ಪಾಸಿಟಿವ್ ಸ್ಟೋರಿ : ಕೋವಿಡ್ ಗೆದ್ದ ಒಂದೇ ಕುಟುಂಬದ 16 ಮಂದಿ..!
Team Udayavani, May 21, 2021, 6:36 PM IST
ಹುಬ್ಬಳ್ಳಿ : ಕೋವಿಡ್ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆದರೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಇದನ್ನೂ ಓದಿ : ಒಬ್ಬ ಮಹಿಳೆಗೆ ಅನ್ಯಾಯವಾಗಿದೆ, ಶೀಘ್ರವೇ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ : ಸಾವಂತ್
ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಮಂದಿ ಇದೇ ತಿಂಗಳು 3ನೇ ತಾರೀಖಿನಂದು ಕೋವಿಡ್ ಪಾಸಿಟಿವ್ ಆಗಿದ್ದರು, ಹೋಮ್ ಐಸೋಲೇಷನ್ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ಇದರಲ್ಲಿ ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಈ ಪೈಕಿ 45 ವರ್ಷ ಮೇಲ್ಪಟ್ಟ ನಾಲ್ವರು ಈ ಮೊದಲೇ ಎರಡನೆ ಡೊಸ್ಸ್ ವ್ಯಾಕ್ಸಿನೇಷನ್ ಮಾಡಿಸಿಕೊಂಡಿದ್ದರು ಹಾಗೂ ವ್ಯಾಕ್ಸಿನೇಷನ್ ಮಾಡಿಸಿಕೊಂಡಿದ್ದರು ಇತರ ಮೂರು ಮಂದಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ಈ ಕುರಿತಾಗಿ ಪ್ರತಿಕ್ರಿಯಿಸಿದ ಕುಟುಂಬದ ಮುಖ್ಯಸ್ಥ ಮಲ್ಲಯ್ಯ ಶಿವಳ್ಳಿಮಠ, ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೇ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು, ಎಂದು ಹೇಳಿದರು.
ಪೋಟೊದಲ್ಲಿ ಇರುವಂತೆ ಎಡದಿಂದ ಬಲಕ್ಕೆ ರಾಜು(34), ಶ್ರೇಯಾ (10ತಿಂಗಳು), ಲಕ್ಷ್ಮಿ(25), ವೈಭವಿ(1), ಶಶಿಕಲಾ(24), ಸಮರ್ಥ (2), ಸಹನಾ(16),ವೈಷ್ಣವಿ(2),ಗಿರಿಜಮ್ಮ(60),ಶರಣಯ್ಯಾ(9), ಮಲ್ಲಯ್ಯ (63),ಮಹಾಂತಯ್ಯ(60), ಸಿದ್ದರಾಮಯ್ಯ(59) ಮಲ್ಲಿಕಾರ್ಜುನ (25), ಮಲ್ಲಿಕಾರ್ಜುನಯ್ಯಾ(28), ಮೃತ್ಯುಂಜಯ(27).
ಇದನ್ನೂ ಓದಿ : ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.