14,072 ಜನರ ಕೋವಿಡ್ ಪರೀಕ್ಷೆ

ಮಹಾಮಾರಿಗೆ ಜಿಲ್ಲಾಡಳಿತದಿಂದ ದಿಗ್ಬಂಧನ

Team Udayavani, May 29, 2020, 8:53 AM IST

14,072 ಜನರ ಕೋವಿಡ್ ಪರೀಕ್ಷೆ

ಹುಬ್ಬಳ್ಳಿ: ಕೋವಿಡ್ ಸೋಂಕು ತಡೆ ಹಾಗೂ ಸೋಂಕಿತರ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದೆ. ಜಿಲ್ಲೆಯಲ್ಲಿ ಈವರೆಗೆ 14,072 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡುವುದರೊಂದಿಗೆ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಜಿಲ್ಲೆಯಲ್ಲಿ ಪಿ-21 ಪ್ರಕರಣ ಜನರನ್ನು ಆತಂಕಕ್ಕೆ ದೂಡಿತ್ತು. ಮೊದಲ ಪ್ರಕರಣದ ಸಂದರ್ಭದಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ದಿಟ್ಟ ಕ್ರಮಗಳ ಪರಿಣಾಮ ಹೆಚ್ಚು ಜನ ಸಂಪರ್ಕವಿರುವ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗಲು ಕಾರಣವಾಯಿತು. ಇನ್ನೂ ಹುಬ್ಬಳ್ಳಿಯಲ್ಲಿ ಮುಲ್ಲಾ ಓಣಿಯ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಕೊಂಚ ಯಾಮಾರಿದ್ದರೂ ಹುಬ್ಬಳ್ಳಿ ಕೋವಿಡ್ ಹಾಟ್‌ಸ್ಪಾಟ್‌ ಆಗಿರುತ್ತಿತ್ತು.

ವಾಣಿಜ್ಯ ನಗರಿಯ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲಾಡಳಿತ ಆರೋಗ್ಯ, ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಬೆಸೆದು ಸನ್ನಿವೇಶ ಎದುರಿಸಲು ಸಜ್ಜುಗೊಳಿಸಿತು. ಹೊಸ ಯಲ್ಲಾಪುರ ಭಾಗದಲ್ಲಿ ಕೈಗೊಂಡ ಮಾದರಿ ಕಾರ್ಯವನ್ನು ಮುಲ್ಲಾ ಓಣಿಯಲ್ಲಿ ಮತ್ತಷ್ಟು ಬಿಗಿಯಾಗಿ ಅನುಷ್ಠಾನಗೊಳಿಸಿತು. ಶಾಂತಿ ನಗರ ಹಾಗೂ ನವಲೂರಿನ ಸೋಂಕಿತರ ಪ್ರಯಾಣದ ಹಿಸ್ಟರಿ ಜಿಲ್ಲೆಯ ಜನತೆಯನ್ನು ಮತ್ತಷ್ಟು ಬೆಚ್ಚಿ ಬೀಳಿಸಿತ್ತು. ಇಂತಹ ಸಂದರ್ಭದಲ್ಲಿ ಮಹಾನಗರ, ಜಿಲ್ಲಾ ಗಡಿಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ನಿರ್ಮಿಸಿದ ಚೆಕ್‌ಪೋಸ್ಟ್‌, ಸೀಲ್‌ಡೌನ್‌, ಕ್ವಾರಂಟೈನ್‌ನಂತಹ ಕಟ್ಟುನಿಟ್ಟಿನ ಕಾರ್ಯನಿರ್ವಹಣೆ ಪರಿಣಾಮ ಸೋಂಕಿತರ, ಶಂಕಿತರ ಬೇಕಾಬಿಟ್ಟಿ ಓಡಾಟಕ್ಕೆ ಕಡಿವಾಣ ಹೇರಲಾಯಿತು.

14,072 ಜನರ ಪರೀಕ್ಷೆ: ಸೋಂಕಿತ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಸಕಾಲಕ್ಕೆ ಪತ್ತೆ ಹಚ್ಚಿ ದಿಗ್ಬಂಧನಕ್ಕೊಳಪಡಿಸಿದ್ದು ನಿಜಕ್ಕೂ ಮೆಚ್ಚುಗೆ ಕಾರ್ಯ. ಸೋಂಕಿತನ ಮಾಹಿತಿ, ತಂತ್ರಜ್ಞಾನದ ಸಹಾಯದಿಂದ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ-656, ದ್ವಿತೀಯ ಸಂಪರ್ಕ-1201 ಜನರ ಗಂಟಲು ದ್ರವ ಸಂಗ್ರಹಿಸಿ ತಪಾಸಣೆ ಮಾಡಿದಾಗ ಪ್ರಾಥಮಿಕ 10 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಓರ್ವ ಸೇರಿ 11 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 14,072 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿರುವುದು ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮಾದರಿ ಕಾರ್ಯವಾಗಿದೆ. 619 ಜನರನ್ನು ಇಲ್ಲಿಯವರೆಗೆ ಹಂತ ಹಂತವಾಗಿ ಪರೀಕ್ಷೆಗೆ ಒಳಪಡಿಸಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿತ್ತು.

