ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಹೆಚ್ಚಳ


Team Udayavani, Apr 8, 2017, 4:48 PM IST

9-rain-06.jpg

ಚಿಕ್ಕಬಳ್ಳಾಪುರ: ಸಿನಿಮಾ ಹಾಗೂ ದೃಶ್ಯ ಮಾಧ್ಯಮಗಳ ಪ್ರಭಾವದಿಂದಾಗಿ ದೈಹಿಕ ಆರೊಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರುವ ಮನುಷ್ಯರು, ಮಾನಸಿಕ ಆರೋಗ್ಯವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಇಂದು ಸಮಾಜದಲ್ಲಿ ಮಾನಸಿಕ ಖಿನ್ನತೆ ರೋಗದಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಎನ್‌.ಅನುರಾಧಾ ತೀವ್ರ ಕಳವಳ ವ್ಯಕ್ತಪಡಿಸಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಜಾಗತೀಕರಣದ ಪ್ರಭಾವದಿಂದ ಮಾನವ ಸಂಬಂಧಗಳು ಮೂಲೆಗುಂಪಾಗಿ ಪರಸ್ಪರ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿರ್ಜಿàವ ವಸ್ತುಗಳೊಂದಿಗೆ ಭಾವನೆಗಳನ್ನು ಹಂಚಿಕೊಂಡಾಗ ಆ ಸಮಸ್ಯೆಗೆ ಪರಿಹಾರ ಎಂಬುದೇ ಇರುವುದಿಲ್ಲ. ದಿನನಿತ್ಯದ ಜಂಜಾಟ, ಯಾಂತ್ರಿಕತೆಯನ್ನು ಮೆಟ್ಟಿ ಆರೋಗ್ಯವನ್ನು ಬಲಿಷ್ಠಗೊಳಿಸಬೇಕು. ಆರಂಭಿಕ ಹಂತದಲ್ಲಿಯೇ ಮಾನಸಿಕ ಕಾಯಿಲೆಯನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಬೇಕು. ಇದಕ್ಕೆ ತರಬೇತಿ ಅಗತ್ಯ.

ಮಕ್ಕಳನ್ನು ಗ್ಯಾಜೆಟ್‌ಗಳಿಂದ ದೂರವಿಡಬೇಕು. ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ಮಾನಸಿಕ ಖಿನ್ನತೆಯಿಂದ ದೂರ ಉಳಿಯಬಹುದಾಗಿದೆ. ಮನುಷ್ಯ ದೈಹಿಕ ಆರೋಗ್ಯಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಮಾನಸಿಕ ಆರೋಗ್ಯಕ್ಕೆ ನೀಡುತ್ತಿಲ್ಲ. ನಿರ್ಜಿàವ ವಸ್ತುಗಳೊಂದಿಗೆ ಭಾವನೆ ಹಂಚಿಕೊಳ್ಳಲು ಶುರು ಮಾಡಿದಾಗ ಖಿನ್ನತೆ ರೋಗ ಆವರಿಸಿಕೊಳ್ಳುತ್ತದೆ ಎಂದು ಹೇಳಿದರು.

ಸದೃಢ ಮಾನಸಿಕ ಆರೋಗ್ಯ ಮುಖ್ಯ: ಜಿಪಂ ಸಿಇಒ ಜೆ.ಮಂಜುನಾಥ ಮಾತನಾಡಿ, ಮಾನವನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ  ಮುಖ್ಯವಾಗಿದೆ. 2017 ನೇ ವಿಶ್ವ ಆರೋಗ್ಯ ದಿನಾಚರಣೆ ವಿಷಯ “ಖಿನ್ನತೆ ಅಥವಾ ಬೇಜಾರು ಕಾಯಿಲೆ ಕುರಿತ ಚರ್ಚೆ’ಯಾಗಿದೆ. ಖಿನ್ನತೆ ಎಂಬುದು ಪ್ರಮುಖಿ ಮಾನಸಿಕ ಕಾಯಿಲೆಯಾಗಿದೆ. ಇದನ್ನು ದೂರ ಮಾಡಲು ತ್ವರಿತವಾಗಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು. 

ಖಿನ್ನತೆಯಿಂದ ಸಾಧನೆ ಅಸಾಧ್ಯ: ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ 350 ಮಿಲಿಯನ್‌ ಜನರು ಖಿನ್ನತೆಗೆ ಒಳಗಾಗಿ¨ªಾರೆ. ಭಾರತದಲ್ಲೂ ಹೆಚ್ಚು ಜನರು ಮಾನಸಿಕ ಖಿನ್ನತೆಗೆ ಒಳಗಾಗಿರುವುದು ಕಂಡುಬಂದಿದೆ. ಮನಸು ಸರಿಯಿಲ್ಲದ ಯಾವುದೇ ವ್ಯಕ್ತಿ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರಸ್ತುತ ದಿನಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಖಿನ್ನತೆಗೊಳಗಾಗುತ್ತಾರೆ. ಆದರೆ, ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಮಾನಸಿಕ ಕಾಯಿಲೆ ದೂರ ಮಾಡಲು ಜಿಲ್ಲಾ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ರೋಗ ತಡೆಗೆ ಕ್ರಮ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ರವಿಶಂಕರ್‌ ಮಾತನಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆಶಾ ಕಾರ್ಯಕರ್ತೆಯರ ಮೂಲಕ ವಿವಿಧ ರೋಗಗಳನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮೂಢನಂಬಿಕೆಗಳನ್ನು ಹೋಗಲಾಡಿಸುವ ಪ್ರಯತ್ನ ಮಾಡಿದೆ.

ಅದರ ಫ‌ಲವಾಗಿ ಕಳೆದ ವರ್ಷ ಆರೋಗ್ಯ ರಕ್ಷಣೆಯಲ್ಲಿ ಒಳ್ಳೆಯ ಫ‌ಲಿತಾಂಶ ಬಂದಿದೆ. 2015 ರಲ್ಲಿ 124 ಮನೆ ಹೆರಿಗೆ ಪ್ರಕರಣ ವರದಿಯಾಗಿದ್ದು, 2016ರಲ್ಲಿ 62ಕ್ಕೆ ಇಳಿಕೆಯಾಗಿದೆ. 2015ರಲ್ಲಿ 304 ಶಿಶು ಮರಣ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ವರ್ಷ 195ಕ್ಕೆ ಇಳಿಕೆಯಾಗಿದೆ. ತಾಯಿ ಮರಣ 26 ರಿಂದ 19ಕ್ಕೆ ಇಳಿಕೆಯಾಗಿದೆ. ಪುರುಷರ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಶೇ.38 ರಷ್ಟಾಗಿದೆ ಎಂದು ಮಾಹಿತಿ ನೀಡಿದರು.

ಸಾಧಕರಿಗೆ ಸನ್ಮಾನ: ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಮನೋತಜ್ಞ ಕಿಶೋರ್‌, ಶುಶ್ರೂಷಕಿಯಾಗಿ 30 ವರ್ಷ ಸೇವೆ ಸಲ್ಲಿಸಿದ ವಿಜಯಲಕ್ಷಿ ಮತ್ತಿತರರನ್ನು ಸನ್ಮಾನಿಸಲಾಯಿತು. ಜಿಲ್ಲಾ ಆಯುಷ್‌ ಅಧಿಕಾರಿ ಇಂದುಮತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಿತ್ರಣ್ಣ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಸುರೇಂದ್ರನಾಥ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.