ಹುಬ್ಬಳ್ಳಿ: ಮಗುವಿನ ಶವ ಬಿಟ್ಟು ಆಸ್ಪತ್ರೆಯಿಂದ ಪರಾರಿಯಾದ ದಂಪತಿ
Team Udayavani, Aug 22, 2019, 1:31 PM IST
ಹುಬ್ಬಳ್ಳಿ: ಮಗುವಿನ ಸಾವಿನ ಸುದ್ದಿ ಕೇಳಿದ ದಂಪತಿ ಆಸ್ಪತ್ರೆಯಲ್ಲೆ ಮಗವಿನ ಶವ ಬಿಟ್ಟು ಪರಾರಿಯಾಗಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ .
ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಂಪತಿ ಕರೆ ತಂದಿದ್ದು, ಮಗು ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ದಂಪತಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.
ದಂಪತಿಗಳು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿರುವ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದಂಪತಿಗಳು ಕಾಣದ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ದೃಶ್ಯಾವಳಿ ನೋಡಿದಾಗ ದಂಪತಿಗಳ ಮಾಹಿತಿ ಬಯಲಿಗೆ ಬಂದಿದೆ.
ಮಗುವಿನ ಶವ ಬಿಟ್ಟು ಪರಾರಿಯಾದ ಹಿನ್ನೆಲೆಯಲ್ಲಿ ಕಿಮ್ಸ ವೈದ್ಯರು ವಿದ್ಯಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಮಗುವನ್ನು ದಾಖಲಿಸುವ ಸಂದರ್ಭದಲ್ಲಿ ಹೆಸರು ನೊಂದಾಯಿಸಿದ ಮಾಹಿತಿಯನ್ನು ಪೊಲೀಸರು ಪರಿಶೀಲಿಸಿದಾಗ ದಾದಪೀರ್ ಶೇಕ್ ಹಾಗೂ ಪೂಜಾ ಠಾಕೂರ್ ಎಂಬುವುದು ಗೊತ್ತಾಗಿದೆ.
ನಾಲ್ಕುದ ವರ್ಷ ಮಗುವಾಗಿದ್ದು, ದಂಪತಿಗಳು ಪರಾರಿಯಾಗಿರುವ ಹಿನ್ನೆಲೆಯಲ್ಲಿ ಮಗುವಿನ ಸಾವಿನ ಬಗ್ಗೆ ಅನುಮಾನಗಳು ಶುರುವಾಗಿವೆ.
ದಂಪತಿಗಳು ನೀಡಿರುವ ವಿಳಾಸ ಪೊಲೀಸರು ತಡಕಾಡಿದ್ದು, ಒಂದು ವಾರದ ಹಿಂದೆ ಗೋಕುಲ ಗ್ರಾಮದ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಂಪತಿಗಳು ಅಥವಾ ಮಗುವಿನ ಪಾಲಕರು ಇಲ್ಲದ ಕಾರಣ ಶವ ಪಂನಾಮೆ ಮಾಡಿಲ್ಲ. ಮಗುವಿನ ಕೆನ್ನೆ ಮೇಲೆ ರಕ್ತ ಹೆಪ್ಪುಗಟ್ಟಿದ ಕಲೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮಗುವಿನ ಸಾವಿನ ಬಗ್ಗೆ ಹಲವು ಅನುಮಾನಗಳು ಉದ್ಭವಿಸಿವೆ.
ನೇಕಾರ ನಗರ ನಿವಾಸಿಯಾಗಿರುವ ದಾದಪೀರ್ ಎಪಿಎಂಸಿ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.