ಸರ್ಕಾರದ ಕೋವಿಡ್ ಅಂಕಿ-ಅಂಶ ಸತ್ಯಕ್ಕೆ ದೂರ: ಲಾಡ್
Team Udayavani, Jul 18, 2021, 9:37 PM IST
ಕಲಘಟಗಿ:ಮತಕ್ಷೇತ್ರದಾದ್ಯಂತ ಕೋವಿಡ್‌ನಿಂದ 265 ಜನರು ಮೃತಪಟ್ಟಿರುವ ಕುರಿತು ತಮ್ಮ ಬಳಿ ದಾಖಲೆಯಿದೆ. ಮೃತಪಟ್ಟಿರುವವರು 135 ಜನರು ಎಂಬ ಸರಕಾರ ನೀಡಿರುವ ಅಂಕಿ-ಅಂಶ ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರಿಗೆ ತಪ್ಪು ಮಾಹಿತಿ ಒದಗಿಸುತ್ತಲಿದೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಆರೋಪಿಸಿದರು.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕು ಹಾಗೂ ಜಿಲ್ಲಾಡಳಿತ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವಿಕೆ ಹಾಗೂ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಅವು ನೀಡುತ್ತಿರುವ ಅಂಕಿ ಸಂಖ್ಯೆಗಳೂ ಸಮರ್ಪಕವಾಗಿರುವುದಿಲ್ಲ. ಕಲಘಟಗಿಯಲ್ಲಿ 83 ಹಾಗೂ ಅಳ್ನಾವರ ತಾಲೂಕಿನಲ್ಲಿ 52 ಒಟ್ಟೂ 135 ಜನರು ಕೋವಿಡ್‌ನಿಂದ ಮೃತಪಟ್ಟಿರುವುದಾಗಿ ಸರಕಾರ ತಿಳಿಸಿದೆ. ಆದರೆ, ಮತಕ್ಷೇತ್ರದಾದ್ಯಂತ ಒಟ್ಟು 265 ಜನರು ಕೋವಿಡ್‌ಪೀಡಿತರಾಗಿ ಮೃತಪಟ್ಟಿರುವ ಕುರಿತು ಖಚಿತ ಮಾಹಿತಿ ದೊರಕಿದೆ ಎಂದರು.
ರಾಹುಲ್ ಗಾಂಧಿ ಅವರ “ಕೋವಿಡ್ ಸೋಂಕಿತರಿಗೆ ಸಹಾಯ ಹಸ್ತ’ ಕಾರ್ಯಕ್ರಮದನ್ವಯ ಪಕ್ಷದ ಪದಾಧಿಕಾರಿಗಳು ಮತಕ್ಷೇತ್ರದಾದ್ಯಂತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿದ್ದು, ಕೋವಿಡ್ ಸಂದರ್ಭದಲ್ಲಿ ಕಲಘಟಗಿಯಲ್ಲಿ 376 ಹಾಗೂ ಅಳ್ನಾವರದಲ್ಲಿ 109 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಕೋವಿಡ್‌ನಿಂದ ಸರಕಾರದ ಅಂಕಿ-ಸಂಖ್ಯೆಗಳನ್ನು ಹೊರತುಪಡಿಸಿ ಕಲಘಟಗಿಯ 110 ಹಾಗೂ ಅಳ್ನಾವರದ 20 ಜನರು ಹೆಚ್ಚಿನದಾಗಿ ಮೃತಪಟ್ಟಿದ್ದು, ಈ ಕುರಿತು ತಮ್ಮಲ್ಲಿರುವ ಸಮಗ್ರ ಮಾಹಿತಿಯನ್ನು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತಂದು ಪುನರ್ ಪರಿಶೀಲನೆ ನಡೆಸುವಂತೆ ಒತ್ತಾಯಿಸುತ್ತೇವೆ. ಕೋವಿಡ್‌ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಕುಟುಂಬ ವರ್ಗದವರೆಲ್ಲರಿಗೂ ನ್ಯಾಯ ಒದಗಿಸಿಕೊಡಲು ಒತ್ತಾಯಿಸುತ್ತೇವೆ ಎಂದು ಹೇಳಿದರು.
ತಾಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಈಗಾಗಲೇ ಆಗ್ರಹಿಸಿದ್ದು, ಅದಕ್ಕೆ ಪೂರಕವಾಗಿ ಅಬಕಾರಿ ಇಲಾಖೆ ಭೋಗೇನಾಗರಕೊಪ್ಪ, ಹಸರಂಬಿ ಹಾಗೂ ಗಳಗಿಹುಲಕೊಪ್ಪ ಗ್ರಾಮಗಳಲ್ಲಿ ನಾಮಕೇವಾಸ್ತೆ ಮೂರು ಪ್ರಕರಣಗಳನ್ನು ದಾಖಲಿಸಿ ಕೈ ತೊಳೆದುಕೊಂಡಿದೆ. ಅಕ್ರಮ ಮದ್ಯ ಮಾರಾಟ ಕೇವಲ ತಾಲೂಕಿಗೆ ಸೀಮಿತಗೊಳ್ಳದೆ ಜಿಲ್ಲಾದ್ಯಂತ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಲ್ಲಿ ನಿಯೋಗದೊಂದಿಗೆ ತೆರಳಿ ಅಕ್ರಮ ಸಾರಾಯಿ ಮಾರಾಟ ತಡೆಗೆ ತಕ್ಷಣ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸುವುದಾಗಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಆರ್. ಪಾಟೀಲ, ಹರಿಶಂಕರ ಮಠದ, ವೈ.ಬಿ. ದಾಸನಕೊಪ್ಪ, ಸೋಮಶೇಖರ ಬೆನ್ನೂರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.