ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Aug 16, 2017, 12:57 PM IST
ಧಾರವಾಡ: ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದುಕೊಂಡು ಓಡಾಡುವ ಮಕ್ಕಳು…, ಖಾದಿ ಬಟ್ಟೆಯಲ್ಲಿ ಇನ್ನು ಕೆಲವರು, ಶಿಸ್ತಿನಿಂದ ಸ್ವಾತಂತ್ರ್ಯದ ಘೋಷಣೆ ಮೊಳಗಿಸುತ್ತ ತುಂಟಾಟ ಮಾಡುತ್ತ ಓಡಾಡಿಕೊಂಡಿದ್ದ ಇನ್ನೊಂದು ಗೆಳೆಯರ ಬಳಗ, ಒಟ್ಟಿನಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ನಗರದ ವಿದ್ಯಾರ್ಥಿ ಸಮೂಹವೇ ಮುಳುಗೆದ್ದಿತು.
ಕಳೆದ ಮೂರ್‍ನಾಲ್ಕು ವರ್ಷಗಳಿಂದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಮತ್ತು ಕರ್ನಾಟಕ ರಾಜ್ಯೋತ್ಸವ ದಿನದಂದು ಖಾಲಿ ಖಾಲಿಯಾಗಿರುತ್ತಿದ್ದ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ 71ನೇ ಸ್ವಾತಂತ್ರೊತ್ಸವದಂದು ಸಂಪೂರ್ಣ ಭರ್ತಿಯಾಗಿತ್ತು.
ಬೆಳಿಗ್ಗೆ 8:30ಕ್ಕೆ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ-ತಮ್ಮ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ, ಜಿಲ್ಲಾ ಕ್ರೀಡಾಂಗಣದತ್ತ ಧಾವಿಸುತ್ತಿದ್ದರು. ರಸ್ತೆಗಳೆಲ್ಲ ವಿದ್ಯಾರ್ಥಿಗಳಿಂದ ತುಂಬಿದ್ದವು. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ಮಾಡುತ್ತಿದ್ದಂತೆ ಪೊಲೀಸ್ ವಾದ್ಯ ವೃಂದ ರಾಷ್ಟ್ರಗೀತೆ ಮೊಳಗಿಸಿತು.
ಅದಾದ ನಂತರ ನಾಡಗೀತೆ ನಡೆಯುತ್ತಿರುವಾಗ ಇಡೀ ಕ್ರೀಡಾಂಗಣದಲ್ಲಿ ಸೇರಿದ್ದ ಸಾವಿರಾರು ಜನ ಎದ್ದು ನಿಂತು ಕನ್ನಡಾಂಬೆಗೆ ಗೌರವ ಸಲ್ಲಿಸಿದರು. ನಂತರ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ತೆರೆದ ಜೀಪಿನಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದ ವಿವಿಧ ದಳಗಳ ವೀಕ್ಷಣೆ ಮಾಡಿ, ಸ್ವಾತಂತ್ರೊತ್ಸವದ ಸಂದೇಶ ನೀಡಿದರು.
ನಂತರ ನಡೆದದ್ದು ಆಕರ್ಷಕ ಪಥ ಸಂಚಲನ. ಒಟ್ಟು 20 ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಪಥ ಸಂಚಲನ ವೀಕ್ಷಿಸಿ, ಸಚಿವರು ಗೌರವ ವಂದನೆ ಸ್ವೀಕರಿಸಿದರು. ಇಡೀ ಪಥ ಸಂಚಲನದಲ್ಲಿ ಸಮರ್ಥನಂ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.
ಇದಾದ ನಂತರ ನಗರದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ದೇಶಭಕ್ತಿ ಗೀತೆ, ನೃತ್ಯ ರೂಪಕ, ಸಮೂಹ ನೃತ್ಯಗಳು ಪ್ರದರ್ಶನಗೊಂಡವು. ಇದೇ ಸಂದರ್ಭದಲ್ಲಿ ಐದು ಜನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ದೇಶ ರಕ್ಷಣೆ ಸಂದರ್ಭದಲ್ಲಿ ಬಲಿದಾನ ಮಾಡಿದ ಮೂವರು ವೀರ ಯೋಧರ ಕುಟುಂಬದವರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕ್ರೀಡಾಪಟುವೊಬ್ಬರು ಮತ್ತು ಆಪರೇಶನ್ ವಿಜಯದಲ್ಲಿ ಪಾಲ್ಗೊಂಡಿದ್ದ ಯೋಧರೊಬ್ಬರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಜತೆಗೆ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಮತ್ತು ತಾಲೂಕುಗಳ ಸರ್ಕಾರಿ ಶಾಲೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ವಿವಿಧ ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿ, ಬಣ್ಣದ ಲೋಕ ಅನಾವರಣಗೊಳಿಸಿದರು. ಇದಕ್ಕೆಲ್ಲ ಮುಕುಟವಿಟ್ಟಂತೆ ಹಾಲಾಡಿ ರಾಮಣ್ಣ ಶೆಟ್ಟಿ ಜಿಮ್ನಾಸ್ಟಿಕ್ ಸಂಸ್ಥೆಯ ಕ್ರೀಡಾಪಟುಗಳಿಂದ ಮೈನವಿರೇಳಿಸುವ ಜಿಮ್ನಾಸ್ಟಿಕ್ ಪ್ರದರ್ಶನ ಕೂಡ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.