ಪ್ರಜಾಪ್ರಭುತ್ವಕ್ಕೆ ಭ್ರಷ್ಟಾಚಾರ ಮಾರಕ

Team Udayavani, Aug 8, 2017, 12:48 PM IST

hub1.jpg

ಹುಬ್ಬಳ್ಳಿ: ಪ್ರಜಾಪ್ರಭುತ್ವ ಹಾಗೂ ನಾಗರಿಕರ ಸಮಾಜಕ್ಕೆ ಭ್ರಷ್ಟಾಚಾರ ಮಾರಕವಾಗಿದ್ದು, ಶೇ.95ರಷ್ಟು ಜನರು ಇದರ ಬಗ್ಗೆ ಮೌನತಾಳಿದ್ದಾರೆ. ಕೇರಳದಲ್ಲಿ ಲಂಚ ನೀಡುವ- ಪಡೆಯುವವರಿಬ್ಬರಿಗೂ ಶಿಕ್ಷೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಕೈಗೊಂಡಿದ್ದು, ಅಲ್ಲಿ ಲಂಚ ಬಹುತೇಕವಾಗಿ ಇಲ್ಲವಾಗಿದೆ.

ಅಲ್ಲಿನ ಮಾದರಿ ದೇಶದೆಲ್ಲೆಡೆ ಜಾರಿಗೇಕೆ ಸಾಧ್ಯವಾಗದು ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಮೋಹನ ಎಂ.ಶಾಂತನಗೌಡರ ಪ್ರಶ್ನಿಸಿದರು. ಕರ್ನಾಟಕ ಕಾನೂನು ವಿಶ್ವವಿದ್ಯಾಲಯ, ಬೆಂಗಳೂರಿನ ಸಾಮಾಜಿಕ ನ್ಯಾಯಕ್ಕಾಗಿ ವಕೀಲರ ವೇದಿಕೆಯಿಂದ ಎಲ್‌.ಜಿ. ಹಾವನೂರು ಸ್ಮರಣಾರ್ಥ ಆಯೋಜಿಸಿದ್ದ ಭಾರತದಲ್ಲಿ ಮಾನವ ಹಕ್ಕುಗಳ ಬಲವರ್ಧನೆ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರವೂ ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಚುನಾವಣೆ ಭ್ರಷ್ಟಾಚಾರ ಮತದಾರರ ಧ್ವನಿಯನ್ನೇ ಕಿತ್ತುಕೊಳ್ಳುತ್ತಿದೆ. ಇಂತಹ ಸ್ಥಿತಿಯಲ್ಲಿ ಒಳ್ಳೆಯ ಜನರು ಸ್ಪರ್ಧಿಸುವುದಾದರೂ ಹೇಗೆ, ಸ್ಪರ್ಧಿಸಿದರೆ ಗೆಲ್ಲುವುದು ಅಸಾಧ್ಯದ ಸ್ಥಿತಿ ಎನ್ನುವಂತಿದೆ ಎಂದರು. 

ಸ್ವಾತಂತ್ರ್ಯ ಸಿಕ್ಕು 67 ವರ್ಷ ಕಳೆದರೂ ಇಂದಿಗೂ ದೇಶದಲ್ಲಿ ಅಸಮಾನತೆ, ಬಡತನ, ಸಮರ್ಪಕ ಮೂಲ ಸೌಕರ್ಯಗಳ ಲಭ್ಯತೆ ಇಲ್ಲವಾಗುತ್ತಿದೆ. ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ಭಾರತ ವಿಶ್ವದಲ್ಲಿ 130ನೇ ಸ್ಥಾನದಲ್ಲಿದೆ. ಸಂಪತ್ತು ಕೆಲವೇ ಕೆಲವು ಜನರ ಸ್ವತ್ತಾಗಿದೆ. ದೇಶದಲ್ಲಿ ಶೇ.1ರಷ್ಟು ಜನರು ಒಟ್ಟು ಸಂಪತ್ತಿನಲ್ಲಿ ಶೇ.58.4ರಷ್ಟು ಸಂಪತ್ತು ಹೊಂದಿದ್ದಾರೆ ಎಂದರು. 

