ಉಪಕಾರಾಗೃಹ ಆವರಣದಲ್ಲೇ ಗುಂಪುಗಳ ಹೊಡೆದಾಟ
•ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ-ಓರ್ವನಿಗೆ ಗಂಭೀರ ಗಾಯ
Team Udayavani, Jun 20, 2019, 9:39 AM IST
ಹುಬ್ಬಳ್ಳಿ: ಉಪ ಕಾರಾಗೃಹದಲ್ಲಿ ನಿಲ್ಲಿಸಿದ್ದ ಕಾರು ಜಖಂಗೊಳಿಸಿರುವುದು.
ಹುಬ್ಬಳ್ಳಿ: ಇಲ್ಲಿನ ಉಪ ಕಾರಾಗೃಹ ಆವರಣದಲ್ಲಿಯೇ ಎರಡು ಗುಂಪುಗಳು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿವೆ.
ಇಲ್ಲಿನ ವಿಶ್ವೇಶ್ವರ ನಗರದ ಉಪ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಾದ ನೇಕಾರ ನಗರದ ಸೂರಿ, ಗಿರಿ ಅವರನ್ನು ನ್ಯಾಯಾಲಯದಿಂದ ಕರೆದುಕೊಂಡು ಬರುತ್ತಿದ್ದಾಗ, ಇವರನ್ನು ಭೇಟಿಯಾಗಲು ಸುಮಾರು 10ಕ್ಕೂ ಅಧಿಕ ಜನರು ಬುಧವಾರ ಬಂದಿದ್ದರು. ಇದನ್ನು ತಿಳಿದ ಶ್ಯಾಮ ಜಾಧವ ಮತ್ತು ರವಿ ಜಾಧವ ಗುಂಪಿನ 20-25 ಜನರ ತಂಡದವರು ಸ್ಥಳಕ್ಕೆ ಆಗಮಿಸಿ, ಏಕಾಏಕಿ ರವಿ ಮಹಾಂತಶೆಟ್ಟರ ಮತ್ತು ಜುನೈದ್ ಮುಲ್ಲಾ ಸೇರಿ ಇನ್ನಿತರರ ಮೇಲೆ ಲಾಂಗ್, ಮಚ್ಚು, ತಲ್ವಾರ್‌ನಿಂದ ಉಪ ಕಾರಾಗೃಹ ಆವರಣದಲ್ಲಿಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಪರಸ್ಪರರು ಹೊಡೆದಾಡಿಕೊಂಡಿದ್ದಾರೆ. ಸೂರಿ ಸ್ನೇಹಿತರು ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಲಾಗಿದೆ.
ಚಂದ್ರು ಗಡಗಿ, ಗಣೇಶ ಜಾಧವ ಸೇರಿ 25 ಜನರ ತಂಡ ದಾಳಿ ಮಾಡಿದೆ ಎನ್ನಲಾಗಿದ್ದು, ಘಟನೆಯಲ್ಲಿ ಗಾಯಗೊಂಡ ಜುನೈದ್, ರವಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ಯಾಮ್ ಜಾಧವ ಮತ್ತು ರವಿ ಜಾಧವ ಗುಂಪಿನವರೆ ಹಲ್ಲೆ ಮಾಡಿದ್ದಾರೆಂದು ಗಾಯಾಳು ರವಿ ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುವುದರೊಳಗೆ ಹಲ್ಲೆಕೋರರು ಪರಾರಿಯಾಗಿದ್ದಾರೆ.
ಡಿಸಿಪಿ ನಾಗೇಶ ಡಿ.ಎಲ್., ಎಸಿಪಿ ಎಚ್.ಕೆ. ಪಠಾಣ, ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಜಗದೀಶ ಹಂಚನಾಳ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲ್ಲೆಕೋರರ ಮೇಲೆ ಅಶೋಕನಗರ ಠಾಣೆಯಲ್ಲಿ ದೊಂಬಿ ಮತ್ತು ಕೊಲೆಗೆ ಯತ್ನ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.