ಕೋವಿಡ್ ಲಸಿಕೆ ಶೇ.46 ಸಾಧನೆ

Team Udayavani, Feb 1, 2021, 12:20 PM IST

Covid Vaccine 46% Performance

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಅಸ್ತ್ರವಾಗಿರುವ ಕೋವಿಶಿಲ್ಡ್‌ ಲಸಿಕೆ ಹಾಕುವ ಕಾರ್ಯ ಜಿಲ್ಲೆಯ 137 ಕೇಂದ್ರಗಳಲ್ಲಿ ಸಾಗಿದೆ. ಆದರೆ ಲಸಿಕೆಯ ಅಡ್ಡಪರಿಣಾಮಗಳ ಆತಂಕ ಮತ್ತು ಇತರೇ ಕಾರಣಗಳಿಂದ ಲಸಿಕೆ ಹಾಕಿಕೊಳ್ಳಲು ಹಿಂದೇಟು ಹಾಕುವಂತಾಗಿದೆ.

ಜ.16ರಿಂದ ಕೋವಿಶಿಲ್ಡ್‌ ಲಸಿಕೆ ಹಾಕುವ ಕಾರ್ಯ ಭರದಿಂದ ಸಾಗಿದ್ದು, ಆದರೆ ಲಸಿಕೆ ಪಡೆಯಲು ಹೆಸರು ನೋಂದಣಿ ಮಾಡಿಕೊಂಡಿದ್ದವರಿಂದಲೇ ನಿರಾಸಕ್ತಿ ವ್ಯಕ್ತವಾಗಿದೆ. ಈವರೆಗೆ ನಿಗದಿತ ತಲುಪಲಾಗಿಲ್ಲವಾದರೂ ಶೇ.46ರಷ್ಟು ಸಾಧನೆ ಮಾತ್ರವೇ ಆಗಿದ್ದು, ಕೋವಿಶಿಲ್ಡ್‌ ಲಸಿಕಾಕರಣಕ್ಕೆ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗದಂತಾಗಿದೆ.

ಜಿಲ್ಲೆಯಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡ 27,669 ಜನರ ಪೈಕಿ ಈವರೆಗೆ 18,471 ಜನರಿಗೆ ಲಸಿಕೆ ಪಡೆದುಕೊಳ್ಳಲು ಆರೋಗ್ಯ ಇಲಾಖೆಯಿಂದ ಸಮಯ ನಿಗದಿಪಡಿಸಿ, ಸಂದೇಶ ನೀಡಲಾಗಿತ್ತು. ಈ ಪೈಕಿ 8560 ಜನರು ಲಸಿಕೆ ಹಾಕಿಸಿಕೊಂಡಿದ್ದು, ಉಳಿದ 9911 ಜನರಿಂದ ಈವರೆಗೂ ಸ್ಪಂದನೆ ಲಭಿಸಿಲ್ಲ. ಇನ್ನುಳಿದ 9198 ಜನರಿಗೆ ಸಮಯ ನಿಗದಿಗೊಳಿಸಿ, ಸಂಪರ್ಕಿಸುವ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಲ್ಲ. ಆದರೆ ಸ್ವಯಂ ಪ್ರೇರಣೆಯಿಂದಲೇ ಹೆಸರು ನೋಂದಣಿ ಮಾಡಿಕೊಂಡವರೇ ಲಸಿಕೆ ಹಾಕಿಸಿಕೊಂಡ ಕೆಲವರಲ್ಲಿ ಕಂಡು ಬಂದಿರುವ ಕೆಲ ಅಡ್ಡಪರಿಣಾಮ ಲಕ್ಷಣಗಳಿಂದ ಆತಂಕಕ್ಕೆ ಒಳಗಾಗಿ ಲಸಿಕೆ ಹಾಕಿಕೊಳ್ಳಲು ಹಿಂದೇಟು ಹಾಕುವಂತಾಗಿದೆ. ಲಸಿಕೆ ಹಾಕಿಸಿಕೊಳ್ಳಲು ಒತ್ತಾಯ ಮಾಡದೆ ನಿಗದಿಪಡಿಸಿದ ದಿನ, ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿರುವ ಆರೋಗ್ಯ ಕಾರ್ಯಕರ್ತರಿಗಷ್ಟೇ ಲಸಿಕೆ ಹಾಕುವ ಕಾರ್ಯವಂತೂ ಸಾಗಿದೆ.