ಎಲ್‌.ಜಿ. ಹಾವನೂರು ಅವರೊಂದಿಗೆ ತಮ್ಮ ಒಡನಾಟ ಸ್ಮರಿಸಿದ ನ್ಯಾಯಮೂರ್ತಿಯವರು, ಅವರೊಬ್ಬ ಸಾಮಾಜಿಕ ನ್ಯಾಯ ಪರ ಶಕ್ತಿಯಾಗಿದ್ದರಲ್ಲದೆ, ಮಾನವ ಹಕ್ಕುಗಳ ಸಂರಕ್ಷಣೆ, ಹಿಂದುಳಿದ ವರ್ಗಗಳಿಗೆ ಸೌಲಭ್ಯಗಳ ನಿಟ್ಟಿನಲ್ಲಿ ಮಹತ್ವದ  ಕೊಡುಗೆ ನೀಡಿದ್ದಾರೆ. ಅವರ ಪಾಂಡಿತ್ಯ, ಸಂವಿಧಾನ ಮೇಲಿನ ಪ್ರಭುತ್ವ ಗಮನಿಸಿಯೇ ದಕ್ಷಿಣ ಆμÅಕಾದ ಸಂವಿಧಾನ ರಚನೆಗೆ ಅವರನ್ನು ಆಹ್ವಾನಿಸಲಾಗಿತ್ತು ಎಂದರು. 

ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ| ರವಿವರ್ಮ ಕುಮಾರ ಮಾತನಾಡಿ, ಎಲ್‌.ಜಿ. ಹಾವನೂರು ಅವರು ಮೌಲ್ಯಗಳೊಂದಿಗೆ ಬದುಕಿದವರು. ಮಾನವ ಹಕ್ಕುಗಳ ರಕ್ಷಣೆ ಎಂಬುದು ನಮ್ಮ ಕುಟುಂಬದಲಿಂದಲೇ ಆರಂಭವಾಗಬೇಕು. ಜಾತಿ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿಷೇಧವಿದೆ.

ಮಾನವ ಹಕ್ಕುಗಳು ಹಾಗೂ ಸ್ತ್ರೀ ಸಮಾನತೆ ಬಗ್ಗೆ ಬಸವಣ್ಣ ಕಣ್ಣು ತೆರೆಸುವ ಕಾರ್ಯ ಮಾಡಿದ್ದರು ಎಂದರು. ಹಾವನೂರು ಅವರ ಹಿಂದುಳಿದ  ವರ್ಗಗಳ ವರದಿ ಆಧಾರದಲ್ಲೇ ಮಂಡಲ ವರದಿ ರಚನೆಗೊಂಡಿತ್ತು. ನೆಲ್ಸನ್‌ ಮಂಡೇಲಾ ಅವರು ಸುದೀರ್ಘ‌ ಜೈಲುವಾಸದಿಂದ ಬಿಡುಗಡೆಗೊಂಡ ಅನಂತರ ಅಲ್ಲಿನ ರಾಷ್ಟ್ರೀಯ ಕಾಂಗ್ರೆಸ್‌ ಸಂವಿಧಾನ ರಚನೆ ವಿಚಾರದಲ್ಲಿ ವಿಶ್ವದಾದ್ಯಂತ ತಜ್ಞರಿಗಾಗಿ ತಡಕಾಡಿ ಕೊನೆಗೆ ಹಾವನೂರು ಅವರನ್ನು ಆಯ್ಕೆ ಮಾಡಿತ್ತು.

ದಕ್ಷಿಣ ಆμÅಕಾದ ಸಂವಿಧಾನ ರಚನೆಯಲ್ಲಿ ಕನ್ನಡಿಗೊಬ್ಬರ ಪ್ರಮುಖ ಪಾತ್ರ, ಮಾರ್ಗದರ್ಶನ ಇದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು. ದೇಶದಲ್ಲಿ ಮೂಲಭೂತ ವಾದ ಹೆಚ್ಚುತ್ತಿದೆ. ಗೋ ರಕ್ಷಣೆ ಹೆಸರಲ್ಲಿ ಮನುಷ್ಯರ ಹತ್ಯೆ ಹೆಚ್ಚುತ್ತಿದೆ.

ಇಂದು ನಾವು ಮಾನವ ಹಕ್ಕುಗಳನ್ನು ಸಂರಕ್ಷಿಸದಿದ್ದರೆ, ನಾಳೆ ನಮ್ಮ ರಕ್ಷಣೆಗಾಗಿ ಮಾನವ ಹಕ್ಕುಗಳು ಇರುವುದಿಲ್ಲ ಎಂಬ ಎಚ್ಚರಿಕೆ ಸತ್ಯವನ್ನು ಅರಿಯಬೇಕಾಗಿದೆ ಎಂದರು. ಕಾನೂನು ವಿವಿ ಪ್ರಭಾರ ಕುಲಪತಿ ಡಾ| ಸಿ.ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.  ಡಾ| ರತ್ನಾ ಭರಮಗೌಡರ ಸ್ವಾಗತಿಸಿದರು. ಡಾ| ಜಿ.ಬಿ. ಪಾಟೀಲ ವಂದಿಸಿದರು.  

ಟಾಪ್ ನ್ಯೂಸ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.