ಬದುಕಿನ ಭಾಗವಾಗಿ ಕೋವಿಡ್ ಎದುರಿಸಬೇಕಿದೆ: ಸಚಿವ ಶೆಟ್ಟರ
Team Udayavani, May 20, 2020, 4:25 AM IST
ಹುಬ್ಬಳ್ಳಿ: ಕೋವಿಡ್-19 ಸೋಂಕು ಕೆಲವು ದಿನ,ತಿಂಗಳಿನದು ಎಂದು ಭಾವಿಸುವಂತಹದ್ದಲ್ಲ. ಇದು ಜೀವನದ ಒಂದು ಭಾಗವಾಗಿದ್ದು, ಅದನ್ನು ಎದುರಿಸಬೇಕಾಗಿದೆ. ಜೊತೆಗೆ ನಮ್ಮ ದಿನನಿತ್ಯದ ಆರ್ಥಿಕ ಚಟುವಟಿಕೆಗಳು, ಜನಜೀವನ ನಡೆಯಬೇಕು ಎಂದು ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್-19 ವೈರಸ್‌ನಿಂದ ನೂರಾರು ವರ್ಷಗಳಲ್ಲಿ ಮೊದಲ ಬಾರಿ ಇಂತಹ ಸಂಕಷ್ಟ, ಎದುರಿಸುತ್ತಿದ್ದೇವೆ. ಲಾಕ್ ಡೌನ್ ಸಡಿಲಿಕೆ ಮಾಡಿದಾಗ ಒಂದಿಷ್ಟು ಸಮಸ್ಯೆಗಳು ಉದ್ಭವಿಸುತ್ತವೆ. ಮಂಗಳವಾರದಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭಿಸಲಾಗಿದ್ದು, ಸೋಂಕು ಹರಡುವಲ್ಲಿ ಎದುರಾಗುವ ತೊಂದರೆಗಳನ್ನು ನೋಡಿಕೊಂಡು ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಸರಕಾರ ಕೈಗೊಳ್ಳಲಿದೆ. ಜನರು ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರಕಾರ ಲೋಪ-ದೋಷಗಳನ್ನು ಸರಿಪಡಿಸಿಕೊಂಡು ಮುನ್ನೆಚ್ಚರಿಕೆಯಿಂದ ಕಾರ್ಯಗಳನ್ನು ಮಾಡುತ್ತದೆ. ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ. ಆ ಕುರಿತು ಹೆಚ್ಚಿಗೆ ಮಾತನಾಡಲಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.