ಗಂಟಲು ದ್ರವ ಕೇಂದ್ರ ಹೆಚ್ಚಿಸಲು ಡಿಸಿ ಸೂಚನೆ
Team Udayavani, Jun 12, 2020, 11:01 AM IST
ಧಾರವಾಡ: ಜಿಲ್ಲೆಯಲ್ಲಿ ಸದ್ಯ 17 ಮೂಗು ಮತ್ತು ಗಂಟಲು ದ್ರವ ಸಂಗ್ರಹಣಾ ಕೇಂದ್ರಗಳಿದ್ದು, ಅವುಗಳನ್ನು 55 ಕ್ಕೆ ಹೆಚ್ಚಿಸಬೇಕು ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆಗಡಿ, ಕೆಮ್ಮು, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಕೋವಿಡ್-19 ರ ತಪಾಸಣೆಗೊಳಪಡಿಸಲು ಜಿಲ್ಲೆಯಾದ್ಯಂತ ಮೂಗು ಮತ್ತು ಗಂಟಲು ದ್ರವದ ಪ್ರಯೋಗಾಲಯ ಮಾದರಿ ಸಂಗ್ರಹಣೆ ಕೇಂದ್ರಗಳನ್ನು ಹೆಚ್ಚು ಸಂಖ್ಯೆಯಲ್ಲಿ ಸ್ಥಾಪಿಸುವಂತೆ ಸೂಚನೆ ನೀಡಿದರು.
ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳು ಮತ್ತು ಫಾರ್ಮಸಿಗಳಲ್ಲಿ ಕ್ರಮವಾಗಿ ಚಿಕಿತ್ಸೆಗೆ ಬರುವ ಮತ್ತು ಔಷಧ ಖರೀದಿಸುವವರಲ್ಲಿ ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಕೋವಿಡ್ ತಪಾಸಣೆಗೊಳಪಡಿಸುವುದು ಅಗತ್ಯವಾಗಿದೆ. ಎಲ್ಲ ನಗರ ಮತ್ತು ಗ್ರಾಮೀಣ ಭಾಗಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಂಗ್ರಹಣಾ ಕೇಂದ್ರಗಳನ್ನು ಆರಂಭಿಸಬೇಕು. ಆಸ್ಪತ್ರೆ, ಔಷಧ ಅಂಗಡಿ ಹಾಗೂ ಆರೋಗ್ಯ ಸೇತು , ಮೊಬೈಲ್ ಆ್ಯಪ್ ಮೂಲಕ ಸೋಂಕಿನ ಲಕ್ಷಣವಿರುವವರನ್ನು ಗುರುತಿಸಿ ತಪಾಸಣೆಗೆ ಬರಲು ಸೂಚಿಸಬೇಕು. ಅಂತಹ ವ್ಯಕ್ತಿಗಳು ತಪಾಸಣೆಗೆ ಬರದಿದ್ದರೆ, ಸ್ಥಳೀಯ ಆರೋಗ್ಯ ಇಲಾಖೆ, ಅಂಗನವಾಡಿ ಆಶಾ ಕಾರ್ಯಕರ್ತೆಯರ ಮೂಲಕ ಖುದ್ದು ಪರಿಶೀಲನೆ ಮಾಡಿಸಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಉಪ ಆಯುಕ್ತ ಅಜೀಜ್ ದೇಸಾಯಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸುಜಾತಾ ಹಸವೀಮಠ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ, ಡಾ|ಶಶಿ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.