ಜನರ ತೆರಿಗೆ ಹಣವೂ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯ
Team Udayavani, Mar 4, 2017, 3:00 PM IST
ಹುಬ್ಬಳ್ಳಿ: ಉಕ್ಕಿನ ಸೇತುವೆ ಮಾತ್ರವಲ್ಲ, ಬೆಂಗಳೂರಿನ ಜನರ ತೆರಿಗೆ ಹಣದಿಂದಲೂ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ತಲುಪಿದೆ. ಡೈರಿ ಸತ್ಯಾಸತ್ಯತೆ ಹೊರಬರಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಕ್ಕಿನ ಸೇತುವೆ ನಿರ್ಮಾಣವನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ತನ್ನ ತಪ್ಪನ್ನು ಒಪ್ಪಿಕೊಂಡಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ಜನರ ತೆರಿಗೆ ಹಣವೂ ಕಾಂಗ್ರೆಸ್‌ನ ಹೈಕಮಾಂಡ್ ಗೆ ಸಂದಾಯವಾಗಿದೆ. ಈ ಕುರಿತು ನಮ್ಮ ಬಳಿ ದಾಖಲೆಗಳಿವೆ.
ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಟ ನಿಲ್ಲಲ್ಲ. ಡೈರಿ ಪ್ರಕರಣ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಅದು ದೇಶಕ್ಕೆ ವ್ಯಾಪಿಸಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲವೆ ಪಕ್ಷದಿಂದ ಕಾನೂನು ಹೋರಾಟ ಮಾಡಲಾಗುವುದು ಡೈರಿ ಪ್ರಕರಣರವನ್ನು ಸಿಬಿಐ ತನಿಖೆಗೊಳಪಡಿಸಬೇಕು.
ಸತ್ಯಾಂಶ ಗೊತ್ತಾದಾಗ ಸಂಪುಟದ ಸಚಿವರು ಮಾತ್ರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕಾಗುತ್ತದೆ. ಡೈರಿ ಪ್ರಕರಣ ಸುಳ್ಳಾದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಸಿದ್ಧರಾಮಯ್ಯ ಇದಕ್ಕೆ ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದರು.
ಅಧಿವೇಶನದಲ್ಲಿ ಚರ್ಚೆ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಗರಣಗಳು ಇವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಅವರು ತಂದೆ-ತಾಯಿಯ ಹೆಸರಿನಲ್ಲಿ ಗೋಮಾಳದ ಜಾಗೆ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕುರಿತು ದಾಖಲೆಗಳ ಮಾಹಿತಿ ಕಲೆ ಹಾಕಲಾಗುತ್ತಿದೆ.
ಬಿಬಿಎಂಪಿಯಲ್ಲಿ 3000 ಕೋಟಿ ರೂ. ಹಣ ಲೂಟಿ ಆಗಿದೆ. ಈ ಎಲ್ಲದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಧಿವೇಶನದೊಳಗೆ ಇವುಗಳನ್ನು ಬಿಡುಗಡೆ ಮಾಡಿ, ಅಧಿವೇಶನದಲ್ಲಿ ಈ ಹಗರಣಗಳ ಕುರಿತು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಚರ್ಚೆ ನಡೆಸಲಿದ್ದಾರೆ ಎಂದರು.
ನನ್ನ ವಿರುದ್ಧದ ಪ್ರಕರಣಗಳಿಗೆ ಕಾಂಗ್ರೆಸ್ ಮರುಜನ್ಮ ನೀಡುವುದಿದ್ದರೆ ಸ್ವಾಗತಿಸುವೆ. ಅದು ಸೇಡಿನ ರಾಜಕಾರಣ ಮಾಡಲಿ. ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ನನ್ನ ಮೇಲಿನ ಎಲ್ಲ ಪ್ರಕರಣಗಳು ಖುಲಾಸೆಗೊಂಡಿವೆ. ಡಿನೋಟಿμಕೇಶನ್ ಪ್ರಕರಣ ಮಾತ್ರ ಬಾಕಿ ಉಳಿದುಕೊಂಡಿದೆ. ಎಲ್ಲ ಸರಕಾರ ಹಾಗೂ ಮುಖ್ಯಮಂತ್ರಿಗಳು ಇದನ್ನು ಮಾಡಿದ್ದಾರೆ. ಡಿನೋಟಿಫೈ ಮಾಡಿದ ಜಮೀನು ಬೇಡವಾದರೆ ಸರಕಾರವು ರೈತರಿಂದ ಪಡೆದ ಭೂಮಿಯನ್ನು ವಾಪಸು ಕೊಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.