ಧಾರವಾಡ: SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ

ಕೋವಿಡ್ ಗುಣಮುಖ ಪ್ರಮಾಣ ಅಧಿಕ: ಆತಂಕ ಬೇಡ: ಖಾಸಗಿ ಆಸ್ಪತ್ರೆಗಳಿಗೆ SDM ಮಾದರಿ: ಸಚಿವ ಜಗದೀಶ್ ಶೆಟ್ಟರ್

Team Udayavani, Jul 17, 2020, 11:06 PM IST

ಧಾರವಾಡ: SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ.

ಲಾಕ್ ಡೌನ್ ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು, ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಿರುವ ಎಸ್.ಡಿ.ಎಂ. ಆಸ್ಪತ್ರೆ ಉಳಿದ ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.

ಸತ್ತೂರಿನ ಎಸ್.ಡಿ.ಎಂ. ಆಸ್ಪತ್ರೆಯಲಗಲಿ ಇಂದು ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಎಸ್.ಡಿ.ಎಂ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಾ ಇತರ ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ‌.

ಕೋವಿಡ್ ವಾರಿಯರ್ ಗಳಾಗಿರುವ ವೈದ್ಯರು, ನರ್ಸ್ ಗಳ ಸೇವೆ ಅನನ್ಯವಾದುದು. ಕೋವಿಡ್ ಬಗ್ಗೆ ಮಾಧ್ಯಮಗಳು ಭಯ ಸೃಷ್ಟಿಸದೇ, ಜಾಗೃತಿ ಮೂಡಿಸಬೇಕು. ಶೇ.64 ರಷ್ಟು ಜನ ಗುಣಮುಖರಾಗಿ ಬಿಡುಗಡೆಯಾಗುತ್ತಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೋವಿಡ್ ತಡೆಗೆ ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ತ್ವರಿತವಾಗಿ ಕಾರ್ಯೋನ್ಮುಖರಾದ ಪರಿಣಾಮ ಇಂದು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತಿದೆ. ಜನರ ಅಭಿಪ್ರಾಯ ಆಧರಿಸಿ ಜಿಲ್ಲೆಯಲ್ಲಿ ಹತ್ತು ದಿನಗಳ ಲಾಕ್ ಡೌನ್ ಜಾರಿಯಲ್ಲಿದೆ. ಪ್ರತಿಯೊಬ್ಬರೂ ಸ್ವಯಂ ನಿರ್ಬಂಧ ಹಾಕಿಕೊಂಡು ಕೋವಿಡ್ 19 ಸೋಂಕು ತಡೆಗಟಗಟ್ಟುವಲ್ಲಿ ಕೈಜೋಡಿಸಬೇಕು ಎಂದರು.

ಆನ್ ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಷಿ ಅವರು, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ.

ಸೋಂಕಿನ ಸರಪಳಿ ತುಂಡರಿಸಲು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಜೊತೆಗೆ ಹೆಚ್ಚು ಪರೀಕ್ಷೆಗಳೂ ಆಗಬೇಕು. ನಮ್ಮ ದೇಶದ ಜನಸಂಖ್ಯೆ, ಜನಸಾಂದ್ರತೆಗೆ ಹೋಲಿಸಿದಾಗ ಕೋವಿಡ್ ನಿಯಂತ್ರಣದಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯುಳ್ಳ ಕ್ರಮಗಳು ಉತ್ತಮ ಪರಿಣಾಮ ನೀಡುತ್ತಿವೆ.

ದೇಶದಲ್ಲಿ ಕಳೆದ ಜನವರಿ 1ರ ಹೊತ್ತಿಗೆ ಪಿಪಿಇ ಕಿಟ್, ಎನ್ 95 ಮಾಸ್ಕ್ ಗಳ ಲಭ್ಯತೆ ವಿರಳವಾಗಿತ್ತು. ಈಗ ಪ್ರತಿನಿತ್ಯ ಭಾರತದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಹೊರದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ.

ಕೋವಿಡ್ ಭಯಾನಕ ಖಾಯಿಲೆಯಲ್ಲ, ಕಳೆದ ಹತ್ತು ವರ್ಷಗಳಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತಮ್ಮ ಆತ್ಮವಿಶ್ವಾಸದಿಂದ ಕೋವಿಡ್ ನಿಂದಲೂ ಗುಣಮುಖರಾಗಿರುವುದನ್ನು ಗಮನಿಸಿದಾಗ ಸಾರ್ವಜನಿಕರ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದರು.

ಗೂಗಲ್ ಮೀಟ್ ಮೂಲಕ ಮಾತನಾಡಿದ,ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರ ಒತ್ತಾಸೆಯಿಂದ ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಕೋವಿಡ್ ತಪಾಸಣೆ ಪ್ರಯೋಗಾಲಯ ಸ್ಥಾಪಿಸಲು, ಐಸಿಎಂಆರ್ ಹಾಗೂ ಎನ್.ಎ.ಬಿ.ಎಲ್ ಮಾನ್ಯತೆ ಶೀಘ್ರ ದೊರಕಲು ಸಾಧ್ಯವಾಗಿದೆ. ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರು,ಅರೆವೈದ್ಯಕೀಯ ಸಿಬ್ಬಂದಿ ಪರಿಶ್ರಮ ಶ್ಲಾಘನೀಯ ಎಂದರು.

ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪಕುಲಪತಿ, ಕಾಲೇಜು ನಿರ್ದೇಶಕ ಡಾ. ನಿರಂಜನ ಕುಮಾರ, ಪ್ರಾಚಾರ್ಯೆ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಅಧೀಕ್ಷಕ ಡಾ. ಕಿರಣ ಹೆಗಡೆ, ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥ ಡಾ. ಆರ್. ಡಿ. ಕುಲಕರ್ಣಿ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ ಕಲ್ಲಾಪುರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.