ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ
Team Udayavani, Nov 28, 2018, 12:08 PM IST
ಬೆಂಗಳೂರು: ಬಗರ್‌ಹುಕುಂ ಸಾಗುವಳಿದಾರರಿಗೆ ಪಟ್ಟಾ, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಹಾಗೂ ಸಮಗ್ರ ಭೂ ಸುಧಾರಣಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಬನ್ನಪ್ಪ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಮೈಸೂರು ಬ್ಯಾಂಕ್ ವೃತ್ತದ ಮಾರ್ಗವಾಗಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮನೆ ಕಡೆಗೆ ಹೋಗಲು ಮುಂದಾದರು.
ಈ ಮಾಹಿತಿ ಪಡೆದ ಪೊಲೀಸರು, ಶೇಷಾದ್ರಿ ರಸ್ತೆ ಬಳಿಯ ಸರ್ಕಾರಿ ಗೃಹ ವಿಜ್ಞಾನ ಕಾಲೇಜು ಬಳಿಯೇ ಹೋರಾಟಗಾರರನ್ನು ತಡೆದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಕಂದಾಯ ಸಚಿವರು ಕೂಡಲೇ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.
ಆ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರಮುಖ ಬೇಡಿಕೆಗಳು: ಸಚಿವ ಸಂಪುಟದ ತೀರ್ಮಾನದಂತೆ ರಾಜ್ಯದಲ್ಲಿ ಬಗರ್‌ಹುಕುಂ ಸಾಗುವಳಿದಾರರಿಗೆ ಕೂಡಲೇ ಸಾಗುವಳಿ ಪಟ್ಟಾ ನೀಡಬೇಕು. ವಜಾಗೊಂಡಿರುವ ಬಗರ್‌ಹುಕುಂ ಸಾಗುವಳಿದಾರರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು.
ಪ್ರಮುಖವಾಗಿ ಪಿಟಿಸಿಎಲ್ ಕಾಯ್ದೆ ಅನ್ವಯ ಮರು ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಸರ್ಕಾರ ವಿಶೇಷ ಕಾನೂನು ರಚಿಸಬೇಕು ಹಾಗೂ ಇತ್ತೀಚೆಗೆ ಸುಪ್ರೀಂ ಕೋರ್ಟ್ ಪಿಟಿಸಿಎಲ್ ಕಾಯ್ದೆ ವಿರುದ್ಧ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು, ಸರ್ವೋತ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ವಿಫಲರಾಗುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ತೋಟಿ, ನೀರಗಂಟಿ, ತಳವಾರಿಕೆದಾರರು ಭೂ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಿಸಬೇಕು. ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
ರಾಜ್ಯಾದ್ಯಂತ ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಬಡವರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ರಾಜ್ಯ ಸಮಿತಿ ಸದಸ್ಯರಾದ ಮುನಿ ಕೃಷ್ಣಪ್ಪ, ಸಿದ್ದಾರ್ಥ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಗಳ ಶ್ರೀರಾಮ್ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.