ಲಸಿಕೆ ಹಾಕಿಸಿಕೊಂಡು ಕೋವಿಡ್ ಮುಕ್ತಿಗೆ ಯತ್ನಿಸಿ
Team Udayavani, Apr 14, 2021, 2:59 PM IST
ಧಾರವಾಡ: 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡು ಕೋವಿಡ್ ಮುಕ್ತ ಸಮಾಜಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ ಹೇಳಿದರು.
ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮದಾರಮಡ್ಡಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಲಸಿಕಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಲಸಿಕೆ ಸಂಜೀವಿನಿ ಇದ್ದಂತೆ. ಅದನ್ನು ತೆಗೆದುಕೊಳ್ಳಿ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಮಾಸ್ಕ್ ಧರಿಸಿ. ಸ್ಯಾನಿಟೈಸರ್ ಉಪಯೋಗಿಸಿ ಎಂದರು.
ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಂಕರ ಶಳಕೆ ಮಾತನಾಡಿ, ಕೋವಿಡ್-19ಲಸಿಕೆಯಿಂದ ಯಾವುದೇ ತೊಂದರೆ ಇಲ್ಲ. ಭಯ ಪಡದೆ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ ಹಾಗೂ ಪಡೆಯುವವರಿಗೆ ಆತ್ಮವಿಶ್ವಾಸ ತುಂಬಿ ಎಂದು ಹೇಳಿದರು.
ಮದಾರಮಡ್ಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರುಣಾ ಅಧ್ಯಕ್ಷತೆ ವಹಿಸಿದ್ದರು. ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಈಶ್ವರ ಸಾಣಿಕೊಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಧಿಕಾರಿಡಾ|ಅಯ್ಯನಗೌಡ ಪಾಟೀಲ, ಜಿಲ್ಲಾ ಸಮೀಕ್ಷಣಾ ಧಿಕಾರಿ ಡಾ| ಸುಜಾತಾ ಹಸವಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಇದ್ದರು. ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್. ಅಗಡಿಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ರೇಖಾ ಬಾಡಗಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.