ಅರ್ಹ ಫಲಾನುಭವಿಗೆ ಪರಿಹಾರಧನ ತಲುಪಿಸಿ

Team Udayavani, May 31, 2020, 9:44 AM IST

ಅರ್ಹ ಫಲಾನುಭವಿಗೆ ಪರಿಹಾರಧನ ತಲುಪಿಸಿ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ರೈತರಿಗೆ ಸರಕಾರ ನೀಡುತ್ತಿರುವ ಪರಿಹಾರ ಧನವನ್ನು ದೊರಕಿಸಿಕೊಡುವಲ್ಲಿ ಗ್ರಾಮಲೆಕ್ಕಾಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಬೇಕೆಂದು ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಹೇಳಿದರು.

ಗೋವಿನ ಜೋಳ ಬೆಳೆಗಾರರಿಗೆ ಆರ್ಥಿಕ ನೆರವು ನೀಡುವ ಕುರಿತಾಗಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೋವಿನ ಜೋಳ ಬೆಳೆದು ನಷ್ಟ ಹೊಂದಿದ ರೈತರಿಗೆ ಸರ್ಕಾರ 5 ಸಾವಿರ ಸಹಾಯಧನ ನೀಡುತ್ತಿದೆ. ಹೂ, ತರಕಾರಿ ಬೆಳೆದ ರೈತರು, ವಿವಿಧ ಕೆಲಸ ನಿರ್ವಹಿಸುವ ಕುಶಲಕರ್ಮಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಪರಿಹಾರ ಧನ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಗ್ರಾಮ ಲೆಕ್ಕಾಧಿಕಾರಿಗಳನ್ನು ಹುಡುಕಿಕೊಂಡು ರೈತರು ಹುಬ್ಬಳ್ಳಿಗೆ ಬರುವಂತಾಗಬಾರದು. ನಿತ್ಯ ಬೆಳಗ್ಗೆ 10 ಮಧ್ಯಾಹ್ನ 3ರ ವರೆಗೆ ಗ್ರಾಮಗಳಲ್ಲಿ ಇದ್ದು ಕೆಲಸ ನಿರ್ವಹಿಸಬೇಕು. ಈಗಾಗಲೇ ಬೆಳೆ ಸಮೀಕ್ಷೆಯಲ್ಲಿ ನಮೂದಾದ ರೈತರಿಗೆ ದೃಢೀಕರಣ ಪತ್ರಗಳನ್ನು ನೀಡಬೇಕು. ಹೊಸದಾಗಿ ಅರ್ಜಿ ಸಲ್ಲಿಸಿದವರ ಹೊಲಗಳಿಗೆ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ತೆರಳಿ ಜಂಟಿ ಸಮೀಕ್ಷೆ ನಡೆಸಿ ದೃಢೀಕರಣ ಪತ್ರ ನೀಡಬೇಕು. ಹುಬ್ಬಳ್ಳಿ ನಗರ ವ್ಯಾಪ್ತಿಯಲ್ಲಿ 774 ಹೆಕ್ಟೇರ್‌ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 5611 ಹೆಕ್ಟೇರ್‌ ಪ್ರದೇಶದಲ್ಲಿ ಒಟ್ಟು 4242 ಜನರು ಮುಸುಕಿನ ಜೋಳ ಬೆಳೆದಿದ್ದಾರೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅನಗೌಡರ್‌ ಮಾತನಾಡಿ, ಬೆಳೆ ಸಮೀಕ್ಷೆಯಲ್ಲಿ ಇರದೆ ಹೊಸದಾಗಿ ಮುಸುಕಿನ ಜೋಳ ಬೆಳೆದ ರೈತರು ಅಗತ್ಯ ದಾಖಲಾತಿಗಳೊಂದಿಗೆ ಜೂ. 10ರೊಳಗಾಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಸಮೀಕ್ಷೆ ನಡೆಸಿ ಅರ್ಜಿ ಪುರಸ್ಕರಿಸುವರು. ಜಂಟಿ ಖಾತೆ ಹೊಂದಿರುವವರು ಖಾತೆದಾರರಿಂದ ಒಪ್ಪಿಗೆ ಪತ್ರ ಪಡೆದು ನೋಟರಿ ಅವರಿಂದ ದೃಢೀಕರಣ ಮಾಡಿಸಬೇಕು. ಪಹಣಿಯಲ್ಲಿರುವ ಹೆಸರಿನ ಬೆಳಗಾರರ ಖಾತೆಗೆ ಪರಿಹಾರ ಧನ ಜಮೆ ಮಾಡಲಾಗುವುದು. ಪಹಣಿಯಲ್ಲಿ ನೋಂದಣಿಯಾಗಿರುವ ವ್ಯಕ್ತಿ ಮೃತರಾದರೆ ಕುಟುಂಬಸ್ಥರು ಗ್ರಾಮಲೆಕ್ಕಿಗರಿಂದ ಮರಣ ದೃಢೀಕರಣ ಹಾಗೂ ಕುಟುಂಬ ಜೀವಂತ ಸದಸ್ಯರ ಪ್ರಮಾಣಪತ್ರ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಹಣಿಯಲ್ಲಿ ಮಹಿಳೆಯ ಹೆಸರು ನಮೂದಾಗಿದ್ದಾರೆ ಅವರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ವಿವರಿಸಿದರು.

ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ್‌ ನಾಶಿ, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.