ಕೋವಿಡ್-19 ಚಿಕಿತ್ಸೆ ವೆಚ್ಚ ಯಾರ ಹೆಗಲಿಗೆ?
ಸರ್ಕಾರಿ ವ್ಯವಸ್ಥೆ ಬಿಟ್ಟು ಹೋದರೆ ಬಿಲ್ ಕಟ್ಟಲ್ಲ ಎನ್ನುತ್ತಿದೆ ಜಿಲ್ಲಾಡಳಿತ
Team Udayavani, Jul 22, 2020, 8:28 AM IST
ಧಾರವಾಡ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಹರಡುತ್ತಿದ್ದು, ಇದೀಗ ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲ ಖಾಸಗಿ ಆಸ್ಪತ್ರೆಗಳ ಅವಲಂಬನೆ ಜಿಲ್ಲಾಡಳಿತಕ್ಕೆ ಅನಿವಾರ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯ 22 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಶೇ.50 ಹಾಸಿಗೆಗಳನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿಡಲು ಸೂಚಿಸಿದೆ. ಆದರೆ ಕೋವಿಡ್ ಸೋಂಕು ತಗುಲಿದವರನ್ನು ಈವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಲಾಗುತ್ತಿತ್ತು. ಇದೀಗ ಖಾಸಗಿ ಆಸ್ಪತ್ರೆಗಳತ್ತ ಸರ್ಕಾರ ಬೆರಳು ತೋರಿಸುತ್ತಿದ್ದು, ಅನೇಕ ಗೊಂದಲಕಾರಿ ಅಂಶಗಳು ಸಾರ್ವಜನಿಕರನ್ನು ಪೀಡಿಸುತ್ತಿವೆ.
ಕೋವಿಡ್-19 ತಗುಲಿದವರು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದರ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಕೂಡ ಈಗಾಗಲೇ ಭರವಸೆ ನೀಡಿದೆ. ಆದರೂ ಈ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ನಡೆದುಕೊಳ್ಳುವ ರೀತಿ ಕೊರೊನಾ ಸೋಂಕಿತರಲ್ಲಿ ಆತಂಕ ಮೂಡಿಸಿದೆ.
22 ಆಸ್ಪತ್ರೆಗಳು ಸಿದ್ಧ: ಜಿಲ್ಲೆಯಲ್ಲಿ 22 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸರ್ಕಾರ ಯೋಜಿಸಿ, ಆಸ್ಪತ್ರೆಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ ಯೋಜನೆಯಡಿ ಆಯ್ಕೆಯಾದ ಆಸ್ಪತ್ರೆಗಳೇ ಕೋವಿಡ್ ಚಿಕಿತ್ಸೆಗೆ ಬಳಕೆಯಾಗುತ್ತಿವೆ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು ಲಭ್ಯವಿರುವ ಹಾಸಿಗೆಗಳು 1750 ಮಾತ್ರ. ಈ ಪೈಕಿ ಕೋವಿಡ್ ರೋಗಿಗಳಿಗಾಗಿ ಮೀಸಲಿಟ್ಟ ಹಾಸಿಗೆಗಳು ಬರೀ 440 ಇದ್ದು, ಇವು ಈಗಾಗಲೇ ಭರ್ತಿಯಾಗಿವೆ. ಇದೀಗ ಸೋಂಕಿತರ ಸಂಖ್ಯೆ ಹೆಚ್ಚಾದಂತೆಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅನಿವಾರ್ಯವಾಗಿದೆ. ಒಟ್ಟು 