ಒತ್ತಡಕ್ಕೆ ಪೊಲೀಸರು ಮಣಿಯಬಾರದು ಎಂದು ಒತ್ತಾಯಿಸಿದರು. ಧರ್ಮ ಜಾಗೃತಿ ಇಲ್ಲದ ಕಾರಣ ಲವ್‌ ಜಿಹಾದ್‌ ಘಟನೆಗಳು ನಡೆಯುತ್ತಿವೆ. 

ಹಿಂದೂ ಯುವತಿಯರಿಗೆ ಆಮಿಷ ಅಥವಾ ಬೆದರಿಕೆ ಹಾಕಿ ಮದುವೆಯಾಗಿ ನಂತರ ಅವರನ್ನು ಪ್ರಾಣಿಗಿಂತಲೂ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಲವ್‌ ಜಿಹಾದ್‌ಗಾಗಿಯೇ ಒಂದು ತಂಡ ಕಾರ್ಯ ನಿರ್ವಹಿಸುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮೊದಲು ಜಾಗೃತಿ ಕಾರ್ಯ ನಡೆಯಬೇಕು. ನಾವು ಕೂಡ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.  

ಟಾಪ್ ನ್ಯೂಸ್

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.