ಅರಸು ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
Team Udayavani, Aug 8, 2018, 5:04 PM IST
ಹುಬ್ಬಳ್ಳಿ: ತಾಲೂಕಾಡಳಿತದಿಂದ ಆ. 20ರಂದು ಬೆಳಗ್ಗೆ 10:30 ಗಂಟೆಗೆ ತಾಪಂ ಸಭಾಭವನದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 103ನೇ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ಅಪರ ತಹಶೀಲ್ದಾರ್ ಪ್ರಕಾಶ ನಾಶಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಪ್ರತಿ ವರ್ಷದಂತೆ ಡಿ. ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪಾರ್ಪಣೆ, ಸಂಪನ್ಮೂಲ ವ್ಯಕ್ತಿಯಿಂದ ಉಪನ್ಯಾಸ ಆಯೋಜಿಸಲಾಗುವುದು. ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಇಲಾಖೆಯ ಹೊಲಿಗೆ ಕೇಂದ್ರದಲ್ಲಿ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಗುವುದು ಎಂದರು.
ಸಮಾಜದ ಮುಖಂಡರು ಮಾತನಾಡಿ, ಕಳೆದ ವರ್ಷ ಕೆಲವೊಂದು ಸಮಸ್ಯೆಗಳಾಗಿದ್ದು ಅವುಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಿ ಎಂದರು. ಕಳೆದ ವರ್ಷ ಆಗಮಿಸಿದ ಜನರಿಗೆ ಕುಳಿತುಕೊಳ್ಳಲು ಆಗದಂತಹ ಸ್ಥಿತಿ ಇತ್ತು. ಸೌಂಡ್ ಸಿಸ್ಟ್‌ಂ ವ್ಯವಸ್ಥೆ ಸರಿ ಇರಲಿಲ್ಲ. ಈ ಬಾರಿ ಅಂತಹ ಸಮಸ್ಯೆ ಮರುಕಳಿಸದಂತೆ ಉತ್ತಮ ರೀತಿಯಲ್ಲಿ ಆಚರಣೆ ಮಾಡೋಣ ಎಂದರು.
ಡಿ. ದೇವರಾಜ ಅರಸು ಅವರ ವಿಚಾರಧಾರೆಗಳು, ಅವರು ಸಮಾಜಕ್ಕೆ ನೀಡಿದ ಕೊಡುಗೆ ಕುರಿತು ತಿಳಿಸುವ ಮಾಹಿತಿಯುಳ್ಳ ಕೈಪಿಡಿಯನ್ನು ಆಗಮಿಸಿದ ಜನರಿಗೆ ನೀಡಬೇಕು ಎಂದು ಮುಖಂಡರು ಹೆಳಿದರು. ಇದಕ್ಕೆ ಇಲಾಖೆಯಿಂದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹಿಂದುಳಿದ ಇಲಾಖೆಯ ಅಧಿಕಾರಿ ಶಶಿಕಲಾ ಬಿರಾದಾರ ಹೇಳಿದರು. ಬಾಬು ಪೂಜಾರ, ವೈ.ಎನ್. ಬಾಗಲಕೋಟೆ, ಸಂಜಯ ಬುಗಡಿ, ಪವನಕುಮಾರ, ಡಿ.ಟಿ. ಪಾಟೀಲ ಸೇರಿದಂತೆ ತಾಲೂಕು ಆಡಳಿತ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.