ಮುಂದುವರಿದ ರಸ್ತೆ ಗುಂಡಿ ಮುಚ್ಚುವ ಕಾರ್ಯ
Team Udayavani, Sep 22, 2017, 1:00 PM IST
ಹುಬ್ಬಳ್ಳಿ: ಪಾಲಿಕೆಯಿಂದ ಗುರುವಾರವೂ ನಗರದ ಪ್ರಮುಖ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ಮುಂದುವರಿಯಿತು. ಇಲ್ಲಿನ ರಮೇಶ ಭವನ ರಸ್ತೆ, ಗೋಪನಕೊಪ್ಪ, ಎಸ್‌ಬಿ ವೃತ್ತ, ಬಾದಾಮಿ ನಗರ, ಕೇಶ್ವಾಪುರ, ದೇಸಾಯಿ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯಿತು.
ಇತ್ತೀಚೆಗೆ ಸುರಿದ ಮಳೆಯಿಂದ ನಗರದ ರಸ್ತೆಗಳು ಹದಗೆಟ್ಟಿರುವುದರಿಂದ ದುರಸ್ತಿ ಕಾರ್ಯ ತುರ್ತಾಗಿ ಮುಗಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಉಸ್ತುವಾರಿಯಲ್ಲಿ ವಲಯವಾರು ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಹಾಳಾಗಿರುವ ರಸ್ತೆಗಳಿಗೆ ಪೇವರ್ ಬಳಕೆ ಮಾಡಲಾಗುತ್ತಿದೆ.
ಸ್ಥಳೀಯರ ವಿರೋಧ: ಆನಂದನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗುಂಡಿ ಮುಚ್ಚುವ ಕಾರ್ಯಕ್ಕೆ ಸ್ಥಳೀಯರು ಅಡ್ಡಿಪಡಿಸಿದರು. ಹಲವು ವರ್ಷಗಳಿಂದ ಇಲ್ಲಿ ರಸ್ತೆ ನಿರ್ಮಾಣವಾಗಿಲ್ಲ. ರಸ್ತೆ ಸಂಪೂರ್ಣ ಹಾಳಾಗಿರುವ ಸ್ಥಿತಿಯಲ್ಲಿರುವಾಗ ಗುಂಡಿ ಮುಚ್ಚುವುದರಿಂದ ಪರಿಹಾರ ದೊರೆಯುವುದಿಲ್ಲ. ಗುಂಡಿ ಮುಚ್ಚುವ ಬದಲು ಹೊಸ ರಸ್ತೆ ನಿರ್ಮಿಸುವಂತೆ ಸ್ಥಳೀಯರು ಪಟ್ಟು ಹಿಡಿದರು.
ಸಿಆರ್‌ಎಫ್ ಅನುದಾನದಲ್ಲಿ ರಸ್ತೆಗಳು ಅಭಿವೃದ್ಧಿಯಾಗಲಿವೆ. ಅಲ್ಲಿಯವರೆಗೆ ತಾತ್ಕಾಲಿಕವಾಗಿ ಗುಂಡಿ ಮುಚ್ಚಿದರೆ ವಾಹನಗಳ ಓಡಾಟಕ್ಕೆ ಅನುಕೂಲವಾಗುತ್ತದೆ ಎಂದು ಸಮಜಾಯಿಷಿ ನೀಡಿದರೂ ಸ್ಥಳೀಯರು ಒಪ್ಪಲಿಲ್ಲ. ಹೀಗಾಗಿ ಅಲ್ಲಿನ ಕಾರ್ಯವನ್ನು ಸ್ಥಗಿತಗೊಳಿಸಲಾಯಿತು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.