ಅಂಗವಿಕಲರ ವಾಹನ ವಿತರಣೆಗೆ ಹಿಡಿದ ನಿಯಮ ಗ್ರಹಣ!

Team Udayavani, Jul 29, 2018, 4:19 PM IST

29-july-20.jpg

ಕೊಪ್ಪಳ: ತ್ರಿಚಕ್ರ ವಾಹನಗಳು ಬಂದಿದ್ದೂ ಆಗಿದೆ, ಅರ್ಹ ಫ‌ಲಾನುಭವಿಗಳನ್ನು ಆಯ್ಕೆ ಮಾಡಿದ್ದೂ ಆಗಿದೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ವಿತರಿಸಬೇಕೆಂಬ ಅಂಗವಿಕಲರ ಇಲಾಖೆಯ ‘ನಿಯಮ’ ವಿತರಣೆಗೆ ಅಡ್ಡಿಯಾಗಿದೆ. ಹೀಗಾಗಿ 2017-18ನೇ ಸಾಲಿನಡಿ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಅಂಗವಿಕಲರಿಗೆ ಮಂಜೂರಾದ 125 ತ್ರಿಚಕ್ರ ವಾಹನಗಳು ಕಳೆದ ಮೂರು ತಿಂಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ನಿಂತಿದ್ದು ಧೂಳು ತಿನ್ನುತ್ತಿವೆ.

ರಾಜ್ಯ ಸರ್ಕಾರ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರಾಭಿವೃದ್ಧಿಗಾಗಿ ಪ್ರತಿ ವರ್ಷವೂ 2 ಕೋಟಿ ಅನುದಾನ ನೀಡುತ್ತದೆ. ಈ ಅನುದಾನದಲ್ಲಿ ಆಯಾ ಶಾಸಕರು ಶೇ.3ರಷ್ಟು ಅನುದಾನವನ್ನು ಅಂಗವಿಕಲರ ಶ್ರೇಯೋಭಿವೃದ್ಧಿಗೆ ಖರ್ಚು ಮಾಡಬೇಕು. ಈ ಪೈಕಿ ಜಿಲ್ಲೆಯ ಐದೂ ಶಾಸಕರು 2017-18ನೇ ಸಾಲಿನಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳ ಖರೀದಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯ ಐದೂ ಕ್ಷೇತ್ರಗಳಿಗೆ 125 ಅರ್ಹ ಫಲಾನುಭವಿಗಳ ಆಯ್ಕೆಗೆ ಗುರಿ ನಿಗದಿ ಮಾಡಿ ಅರ್ಹ ಫಲಾನುಭವಿಗಳನ್ನು ಆಯ್ಕೆಯನ್ನೂ ಮಾಡಲಾಗಿದೆ ಆದರೆ ಅಂಗವಿಕಲರಿಗೆ ಅವುಗಳನ್ನು ಪಡೆಯುವ ಭಾಗ್ಯ ಇನ್ನೂ ಇಲ್ಲವಾಗಿದೆ.

ಕಾಯುವುದೇ ಕೆಲಸ: ಸರ್ಕಾರ ತ್ರಿಚಕ್ರ ವಾಹನಗಳ ಪೂರೈಕೆಗೆ ರಾಜ್ಯಮಟ್ಟದಲ್ಲಿ ಟೆಂಡರ್‌ ಕರೆದು, ಏಜೆನ್ಸಿಗಳ ಮೂಲಕ ಆಯಾ ಜಿಲ್ಲೆಗಳಿಗೆ ನಿಗದಿಪಡಿಸಿದ ಗುರಿಯಂತೆ ವಾಹನಗಳನ್ನು ಪೂರೈಕೆ ಮಾಡಿದೆ. ಏಜೆನ್ಸಿಗಳು ತ್ರಿಚಕ್ರ ವಾಹನಗಳನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಲ್ಲಿಸಿದ್ದಾರೆ. ಆದರೆ ಅವುಗಳನ್ನು 3 ತಿಂಗಳಿಂದ ವಿತರಿಸಿಲ್ಲ. ಇಟ್ಟಲ್ಲೇ ಧೂಳು ತಿನ್ನುತ್ತಿವೆ. ಕಿಡಿಗೇಡಿಗಳು ವಾಹನಗಳಲ್ಲಿನ ಸಾಮಗ್ರಿಗಳನ್ನು ಮುರಿಯುವುದು. ಕಿತ್ತುವುದು ಮಾಡುತ್ತಿದ್ದಾರೆ. ಬಯಲಲ್ಲಿರುವ ವಾಹನಗಳನ್ನು ಕಾಯುವುದೇ ಅಂಗವಿಕಲರ ಕಲ್ಯಾಣ ಇಲಾಖೆಗೆ ಕೆಲಸವಾಗಿದೆ.

