ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಪ್ರತಿಭಟನೆ
Team Udayavani, Oct 16, 2019, 9:54 AM IST
ಧಾರವಾಡ: ಎಲ್‌ಪಿಜಿ ಬಂಕ್ ಆರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಆಟೋ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘದಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಂಘವು, 15 ವರ್ಷ ಮೇಲ್ಪಟ್ಟ ಆಟೋರಿಕ್ಷಾಗಳನ್ನು ರದ್ದುಪಡಿಸಿದ್ದಕ್ಕೆ ಬೆಂಗಳೂರು ಮಾದರಿಯಲ್ಲಿ 30 ಸಾವಿರ ರೂ. ಸಹಾಯಧನ ನೀಡಬೇಕು. ಇದರ ಜೊತೆಗೆ ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದೆ.
ನಗರದಲ್ಲಿ ಸುಮಾರು 3500 ಎಲ್‌ಪಿಜಿ ಆಟೋಗಳಿವೆ. ಆದರೆ ಎಲ್‌ಪಿಜಿ ರಿಲ್ ಮಾಡಲು ಸರಿಯಾದ ಬಂಕ್ ವ್ಯವಸ್ಥೆ ಇಲ್ಲ. ನಗರದಲ್ಲಿ ಒಂದು ಬಂಕ್ ಇದ್ದು, ಅದೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಆಟೋ ಚಾಲಕರು ರಾಯಾಪುರಕ್ಕೆ ತೆರಳಿ ಎಲ್‌ಪಿಜಿ ತುಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆಟೋ ಚಾಲಕರು ಎಲ್‌ಪಿಜಿ ತುಂಬಿಸಲು ರಾಯಾಪುರಕ್ಕೆ ತೆರಳುವುದರಿಂದ ಸಾಕಷ್ಟುನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕು. ಕೂಡಲೇ ಆಟೋ ಚಾಲಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘದ ಅಧ್ಯಕ್ಷ ಜೀವನ ಹುತುರಿ, ವಿ,ಬಿ, ಸಂಜೀವಪ್ಪನವರ, ಲಕ್ಷ್ಮಣ ಜಮನಾಳ, ಸುರೇಶ ರಾಠೊಡ, ಪ್ರಕಾಶ ಮುಳಗುಂದ, ಎಂ.ಎಂ. ಖಾಜಿ, ರಜಾಕ ಹಂಚಿನಮನಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.