ಆದರೆ ನಿರೀಕ್ಷಿತ ಮಟ್ಟದಲ್ಲಿ ಲಸಿಕಾ ಕಾರ್ಯಕ್ಕೆ ಸ್ಪಂದನೆ ಸಿಗದೆ ಕೊಂಚ ಹಿನ್ನಡೆಯಾದಂತಾಗಿದೆ. ಇದಲ್ಲದೇ ಜ.31ರಿಂದ ಫೆ.3ರವರೆಗೆ ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಕಾರ್ಯ ನಡೆಯಲಿದೆ. ಈ ಸಮಯದಲ್ಲಿ ಕೋವಿಶಿಲ್ಡ್‌ ಲಸಿಕೆ ಹಾಕುವ ಕಾರ್ಯದಲ್ಲಿಯೂ ವ್ಯತ್ಯಯ ಆಗಲಿದೆ.

ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು: ಜಿಲ್ಲೆಗೆ ಎರಡು ಹಂತದಲ್ಲಿ ಒಟ್ಟು 28,380 ಲಸಿಕೆ ಬಂದಿದ್ದು, ಈ ಪೈಕಿ ಡಿಎಚ್‌ಒ ಆವರಣದಲ್ಲಿರುವ ಲಸಿಕಾ ಉಗ್ರಾಣದಲ್ಲಿ 10,520 ಲಸಿಕೆ ಹೊರತುಪಡಿಸಿ ಉಳಿದ ಲಸಿಕೆಗಳನ್ನು ಲಸಿಕೆ ಹಾಕುವ ಕೇಂದ್ರಗಳಿಗೆ ರವಾನಿಸಲಾಗಿದೆ. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಸೇರಿ ಒಟ್ಟು 89 ಕೇಂದ್ರಗಳಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಸಾಗಿದ್ದು, ಇದರಲ್ಲಿ ಜ.16ರಿಂದ ಜ.27ರವರೆಗೆ ಅಂದರೆ 12 ದಿನಗಳ ಪೈಕಿ 10 ದಿನ ಲಸಿಕೆ ಹಾಕುವ ಕಾರ್ಯವಾಗಿದೆ. ಈ ಹತ್ತು ದಿನಗಳಲ್ಲಿ ಲಸಿಕೆ ಹಾಕಿಸಿಕೊಂಡವರಿಗಿಂತ ಲಸಿಕೆ ಹಾಕಿಸಿಕೊಳ್ಳದೆ ಹೊರಗುಳಿದವರೇ ಹೆಚ್ಚು.

ಹೆಸರು ನೋಂದಣಿ ಆಗಿರುವ 27,669 ಜನರ ಪೈಕಿ ಈವರೆಗೆ 18,471 ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಸಮಯ ನಿಗದಿ ಮಾಡಿ, ಅವರಿಗೆ ಹಿಂದಿನ ದಿನವೇ ಸಂದೇಶ ರವಾನಿಸಲಾಗಿತ್ತು. ಆದರೆ ಈವರೆಗೆ 8560 ಜನರಷ್ಟೇ ಲಸಿಕೆ ಹಾಕಿಸಿಕೊಂಡಿದ್ದರೆ 9911 ಜನ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ:ಅನುಷ್ಠಾನವಾಗುತ್ತಾ ಕೈಗಾರಿಕಾ ಕಾರಿಡಾರ್‌?

ಆರೋಗ್ಯ ಕಾರ್ಯಕರ್ತರಿಂದಲೇ ನಿರಾಸಕ್ತಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಹಾಕುವ ಪ್ರಕ್ರಿಯೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೂ ಅವಕಾಶ

ಕಲ್ಪಿಸಲಾಗಿದೆ. ಆದರೆ ಲಸಿಕೆ ಬಗ್ಗೆ ಇವರಲ್ಲಿಯೇ ಗೊಂದಲ-ಆತಂಕ ಇರುವಂತಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಈವರೆಗೆ ನಿಗದಿ ಮಾಡಿದ್ದ ಜನರ ಪೈಕಿ ಶೇ.50ಕ್ಕಿಂತಲೂ ಹೆಚ್ಚು ಜನ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆಯ ಅಡ್ಡ ಪರಿಣಾಮಗಳ ಆತಂಕ, ಗೊಂದಲ ನಿವಾರಣೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸ್ವಯಂ ಲಸಿಕೆ ಹಾಕಿಸಿಕೊಂಡು ಆತ್ಮಸ್ಥೆರ್ಯ ತುಂಬವ ಕಾರ್ಯ ಮಾಡಿದ್ದಾರೆ. ಇಷ್ಟಾದರೂ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿ ಏರಿಕೆಯಾಗಿಲ್ಲ.

­ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

Shiggov-Meet

By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.