ವಿಳಂಬಕ್ಕೆ ಕಾರಣ: ಜಿಲ್ಲೆಯಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದರಿಂದ ವಾಹನ ವಿತರಣೆ ಪ್ರಕ್ರಿಯೆ ವಿಳಂಬವಾಗಿದೆ. ಅಲ್ಲದೇ ಈಗಾಗಲೇ ನೂತನ ಶಾಸಕರೂ ಆಯ್ಕೆಯಾಗಿದ್ದಾರೆ. ಜಿಲ್ಲೆಗೆ ಇನ್ನೂ ಉಸ್ತುವಾರಿ ಸಚಿವರನ್ನು ನೇಮಿಸಿಲ್ಲ. ಅಚ್ಚರಿಯೆಂದರೆ, ಅಂಗವಿಕಲಣರ ಕಲ್ಯಾಣ ಇಲಾಖೆ ನಿಯಮದ ಪ್ರಕಾರ, ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲೇ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಬೇಕೆಂದು ಸರ್ಕಾರದ ಆದೇಶ ಹೇಳುತ್ತಿದೆಯಂತೆ. ಇದು ಇಲಾಖೆಯ ಅಧಿಕಾರಿಗಳಿಗೂ ದೊಡ್ಡ ತಲೆ ನೋವಾಗಿದೆ. ಮೈತ್ರಿ ಸರ್ಕಾರದಲ್ಲಿ ಜಿಲ್ಲೆಗೆ ಇನ್ನೂ ಉಸ್ತುವಾರಿ ಸಚಿವರೇ ಬಂದಿಲ್ಲ. ಸಚಿವರು ಯಾವಾಗ ಬರುವರೋ ? ವಾಹನಗಳನ್ನು ಯಾವಾಗ ವಿತರಿಸುವರೋ ? ಎಂದು ಫಲಾನುಭವಿಗಳು ಕಾದು ಕುಳಿತಿದ್ದಾರೆ.

ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಇಲ್ಲದಿದ್ದರೆ ವಾಹನಗಳು ಇಟ್ಟಲ್ಲೇ ತುಕ್ಕು ಹಿಡಿಯಲಿವೆ. ಜಿಲ್ಲೆಯಲ್ಲಿ 125 ತ್ರಿಚಕ್ರ ವಾಹನಗಳ ವಿತರಣೆಗೆ
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದೇವೆ. ಚುನಾವಣೆ ಬಂದಿದ್ದರಿಂದ ವಿತರಿಸುವುದು ವಿಳಂಬವಾಗಿದೆ. ಅಲ್ಲದೇ, ಜಿಲ್ಲಾ ಉಸ್ತುವಾರಿ ಸಚಿವರ ಮೂಲಕವೇ ವಿತರಿಸಬೇಕೆಂದು ನಮಗೆ ಆದೇಶ ಮಾಡಲಾಗಿದೆ. ಆಗಸ್ಟ್‌ವರೆಗೂ ಕಾದು ನೋಡಿ, ಜಿಪಂ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಿದ್ದೇವೆ.
 ಜಗದೀಶ, ಜಿಲ್ಲಾ ಅಂಗವಿಕಲ
ಕಲ್ಯಾಣಧಿಕಾರಿ.

ಮೂರು ತಿಂಗಳಿಂದ ತ್ರಿಚಕ್ರ ವಾಹನಗಳನ್ನು ವಿತರಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಮೂಲಕವೇ ವಾಹನಗಳನ್ನು ವಿತರಿಸುತ್ತೇವೆ ಎಂದು ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅವರು ಇಟ್ಟ ಸ್ಥಳದಲ್ಲೇ ಧೂಳು ತಿನ್ನುತ್ತಿವೆ. ವಿಳಂಬ ಮಾಡಿದರೆ ವಾಹನಗಳು ತುಕ್ಕು ಹಿಡಿಯಲಿವೆ. ಮುಂದೆ ನಾವೇ ಸಾವಿರಾರು ರೂ. ಕೊಟ್ಟು ದುರಸ್ತಿ ಮಾಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಮಗೆ ವಾಹನ ಕೊಡಿ ಎಂದು ಕೇಳುತ್ತಿದ್ದೇವೆ.
 ಚಂದ್ರಶೇಖರ ಮುದೇನೂರು,
ಅರ್ಹ ಫಲಾನುಭವಿ

ದತ್ತು ಕಮ್ಮಾರ

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.