ಸತ್ತವರ ನೆರಳು, ಜಿಲ್ಲೆಗೆ ಉರುಳು

ಸೋಂಕಿತರ ಸಂಖ್ಯೆ ಇಳಿಮುಖ | ಸಾವಿನ ಸಂಖ್ಯೆ ಏರುಮುಖ | ಎರಡನೇ ಸ್ಥಾನಕ್ಕೇರಿದ ಧಾರವಾಡ

Team Udayavani, Jun 1, 2021, 5:29 PM IST

98488

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ಏರುಮುಖ ಮಾಡಿದ್ದು, ಸಾವಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಧಾರವಾಡ ಜಿಲ್ಲೆಗೆ 2ನೇ ಸ್ಥಾನ ಸಿಕ್ಕಿದೆ.

ಮೇ 30ರಂದು ಒಂದೇ ದಿನಕ್ಕೆ 19 ಸೋಂಕಿತರು ಮೃತಪಟ್ಟ ಸಂಖ್ಯೆ ಲಭಿಸಿದ್ದು, ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿನ ನಂತರದ ಸ್ಥಾನ ಜಿಲ್ಲೆಗೆ ಲಭಿಸಿದೆ. ಅದರ ಹಿಂದಿನ ದಿನವೂ (ಮೇ 29) ರಂದು 19 ಜನ ಸೋಂಕಿತರು ಮೃತಪಟ್ಟು, ರಾಜ್ಯಕ್ಕೆ 3ನೇ ಸ್ಥಾನ ಪಡೆದಿತ್ತು. (ಮೇ 31) ಮತ್ತೆ 10 ಜನ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ 10ರೊಳಗಿದ್ದ ಸಾವಿನ ಸಂಖ್ಯೆ ಅದರ ಗಡಿ ದಾಟಿದೆ. ಇದಲ್ಲದೇ ಐಸಿಯು ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆಯೂ ಏರುತ್ತಲೇ ಇದೆ.

ಸದ್ಯ 500ಕ್ಕೂ ಹೆಚ್ಚು ಸೋಂಕಿತರು ಐಸಿಯು ಬೆಡ್‌ ನಲ್ಲಿ ಚಿಕಿತ್ಸೆ ಪಡೆದಿದ್ದರೆ, ವೆಂಟಿಲೇಟರ್‌ಗಳೆಲ್ಲವೂ ಕಾರ್ಯ ನಿರ್ವಹಣೆಯಲ್ಲಿವೆ. ಏರುತ್ತಲಿದೆ ಸಾವಿನ ಸಂಖ್ಯೆ: ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಕಳೆದ ಏಪ್ರಿಲ್‌ನಿಂದ ಈ ವರ್ಷದ ಮೇ 31ರವರೆಗೆ ಕೋವಿಡ್‌ನಿಂದ ಮರಣ ಹೊಂದಿದವರ ಸಂಖ್ಯೆ 969 ಇದ್ದರೆ ಕೋವಿಡ್‌ ಅಲ್ಲದ ಅನ್ಯ ಕಾರಣದಿಂದ ಮರಣ ಹೊಂದಿದ್ದು ಕೇವಲ ಒಬ್ಬರಷ್ಟೇ. ಈ ಪೈಕಿ 2021ರ ಏ. 1ರಿಂದ ಮೇ 31ರವರೆಗೆ ಕೋವಿಡ್‌ನಿಂದ ಸತ್ತವರು 344. ಏಪ್ರಿಲ್‌ ತಿಂಗಳಲ್ಲಿ 77 ಜನ ಸೋಂಕಿತರು ಮೃತಪಟ್ಟಿದ್ದರೆ ಕೇವಲ ಮೇ ತಿಂಗಳೊಂದರಲ್ಲಿಯೇ ಸತ್ತವರು 267.

ಈ ಅಂಕಿ-ಅಂಶ ಅವಲೋಕಿಸಿದಾಗ ಕಳೆದ ವರ್ಷಕ್ಕಿಂತ ಈ ವರ್ಷ ಕೋವಿಡ್‌ ಹೊಡೆತಕ್ಕೆ ಬಲಿಯಾದವರ ಸಂಖ್ಯೆ ಏರುಮುಖ ಮಾಡಿದೆ. ಬರೀ ಎರಡು ತಿಂಗಳಲ್ಲಿಯೇ 344 ಜನರು ಕೋವಿಡ್‌ಗೆ ಬಲಿಯಾಗಿದ್ದು, ಕೋವಿಡ್‌ ಕರಾಳತೆಗೆ ಸಾಕ್ಷಿಯಾಗಿದೆ.

ಸಾವಿಗೆ ಕಾರಣವೇನು?: ಕೋವಿಡ್‌ ಗುಣಲಕ್ಷಣ ವಿದ್ದರೂ ನಿರ್ಲಕ್ಷé ಮಾಡಿದ ಪರಿಣಾಮ ಸಾವಿನ ಸಂಖ್ಯೆ ಏರಲು ಕಾರಣವೆನ್ನುತ್ತಾರೆ ತಜ್ಞ ವೈದ್ಯರು. ಸೌಮ್ಯ ಗುಣ ಲಕ್ಷಣಗಳು ಕಂಡುಬಂದಾಗಲೇ ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳದೇ ಮನೆಯಲ್ಲೇ ಉಳಿದು, ಕೊನೆಯ ಕ್ಷಣದಲ್ಲಿ ಆಸ್ಪತ್ರೆ ಬಾಗಿಲು ತಟ್ಟುವುದು, ಕೋವಿಡ್‌ ದೃಢಪಟ್ಟ ಬಳಿಕವೂ ಹೋಮ್‌ ಐಸೋಲೇಷನ್‌ ಗೆ ಅಷ್ಟೇ ಒಳಗಾಗಿದ್ದಲ್ಲದೇ ಕೋವಿಡ್‌ ಕಾಳಜಿ ಕೇಂದ್ರಕ್ಕೆ ಹೋಗಲು ಹಿಂದೇಟು ಹಾಕುವುದು, ಕೋವಿಡ್‌ನ‌ 2ನೇ ಅಲೆ ಆರಂಭಕ್ಕೆ ನಿಗದಿತ ಸಮಯಕ್ಕೆ ಆಕ್ಸಿಜನ್‌ ಬೆಡ್‌-ವೆಂಟಿಲೇಟರ್‌ ಕೊರತೆ ಹಾಗೂ ಸೂಕ್ತ ಚಿಕಿತ್ಸೆ ಅಲಭ್ಯತೆಯಿಂದ ಸಾವಿನ ಸಂಖ್ಯೆ ಏರಿಕೆಗೆ ಕಾರಣವಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿದಂತೆ ಇನ್ನಿತರೆ ಕಾಯಿಲೆಗಳ ಉಲ್ಬಣದಿಂದಲೂ ಕೋವಿಡ್‌ ಸೋಂಕಿತರು ಬಲಿಯಾಗಿದ್ದಾರೆ ಅಂದರೆ ತಪ್ಪಾಗಲಾರದು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.