ಹದ್ದುಬಸ್ತ್ ಹೋಳಿಗೆ ಡಿಸಿ ಸೂಚನೆ
Team Udayavani, Mar 25, 2021, 6:38 PM IST
ಧಾರವಾಡ : ಕೋವಿಡ್-19 ಎರಡನೇ ಅಲೆಯ ಭೀತಿಯ ಕಾರಣ ಮುಂಬರುವ ಹೋಳಿ ಹಬ್ಬವನ್ನು ತಮ್ಮ ಕುಟುಂಬಗಳಿಗೆ ಸೀಮಿತಗೊಳಿಸಿ ಸಂಕ್ಷಿಪ್ತವಾಗಿ ಆಚರಿಸುವಂತೆ ಡಿಸಿ ನಿತೇಶ್ ಪಾಟೀಲ ಮನವಿ ಮಾಡಿದರು.
ನಗರದ ಮಹಾನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜರುಗಿದ ಅವಳಿ ನಗರದಲ್ಲಿರುವ ಹೋಳಿ, ಹಲಗಿ-ಕಾಮಣ್ಣನ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ಪ್ರತಿಯೊಬ್ಬರೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸಿ ಮಾಹಿತಿ, ಮುನ್ನೆಚ್ಚರಿಕೆ ಮತ್ತು ಆರೋಗ್ಯ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡುತ್ತಿದ್ದಾರೆ.
ಹೀಗಾಗಿ ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಾನಿಕಾರಕ ಬಣ್ಣಗಳನ್ನು ಬಳಸದೇ ನೈಸರ್ಗಿಕ ಬಣ್ಣಗಳನ್ನು ಬಳಸಿ ಕುಟುಂಬ ಸದಸ್ಯರೊಂದಿಗೆ ಸಂಕ್ಷಿಪ್ತವಾಗಿ ಹೋಳಿ ಆಚರಿಸಬೇಕೆಂದರು. ಪೊಲೀಸ್ ಆಯುಕ್ತ ಲಾಬೂರಾಮ ಮಾತನಾಡಿ, ಕೊರೊನಾದಂತಹ ಮಾರಕ ರೋಗದ ಸಂದರ್ಭದಲ್ಲಿ ಜಾಗೃತಿ ವಹಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಕೋವಿಡ್ ಮಾರ್ಗಸೂಚಿ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸಿ ಹೋಳಿ ಹಬ್ಬ ಆಚರಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಘಟನೆಗಳು ಹಲಗಿ ಹಬ್ಬ, ಹೋಳಿ ಮೆರವಣಿಗೆಗಳನ್ನು ಆಯೋಜಿಸದೇ ತಮ್ಮ ತಮ್ಮ ಮನೆಗಳಲ್ಲಿಯೇ ಸುರಕ್ಷಿತವಾಗಿ, ಸಂಕ್ಷಿಪ್ತವಾಗಿ ಹೋಳಿ ಹಬ್ಬ ಆಚರಿಸುವಂತೆ ತಿಳಿವಳಿಕೆ ನೀಡಬೇಕು ಎಂದರು.
ಧಾರವಾಡ ಹಲಗಿ ಹಬ್ಬದ ಸಂಯೋಜಕ ಶಂಕರ ಶೇಳಕೆ ಮಾತನಾಡಿ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಹಲಗೆ ಹಬ್ಬ ಹಾಗೂ ಕಾಮಣ್ಣನ ಮೆರವಣಿಗೆ ಮಾಡದೇ ದಹನ ಮಾಡಲಾಗುವುದು.ಜಿಲ್ಲಾಧಿ ಕಾರಿಗಳು ಸೂಚಿಸಿದ ನಿಯಮಗಳನ್ನು ಎಲ್ಲರೂ ಪಾಲಿಸುತ್ತೇವೆಂದರು. ಅಮರೇಶ್ ಹಿಪ್ಪರಗಿ ಮಾತನಾಡಿ, ನಾವು ಯಾವುದೇ ಮೆರವಣಿಗೆ ಮಾಡಲ್ಲ. ಕಾಮಣ್ಣನ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ ಎಂದರು. ಮೋತಿಲಾಲ್ ಸಾಬ್ ಕಬಾಡೆ ಮಾತನಾಡಿ, ಕಮರಿಪೇಟೆಯಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡದೇ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸುತ್ತೇವೆ ಎಂದರು.
ಗುರುನಾಥ ನೇಮಿಕರ ಮಾತನಾಡಿ, ಹುಬ್ಬಳ್ಳಿಯ ಚನ್ನಪೇಟದಲ್ಲಿ 5 ದಿನಗಳ ಕಾಲ ಕಾಮದೇವರ ಪ್ರತಿಷ್ಠಾಪಿಸಿ, ನಂತರ ಕಾಮದಹನ ಮಾಡುತ್ತೇವೆ. ದೊಡ್ಡ ಪ್ರಮಾಣದ ಯಾವುದೇ ಮೆರವಣಿಗೆ ಮಾಡದೇ ನಿಯಮಗಳನ್ನು ಪಾಲಿಸುತ್ತೇವೆ ಎಂದರು. ಅವಳಿ ನಗರದ ವಿವಿಧ ಸಂಘಟನೆಗಳ ಪದಾಧಿ ಕಾರಿಗಳಾದ ಸುನೀಲೆ ಘೋಡೆR, ಪ್ರಕಾಶ ಬುರಬುರೆ, ಸಂತೋಷ ಆವನ್ನವರ, ಚನ್ನಪ್ಪ ಚುಳಕಿ, ಧರ್ಮದಾಸ ಸಾತಕುತೆ, ಅಂಬಾಸ ಜಿತೂರೆ, ಇಕ್ಬಾಲ್ ಜಮಾದಾರ, ಅರವಿಂದ ಏಕನಗೌಡರ ಸೇರಿದಂತೆ ವಿವಿಧ ಸಮುದಾಯಗಳ ಸುಮಾರು 50ಕ್ಕೂ ಹೆಚ್ಚು ಮುಖಂಡರು, ಅವಳಿ ನಗರದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರಳವಾಗಿ, ಶಾಂತಿಯುತವಾಗಿ, ಸಂಕ್ಷಿಪ್ತವಾಗಿ ಹೋಳಿ ಹಬ್ಬ ಆಚರಿಸುತ್ತೇವೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡುವುದಾಗಿ ತಿಳಿಸಿದರು. ಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಉಪ ಪೊಲೀಸ್ ಆಯುಕ್ತ ರಾಮರಾಜನ್, ಎಸಿಪಿಗಳಾದ ಮಲ್ಲಿಕಾರ್ಜುನ ಮಲ್ಲಾಪೂರ, ವಿನೋದ ಮುಕ್ತೇದಾರ, ಅನುಷಾ ಜಿ.ಸೇರಿದಂತೆ ವಿವಿಧ ಪೊಲೀಸ್ ಅ ಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆರ್.ಬಿ. ಬಸರಗಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.