ಪ್ರಾತ್ಯಕ್ಷಿಕೆ-ಚೆಕ್‌ಪೋಸ್ಟ್ ಪರಿಶೀಲನೆ
Team Udayavani, Apr 9, 2018, 5:16 PM IST
ಧಾರವಾಡ: ವಿವಿ ಪ್ಯಾಟ್ ಮತ್ತು ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ಚೆಕ್‌ಪೋಸ್ಟ್‌ಗಳನ್ನು ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ರವಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರ ಸಮೀಪದ ಮಾರಡಗಿ, ಕವಲಗೇರಿ, ಅಮ್ಮಿನಭಾವಿ ಮತ್ತು ಹಾರೋಬೆಳವಡಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ತಿಳಿವಳಿಕೆಗಾಗಿ ಜಿಲ್ಲೆಯಾದ್ಯಂತ ಏರ್ಪಡಿಸಿರುವ ವಿವಿ ಪ್ಯಾಟ್ ಮತ್ತು ಇವಿಎಂ ಮತಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮವನ್ನು ವೀಕ್ಷಿಸಿದರು. ಚುನಾವಣೆ ನಿಮಿತ್ತ ಹೆಬ್ಬಳ್ಳಿ ಅಗಸಿ, ಹಾರೋಬೆಳವಡಿ ಸೇರಿದಂತೆ ವಿವಿಧೆಡೆ ಆರಂಭಿಸಿರುವಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ವಾಹನ ನೋಂದಣಿ ಪುಸ್ತಕ ಹಾಗೂ ಸಿಬ್ಬಂದಿಯ ಗಸ್ತು ವ್ಯವಸ್ಥೆ ಪರಿಶೀಲಿಸಿದರು. ಎಸ್ಪಿ ಸಂಗೀತಾ ಜಿ., ಪ್ರೊಬೇಷನರಿ ಎಸಿಗಳಾದ ಪಾರ್ವತಿ ರೆಡ್ಡಿ, ಶೇಖರ ಜಿ.ಡಿ., ಧಾರವಾಡ ತಹಶೀಲ್ದಾರ್ ಪ್ರಕಾಶ ಕುದರಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಮಿಂಚಿನ ನೋಂದಣಿ ಅಭಿಯಾನ: ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಅವರು ವಿವಿಧ ಅಧಿಕಾರಿಗಳೊಂದಿಗೆ ನಗರದ ಕೆಎಸ್‌ಆರ್‌ಟಿಸಿ ಡಿಪೋ, ವಿದ್ಯಾರಣ್ಯ ಪಿಯು ಕಾಲೇಜು ಸೇರಿದಂತೆ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮಿಂಚಿನ ನೋಂದಣಿ ಹಾಗೂ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಅಂಗವಿಕಲರಿಗೆ ರ್‍ಯಾಂಪ್ ಸೌಲಭ್ಯ ಸೇರಿದಂತೆ ಮತಗಟ್ಟೆ ಸೌಕರ್ಯಗಳ ಕುರಿತು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.