ತೆರಿಗೆ ನೀತಿಯಿಂದ ವಾಣಿಜ್ಯ ವಿದ್ಯಾರ್ಥಿಗಳಿಗೆ ಬೇಡಿಕೆ: ಶೆಟ್ಟಿ
Team Udayavani, Jul 19, 2017, 12:04 PM IST
ಧಾರವಾಡ: ನೂತನ ಆರ್ಥಿಕ ನೀತಿಯಿಂದ ತೆರಿಗೆ ವಹಿವಾಟಿನಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ವಾಣಿಜ್ಯ ವಿದ್ಯಾರ್ಥಿಗಳು ಚಾರ್ಟರ್ಡ್ ಅಕೌಂಟಂಟ್ ಕೋರ್ಸ್ ಅಧ್ಯಯನ ಮಾಡಿದಲ್ಲಿ ವಿಪುಲ ಉದ್ಯೋಗಾವಕಾಶಗಳಿವೆ ಎಂದು ಚಾರ್ಟರ್ಡ್ ಅಕೌಂಟಂಟ್ ಎಸ್.ಬಿ. ಶೆಟ್ಟಿ ಹೇಳಿದರು.
ಜೆಎಸ್ಸೆಸ್‌ನ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಚಾರ್ಟರ್ಡ್ ಅಕೌಂಟಂಟ್ ಪರೀಕ್ಷೆಯ ಪೂರ್ವ ತಯಾರಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಾಹಿತಿ ಹಾಗೂ ತರಬೇತಿ ಕೊರತೆಯಿಂದ ವಾಣಿಜ್ಯ ವಿಷಯದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.
ಇದೇ ಜುಲೈ 1 ರಿಂದ ನೂತನ ಪಠ್ಯಕ್ರಮ ಜಾರಿಗೊಂಡಿದ್ದು, ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಫೌಂಡೇಶನ್‌ನ ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ರೀತಿಯ ತರಬೇತಿ ಶಿಬಿರಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದರು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಅಜಿತಪ್ರಸಾದ ಮಾತನಾಡಿ, ಐಟಿ-ಬಿಟಿಗಳಲ್ಲಿ ಕೇವಲ ಎಂಜನೀಯರಿಂಗ್ ಪದವಿಧರರಿಗೆ ಮಾತ್ರ ಅವಕಾಶವಿದೆ ಎಂಬುದು ಸತ್ಯವಲ್ಲ.
ವಾಣಿಜ್ಯ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿವೆ. ಯಾವುದೇ ಅಧ್ಯಯನ ಕೈಗೊಂಡರೂ ಆಸಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ಸಿ.ಎ ಪರೀಕ್ಷೆ ಅತಿ ಕಠಿಣವೆಂಬ ಅಭಿಪ್ರಾಯ ಸರಿಯಲ್ಲ. ಸರಿಯಾದ ತರಬೇತಿ ಹಾಗೂ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಬಹುದು ಎಂದರು. ವೈಷ್ಣವಿ ಪೂಜಾರ ಪ್ರಾರ್ಥಿಸಿದರು. ಮಹಾವೀರ ಉಪಾಧ್ಯೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀಕಾಂತ ರಾಗಿಕಲ್ಲಾಪುರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.