ಮೋದಿ ಚಿಂತನೆಯಿಂದ ದೇಶ ಬಲಾಡ್ಯ:ಜೋಶಿ
Team Udayavani, Apr 2, 2019, 4:53 PM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯಿಂದ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ದೊಡ್ಡ ದೇಶವಾಗಿ ಬೆಳೆದಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.
ಕಲಘಟಗಿಯ ನ್ಯಾಯಾಲಯ ಸಂಕೀರ್ಣ ದ ವಕೀಲರ ಸಂಘದಲ್ಲಿ ಚುನಾವಣೆ ಪ್ರಯುಕ್ತ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತೀರಾ ಹದಗೆಟ್ಟಿದ್ದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ನೀತಿ, ಪರಿಶ್ರಮ ಹಾಗೂ ಪರಿಣಾಮಕಾರಿ ಯೋಜನೆಗಳಿಂದ ಇಂದು ಭಾರತ 5ನೇ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ಹೇಳಿದರು.
ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಶಿವನಗೌಡರ ಕಾರ್ಯದರ್ಶಿ ರವಿ ತೋಟಮಟಿ, ಎಸ್.ವಿ. ತೆಗ್ಗಿಹಳ್ಳಿ, ರಾಕೇಶ ಅಳಗವಾಡಿ, ಈರಣ್ಣ ಜಡಿ, ವಿ.ಆರ್. ಗಾಣಿಗೇರ ಇನ್ನಿತರರಿದ್ದರು.
ಕೇಶವ ಕುಂಜಕ್ಕೆ ಭೇಟಿ; ಹಿರಿಯರೊಂದಿಗೆ ಚರ್ಚೆ
ಹುಬ್ಬಳ್ಳಿ: ಸ್ಥಳೀಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಗೋಕುಲ ರಸ್ತೆಯಲ್ಲಿರುವ ಆರೆಸ್ಸೆಸ್ ಕಾರ್ಯಾಲಯ ಕೇಶವ ಕುಂಜಕ್ಕೆ ಭೇಟಿ ನೀಡಿ ಚುನಾವಣೆ ಕುರಿತು ಹಿರಿಯರೊಂದಿಗೆ ಚರ್ಚಿಸಿದರು.
ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ ಮಾತನಾಡಿ, ಪ್ರಹ್ಲಾದ ಜೋಶಿಯವರು ನಮ್ಮ ನಾಡಿನ ಸಾಂಸ್ಕೃತಿಕ ರಾಯಭಾರಿಗಳು. ಕ್ಷೇತ್ರದ ಜನತೆ ಅವರನ್ನು ಒಪ್ಪಿಕೊಂಡಿದ್ದಾರೆ. ತಾಳ್ಮೆಯಿಂದ ಪ್ರಚಾರ ಕಾರ್ಯ ಮಾಡುವಂತೆ ಸಲಹೆ ನೀಡಿದರು.
ಸಂಘದ ಹರಿಬಾವೂ ವಜೆ, ವಿಜಯ ಮಹಾಂತೇಶ, ಕಾರ್ಯಾಲಯ ಪ್ರಮುಖರಾದ ಸುರೇಶ ರಾವ್, ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಶಿವು ಕೃಷ್ಣಮೂರ್ತಿ ಮತ್ತು ಸಂಘದ ಹಿರಿಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.