ಕಾಂಗ್ರೆಸ್-ಜೆಡಿಎಸ್ ಸಂಬಂಧ ಸರಿಯಿಲ್ಲ: ಕಾಗೇರಿ
Team Udayavani, Jan 29, 2019, 12:30 AM IST
ಧಾರವಾಡ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ದೋಸ್ತಿ ಮೊದಲಿನಿಂದಲೂ ಅಸ್ಥಿರದಲ್ಲೇ ಇದ್ದು, ಸಿಎಂ ಕುಮಾರಸ್ವಾಮಿ ಈ ಅಸ್ಥಿರತೆಯನ್ನು ಈಗ ಹೇಳಿಕೊಂಡಿದ್ದಾರಷ್ಟೇ. ಅವರಿಗೆ ಸಿಎಂ ಸ್ಥಾನ ಬಿಡಲೂ ಆಗುತ್ತಿಲ್ಲ. ಮುಂದುವರಿಯಲೂ ಆಗುತ್ತಿಲ್ಲ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದ್ದು, ಅಪವಿತ್ರ ಮೈತ್ರಿ ಫಲದ ಸರ್ಕಾರ ಇದಾಗಿದೆ. ಅವಕಾಶವಾದಿ ರಾಜಕಾರಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ. ಆರಂಭದಿಂದಲೂ ಈ ಸರ್ಕಾರದಲ್ಲಿ ಹೊಂದಾ ಣಿಕೆಯೇ ಇಲ್ಲ. ಆಂತರಿಕ ಕಚ್ಚಾಟ, ಒಳಜಗಳಗಳು ನಡೆದಿವೆ ಎಂದರು.
ನಾವೇನು (ಬಿಜೆಪಿ) ಹೀಗೆ ಜಗಳ ಮಾಡಿ ಎಂದು ಅವರಿಗೆ ಹೇಳಿಲ್ಲ. ಅವರೇ ಈ ಜಗಳಗಳನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ಇವರ ಈ ಕಚ್ಚಾಟ ಮುಚ್ಚಿ ಹಾಕಲು ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಜಗಳದಿಂದಲೇ ಈ ಸರ್ಕಾರ ಬೀಳುತ್ತದೆ. ಆಗ ಬಿಜೆಪಿ ಜನಾಭಿಪ್ರಾಯಕ್ಕೆ ಮನ್ನಣೆ ಕೊಡುತ್ತದೆ. ಈ ಮೈತ್ರಿ ಸರ್ಕಾರ ತನ್ನ ಭಾರ ತಾಳಲಾಗದೇ, ತಾನೇ ಬಿದ್ದ ಮೇಲೆ ಬಿಜೆಪಿ ತನ್ನ ಜವಾಬ್ದಾರಿ ನಿರ್ವಹಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.