ಕೈಹಿಡಿದ ತಂತ್ರಗಾರಿಕೆ: ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಪತ್ತೆ ಒಂದೆಡೆಯಾದರೆ ಆರೋಗ್ಯ ಕಾರ್ಯಕರ್ತರು ನಡೆಸಿದ ಸರ್ವೇ ಕಾರ್ಯದಲ್ಲಿ ಸೋಂಕಿನ ಲಕ್ಷಣವುಳ್ಳ 332 ಜನರ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದಾರೆ. ಇನ್ನೂ ಖಾಸಗಿ ಕ್ಲಿನಿಕ್‌, ಔಷಧಿ ಅಂಗಡಿಗಳ ಮೂಲಕ ಹೆಣೆದ ತಂತ್ರಗಾರಿಕೆಯೂ ಜಿಲ್ಲಾಡಳಿತಕ್ಕೆ ನೆರವಾಗಿದೆ. ಸೋಂಕಿನ ಪ್ರಮುಖ ಲಕ್ಷಣಗಳಾದ ಕೆಮ್ಮು, ನೆಗಡಿ, ವಿಪರೀತ ಜ್ವರ (ಐಎಲ್‌ಐ)ಇರುವ 870 ಹಾಗೂ ತೀವ್ರ ಉಸಿರಾಟದ ತೊಂದರೆ (ಎಸ್ ಎಆರ್‌ಐ) ಇರುವ 332 ಜನರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಒಂದು ಪಾಸಿಟಿವ್‌ ಪ್ರಕರಣ ಬಯಲಿಗೆ ಬಂದಿತ್ತು. ಇನ್ನೂ ಗರ್ಭಿಣಿಯರ ಬಗ್ಗೆ ಅತೀ ಹೆಚ್ಚು ಕಾಳಜಿ ತೋರಿದ ಜಿಲ್ಲಾಡಳಿತ ಶಂಕೆಯ ಮೇಲೆ 199 ಗರ್ಭಿಣಿಯರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದೆ.

1,280 ಜನರ ವರದಿ ನಿರೀಕ್ಷೆಯಲ್ಲಿ: ಜಿಲ್ಲೆಯಲ್ಲಿ ತಬ್ಲಿಘಿ ಜಮಾತೆಯಲ್ಲಿ ಪಾಲ್ಗೊಂಡ ಒಬ್ಬರೂ ಸೋಂಕಿತರಿಲ್ಲ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ವರದಿ ಬಾಕಿಯೂ ಇಲ್ಲ. ಜಿಲ್ಲೆಯಲ್ಲಿ ಪಾಸಿಟಿವ್‌ ಪ್ರಕರಣ ಪತ್ತೆಯಾಗುತ್ತಿರುವುದು ವಿವಿಧ ರಾಜ್ಯಗಳಿಂದ ಬಂದವರು. ಹೀಗಾಗಿ ಇವರ ಮೇಲೆ ತೀವ್ರ ನಿಗಾ ವಹಿಸಿ ಪ್ರತಿಯೊಬ್ಬರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಇಲ್ಲಿಯವರೆಗೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ಒಟ್ಟಾರೆ 9428 ಜನರನ್ನು ಪತ್ತೆ ಹಚ್ಚಲಾಗಿದ್ದು, 9248 ಜನರ ಗಂಟಲು ದ್ರವ ಪರೀಕ್ಷೆಗೊಳಪಡಿಸಿದಾಗ 27 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಪರೀಕ್ಷಾ ವರದಿ ಬಾಕಿ ಇರುವವರಲ್ಲಿ 1035 ಜನ ವಿವಿಧ ರಾಜ್ಯಗಳಿಂದ ಬಂದವರಾಗಿದ್ದಾರೆ. ಉಳಿದಂತೆ ವಲ್ನರೇಬಲ್‌ 78, ಐಎಲ್‌ಐ 95, ಎಸ್‌ಎಆರ್‌ಐ 25 ಹಾಗೂ ಗರ್ಭಿಣಿಯರು 199, ಪ್ರಾಥಮಿಕ 53 ಜನರ ಪ್ರಯೋಗಾಲಯದ ವರದಿ ನಿರೀಕ್ಷೆಯಲ್ಲಿದೆ.

ಜಿಲ್ಲೆಯಲ್ಲಿ ಹೆಚ್ಚು ಜನರನ್ನು ಕೋವಿಡ್‌-19 ತಪಾಸಣೆಗೆ ಒಳಪಡಿಸುವ ಮೂಲಕ ರಾಜ್ಯದ ಉಳಿದ ಜಿಲ್ಲೆಗಳಿಗೆ ಧಾರವಾಡ ಮಾದರಿಯಾಗಿದೆ. ಜಿಲ್ಲಾಡಳಿತ, ಕಿಮ್ಸ್‌, ಆರೋಗ್ಯ, ಪಾಲಿಕೆ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಗಳು ಕೋವಿಡ್‌ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ.– ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ

ಕೇಂದ್ರ, ರಾಜ್ಯ ಸರಕಾರಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ವಿವಿಧ ಇಲಾಖೆಗಳ ಸಮನ್ವಯ ಕಾರ್ಯ, ಖಾಸಗಿ ಆಸ್ಪತ್ರೆ, ಔಷಧಿ ಅಂಗಡಿಗಳ ಮಾಹಿತಿ ಆಧರಿಸಿ ಕೆಮ್ಮು, ನೆಗಡಿ, ತೀವ್ರ ಜ್ವರ, ಉಸಿರಾಟ ಸಮಸ್ಯೆಯುಳ್ಳವರ ಮಾಹಿತಿ ಆಧರಿಸಿ ಕೋವಿಡ್‌-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅವರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಹಾಗೂ ಸಲಹೆ ನೀಡಲಾಗುತ್ತಿದೆ. – ದೀಪಾ ಚೋಳನ್‌, ಜಿಲ್ಲಾಧಿಕಾರಿ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.