22 ಖಾಸಗಿ ಆಸ್ಪತ್ರೆಗಳಲ್ಲಿ ಸದ್ಯಕ್ಕೆ ಅಂದಾಜು 1500 ಹಾಸಿಗೆಗಳಿದ್ದು, ಈ ಪೈಕಿ ಶೇ.50 ಎಂದರೆ ಸುಮಾರು 750 ಹಾಸಿಗೆಗಳನ್ನು ಶೀಘ್ರವಾಗಿಯೇ ಕೋವಿಡ್ ಚಿಕಿತ್ಸೆಗೆ ಪಡೆದುಕೊಳ್ಳ ಬಹುದಾಗಿದೆ. ಇನ್ನು ಹೆಚ್ಚುವರಿಯಾಗಿ ಕೋವಿಡ್ ಚಿಕಿತ್ಸೆಗಾಗಿಯೇ ಪತ್ರಿಯೊಂದು ಆಸ್ಪತ್ರೆಗೂ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತಿದೆ. ಅದೂ ಅಲ್ಲದೆ ವಿಶೇಷ ತಾತ್ಕಾಲಿಕ ಆಸ್ಪತ್ರೆಗಳನ್ನು ಕೂಡ ತೆರೆಯುವುದಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ನೇರವಾಗಿ ಹೋದರೆ ಬಿಲ್ ಕಟ್ಟಬೇಕು! : ಸರ್ಕಾರದ ಕೋವಿಡ್ ಪರೀಕ್ಷೆ ವ್ಯವಸ್ಥೆಯ ಮೂಲಕ ಹೋದವರಿಗೆ ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಯಾರು ಹೋಗಿ ಚಿಕಿತ್ಸೆ ಪಡೆದುಕೊಳ್ಳುತ್ತಾರೆಯೋ ಅವರ ವೆಚ್ಚವನ್ನು ಸರ್ಕಾರ ಭರಿಸುವುದಿಲ್ಲ. ಅದೂ ಅಲ್ಲದೇ ಸರ್ಕಾರ ಈ ವಿಚಾರದಲ್ಲಿ ಸಾರ್ವಜನಿಕರ ಪ್ರಾಮಾಣಿಕ ಸಹಭಾಗಿತ್ವ ಬಯಸುತ್ತಿದ್ದು, ಸಮಯಕ್ಕೆ ಸರಿಯಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಸರ್ಕಾರಿ ಆಸ್ಪತ್ರೆಯ ಬಾಗಿಲು ತಟ್ಟಿದವರಿಗೆ ಖಂಡಿತವಾಗಿಯೂ ಉಚಿತವಾಗಿ ಚಿಕಿತ್ಸೆ ಲಭ್ಯವಾಗಲಿದೆ. ವಿಳಂಬವಾಗಿ ತಾವೇ ಖಾಸಗಿ ಆಸ್ಪತ್ರೆ ಬಾಗಿಲು ಬಡಿದರೆ ಅದನ್ನು ಆಯಾ ವ್ಯಕ್ತಿಗಳು ಭರಿಸಬೇಕು ಎನ್ನುತ್ತಿದ್ದಾರೆ ಅಧಿಕಾರಿಗಳು.
ಮೊದಲು ನಮ್ಮನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದೀಗ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ ಎಂದು ಕೇಳುತ್ತಿದ್ದಾರೆ. ನಮ್ಮ ಬಳಿ ಬಿಪಿಎಲ್ ಕಾರ್ಡ್ ಇಲ್ಲ. ಹಾಗಿದ್ದರೆ ನಾವು ಆಸ್ಪತ್ರೆಯ ವೆಚ್ಚವನ್ನು ಭರಿಸಬೇಕೆ? ಈ ಸಮಸ್ಯೆಯನ್ನು ಯಾರಿಗೆ ಹೇಳ್ಳೋದು –ರಾಧಿಕಾ, ಕೋವಿಡ್ ಸೋಂಕಿತೆ (ಹೆಸರು ಬದಲಿಸಲಾಗಿದೆ)
ಸದ್ಯಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಇನ್ನಷ್ಟು ಹಾಸಿಗೆಗಳು ಸಿದ್ಧಗೊಳ್ಳುತ್ತವೆ. ಸರ್ಕಾರದ ವ್ಯವಸ್ಥೆಯಡಿ ಚಿಕಿತ್ಸೆಗೆ ಬರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. –ನಿತೇಶ ಪಾಟೀಲ, ಜಿಲ್ಲಾಧಿಕಾರಿ
–ಬಸವರಾಜ ಹೊಂಗಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.