ದತ್ತಾಂಶ ಸಂಗ್ರಹ: ಕಮಾಂಡ್-ನಿಯಂತ್ರಣ ಕೇಂದ್ರ ರಚನೆ
Team Udayavani, Apr 20, 2020, 1:49 PM IST
ಧಾರವಾಡ: ಕೋವಿಡ್ 19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹರಡುತ್ತಿರುವ ಹಿನ್ನೆಲೆಯಲ್ಲಿ ದುರ್ಬಲ ಗುಂಪಿನಿಂದ ದತ್ತಾಂಶ ಸಂಗ್ರಹಿಸಲು ತಾಲೂಕು ಮಟ್ಟದಲ್ಲಿ ಆರೋಗ್ಯ ಕಮಾಂಡ್ ಕೇಂದ್ರ ಮತ್ತು ನಿಯಂತ್ರಣ ಕೇಂದ್ರ ರಚಿಸಲಾಗಿದೆ.
ಆರೋಗ್ಯ ಇಲಾಖೆ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರನ್ನು ನೇಮಿಸಲಾಗಿದೆ. ನವಲಗುಂದ- ಹಮೀದಾ (9916846134) ಕುಂದಗೋಳ-ನೇತ್ರಾವತಿ (9986680590), ಕಲಘಟಗಿ-ಹೇಮರೆಡ್ಡಿ (9535772610),ಹುಬ್ಬಳ್ಳಿ-ಪ್ರಕಾಶ್ ಹಸಬಿ (9986057066) ಹಾಗೂ ನಾಗರಾಜ್ ಕೆಂದರಿನರಿ (8277511265) ಅವರನ್ನು ಆರೋಗ್ಯ ಕಮಾಂಡ್ ಕೇಂದ್ರ ಮತ್ತು ನಿಯಂತ್ರಣ ಕೇಂದ್ರದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಪ್ರತಿ ತಾಲೂಕಿಗೆ ನಾಲ್ಕು ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಿಸಿದೆ.
ಈ ತಂಡಗಳು ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಎಚ್ಐವಿ, ಟಿಬಿ, ಡಯಾಲಿಸಿಸ್ ಅಂಗಾಂಗ ಕಸಿ ಮತ್ತು ಗರ್ಭಿಣಿ ಮಹಿಳೆಯರಂತಹ ದುರ್ಬಲ ಗುಂಪಿನ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ಚಿಕಿತ್ಸೆಗೆ ಏರ್ಪಾಡು ಮಾಡಬೇಕು. ಕೋವಿಡ್-19 ಸೋಂಕಿನ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಸಂಪರ್ಕಿಸಿ ಪ್ರತಿದಿನ ಪರೀಕ್ಷಿಸಲು ಮತ್ತು ಆರೋಗ್ಯ ಸೇತು ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಪ್ರೋತ್ಸಾಹಿಸುವುದು, ಮಾಸ್ಟರ್ ಡೇಟಾ ಬೇಸ್ ನಿರ್ವಹಿಸುವುದು, ಜಿಲ್ಲಾ ನಿಯಂತ್ರಣ ಕೊಠಡಿಗೆ ತೀವ್ರ ಉಸಿರಾಟದ ತೊಂದರೆ ಮತ್ತು ಐಎಲ್ಐ ಪ್ರಕರಣಗಳ ಮಾಹಿತಿ ಒದಗಿಸುವುದು. ಜಿಲ್ಲಾ ನಿಯಂತ್ರಣ ಕೊಠಡಿಗೆ ದೈನಂದಿನ ಮಾಹಿತಿ ಸಲ್ಲಿಸಬೇಕು. ತಹಶೀಲ್ದಾರರು ಈ ಕೇಂದ್ರಗಳಿಗೆ ಪ್ರತ್ಯೇಕ ಕಚೇರಿ, ದೂರವಾಣಿ ಮಾರ್ಗಗಳು ಮತ್ತು ಡೇಟಾ ಎಂಟ್ರಿ ಆಪರೇಟರ್ ಗಳು ಗ್ರೂಪ್-ಸಿ ಸಿಬ್ಬಂದಿ ಒದಗಿಸಬೇಕು. ಜಿಲ್ಲಾಧಿಕಾರಿಗಳು ಸೂಚಿಸುವ ಯಾವುದೇ ಚಟುವಟಿಕೆಗಳನ್ನು ನಿರ್ವಹಿಸುವ ಜವಾಬ್ದಾರಿಗಳನ್ನು ನಿಯೋಜಿಸಿದ ಅಧಿಕಾರಿಗಳು ಹಾಗೂ ತಂಡದವರು ನಿರ್ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಏ. 18-19ರಂದು ಎರಡು ದಿನಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 1100 ಜನರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರ ಆರೋಗ್ಯ ಮಾಹಿತಿ ಪಡೆದು ಸಮೀಪದ ಆಸ್ಪತ್ರೆಗಳಲ್ಲಿ ದೊರೆಯುವ ಚಿಕಿತ್ಸೆ, ಕೋವಿಡ್ 19 ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಲಾಗಿದೆ. –ಡಾ| ತನುಜಾ ಕೆ.ಎನ್., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.