![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 16, 2017, 4:23 PM IST
ಧಾರವಾಡ: ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದಿಂದ ನಗರದಲ್ಲಿ ಪ್ರತಿಭಟನಾ ರ್ಯಾಲಿ ಕೈಗೊಂಡು, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿ (ಉತ್ತರ ವಲಯ) ಎದುರು ಧರಣಿ ಕೈಗೊಂಡು ಮನವಿ ಸಲ್ಲಿಸಿದ ಬಳಿಕ ಅಲ್ಲಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು, ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಕೆಲ ಇಲಾಖೆಗಳಲ್ಲಿ ಕೆಲ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಟೆಂಡರ್‌ಗಳನ್ನು ಕರೆಯುತ್ತಿದ್ದು, ಇದರಿಂದ ಸ್ಥಳೀಯ ಗುತ್ತಿಗೆದಾರರು ಕೆಲಸಗಳಿಂದ ವಂಚಿತರಾಗುವಂತಾಗಿದೆ. ಹೀಗಾಗಿ ಪ್ಯಾಕೇಜ್ ಟೆಂಡರ್ ಮಾಡದೇ ಒಂದು ಕಾಮಗಾರಿಗೆ ಒಂದು ಟೆಂಡರ್ ಕರೆಯಬೇಕು.
ಈಗ ಸರಕಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಿಗೆ ಶೇ.18ರಷ್ಟು ಜಿಎಸ್‌ಟಿ ವಿಧಿಸುತ್ತಿರುವ ಕುರಿತು ಮಾಹಿತಿ ಬಂದಿದ್ದು, ಗುತ್ತಿಗೆದಾರರ ದರ ಪಟ್ಟಿಯಲ್ಲಿ ಇದನ್ನು ಸೇರಿಸಿದ ನಂತರವೇ ಗುತ್ತಿಗೆದಾರರ ಬಿಲ್ ನಲ್ಲಿ ಕಟಾಯಿಸಬೇಕು.
ಇದೇ ರೀತಿ ಗುತ್ತಿಗೆದಾರರಿಗೆ ಸರ್ವಿಸ್ ತೆರಿಗೆ ವಿಧಿಸುವುದಾದಲ್ಲಿ ಅದನ್ನು ಸಹ ದರಪಟ್ಟಿಯಲ್ಲಿ ಸೇರಿಸಿದ ನಂತರವೇ ಗುತ್ತಿಗೆದಾರರ ಬಿಲ್‌ನಲ್ಲಿ ಕಟಾಯಿಸಬೇಕು ಎಂದು ಆಗ್ರಹಿಸಲಾಗಿದೆ. ಗುತ್ತಿಗೆದಾರರ ಲೈಸನ್ಸ್ ಸತತವಾಗಿ ಚಾಲ್ತಿ ಇದ್ದಲ್ಲಿ ಗುತ್ತಿಗೆದಾರರು,
-ಕಾಮಗಾರಿ ನಿರ್ವಹಿಸಿದ ಪ್ರಮಾಣ ಪತ್ರವನ್ನು ಅವರ ಜೀವಿತ ಅವಧಿಯ ಯಾವುದೇ ಟೆಂಡರಿಗೆ ಅಂದರೆ 5 ವರ್ಷಗಳ ನಂತರವೂ ಸಹ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಪಟ್ಟಿ ಮನವಿಯಲ್ಲಿತ್ತು. ಸಂಘದ ಅಧ್ಯಕ್ಷ ಸುಭಾಷ ಪಾಟೀಲ, ಪ್ರಧಾನ ಕಾರ್ಯದರ್ಶಿ ರವೀಂದ್ರ ಮಾನೆ ಸೇರಿದಂತೆ ಹಲವರು ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.