ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತೆ
ಹುಬ್ಬಳ್ಳಿ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಅವರು ಮೈತ್ರಿ ಅಭ್ಯರ್ಥಿ ಕುಸುಮಾವತಿ ಪರ ಗುರುವಾರ ಹೊಸಳ್ಳಿ, ಯಲಿವಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
Team Udayavani, May 17, 2019, 10:23 AM IST
ಹುಬ್ಬಳ್ಳಿ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಅವರು ಮೈತ್ರಿ ಅಭ್ಯರ್ಥಿ ಕುಸುಮಾವತಿ ಪರ ಗುರುವಾರ ಹೊಸಳ್ಳಿ, ಯಲಿವಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತೂಮ್ಮೆ ಸಿಎಂ ಆಗಬೇಕು ಎಂದು ಕೆಲ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡಿದವರನ್ನು ಜನರು ಸ್ಮರಿಸುತ್ತಾರೆ. ಅದೇ ರೀತಿ ಅವರು ಮತ್ತೂಮ್ಮೆ ಸಿಎಂ ಆಗಲಿ ಎಂದು ಬಯಸುತ್ತಿರಬೇಕು. ಅದರೆ ಕಾಂಗ್ರೆಸ್ ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ ಎಂದು ಸಂಸದ ಕೆ.ಎಚ್. ಮುನಿಯಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೇ ಮುಂದಿನ ಸಿಎಂ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಈಗ ಉಪಚುನಾವಣೆ ಪ್ರಚಾರಕ್ಕೆ ಗಮನ ಹರಿಸಬೇಕಿದೆ ಎಂದು ಹೇಳಿದರು. ಕೇಂದ್ರದಲ್ಲಿ ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರದು. ಬಿಜೆಪಿಯವರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ರಾಹುಲ್ ಗಾಂಧಿ ಪ್ರಧಾನಿಯಾಗುವುದು ಖಚಿತ. ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ಮೋದಿ ಆದ್ಯತೆ ನೀಡಲಿಲ್ಲ. ಆದರೆ ಅವರು ಉದ್ಯಮಿಗಳ 2.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೈತರ 8500 ಕೋಟಿ ರೂ. ಸಾಲ ಮನ್ನಾ ಮಾಡಿದರು. ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ 45,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದಾರೆ ಎಂದರು.
ಕುಂದಗೋಳದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಖಚಿತ. ಸಿ.ಎಸ್. ಶಿವಳ್ಳಿ ಅವರು ಮಾಡಿದ ಕೆಲಸಗಳು ಹಾಗೂ ಮೈತ್ರಿ ಸರಕಾರದ ಜನಪರ ಯೋಜನೆಗಳಿಂದಾಗಿ ಕುಸುಮಾವತಿ ಶಿವಳ್ಳಿ ಬಹುಮತದಿಂದ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಕೇರಳದಲ್ಲಿ ಸ್ಪರ್ಧಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಎರಡು ದಶಕಗಳಿಂದ ಗುಜರಾತ್‌ನಲ್ಲಿ ಸ್ಪರ್ಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಗೆ ಹೋಗಿ ನಿಲ್ಲುವ ಅವಶ್ಯಕತೆ ಏನಿತ್ತು? ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಿಂತು ಆರಿಸಿ ಬರಬೇಕೆಂಬುದು ನಮ್ಮ ಮಹದಾಸೆಯಾಗಿತ್ತು. ಆದರೆ ಅವರು ಕೇರಳದಲ್ಲಿ ಸ್ಪರ್ಧಿಸಿದರು. ಅವರು ಬಹುಮತದಿಂದ ಆಯ್ಕೆಯಾಗುವುದರಲ್ಲಿ ಸಂಶಯವಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರಾದ ಅನಿಲಕುಮಾರ ಪಾಟೀಲ, ಎಫ್.ಎಚ್. ಜಕ್ಕಪ್ಪನವರ, ಮಹೇಂದ್ರ ಸಿಂಘಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.