ಹೋರಾಟದ ನಡುವೆಯೂ ಮರಗಳ ಮಾರಣಹೋಮ


Team Udayavani, Jun 1, 2018, 5:34 PM IST

1june-13.jpg

ಧಾರವಾಡ: ಬಿಆರ್‌ಟಿಎಸ್‌ ಯೋಜನೆಯೊಂದಿಗೇ ನಗರದಲ್ಲಿ ಪ್ರಾರಂಭವಾದ ಮರಗಳ ಮಾರಣಹೋಮ ಇನ್ನೂ ಮುಂದುವರಿದಿದೆ. ಮರಗಳ ಉಳಿವಿಗಾಗಿ ಪರಿಸರವಾದಿಗಳು ನಿತ್ಯ ಹೋರಾಟ ನಡೆಸಿದ್ದರೂ ಅಧಿಕಾರಿಗಳು ಮಾತ್ರ ಅವರ ಮನವಿಗೆ ಪುರಸ್ಕಾರ ನೀಡುತ್ತಲೇ ಇಲ್ಲ.

ಇಲ್ಲಿನ ಬೆಳಗಾವಿ ರಸ್ತೆಯಲ್ಲಿನ ಮರಗಳನ್ನು ಉಳಿಸುವಂತೆ ಪರಿಸರವಾದಿಗಳು ಗುರುವಾರವೂ ಸಹ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಜ್ಯುಬಿಲಿ ವೃತ್ತದಿಂದ ನರೇಂದ್ರ ಕ್ರಾಸ್‌ವರೆಗೆ ರಸ್ತೆ ಅಗಲೀಕರಣಕ್ಕಾಗಿ ಸುಮಾರು 800 ಗಿಡಗಳನ್ನು ಕಡೆಯಲು ಅರಣ್ಯ ಇಲಾಖೆ ಮುಂದಾಗಿದ್ದು, ಗುರುವಾರ ಸುಮಾರು 80 ಮರಗಳನ್ನು ಧರೆಗುರುಳಿಸಿದ ಕಾರಣಕ್ಕೆ ಮರಗಿದ ಪರಿಸರವಾದಿಗಳು, ವಿವಿಧ ಬಗೆಯ ಬರಹಗಳನ್ನೊಳಗೊಂಡ ಫಲಕಗಳನ್ನು ಮರಗಳಿಗೆ ನೇತುಹಾಕಿ ಪ್ರತಿಭಟಿಸಿದರು.

ಪರಿಸರವಾದಿಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಾರಂಭದಲ್ಲಿ ಮರಗಳನ್ನು ಕಡೆಯಲು ಪರವಾನಗಿ ನೀಡಿರಲಿಲ್ಲ. ಆದರೆ ರಾಜಕೀಯ ಒತ್ತಡಕ್ಕೆ ಮಣಿದ ಇಲಾಖೆ ಅಧಿಕಾರಿಗಳು, ಇದೀಗ ಎಲ್ಲ ಮರಗಳನ್ನು ಕಡೆಯಲು ಮುಂದಾಗಿದ್ದರಿಂದ ಕೆಲ ದಿನಗಳಲ್ಲೇ ಎಲ್ಲ ಮರಗಳಿಗೆ ಕೊಡಲಿ ಪೆಟ್ಟು ಬೀಳುವುದಂತೂ ನಿಶ್ಚಿತವಾಗಿದೆ.

ಮರಗಳಿಗೆ ಶ್ರದ್ಧಾಂಜಲಿ: ನಾವು ನಿನಗೆ ಬೈ ಬೈ ಹೇಳುತ್ತಿದ್ದೇವೆ.. ನನ್ನೊಂದಿಗೆ ನೀವು ಹೋಗುತ್ತಿದ್ದೀರಿ, ಹೋಗಿ ಬನ್ನಿ, ಕಲಿಗಾಲವಿದು ನಿಮಗಿದು ಕೊನೆಯ ಕಾಲ..ನನ್ನ ಹಾಗೂ ನನ್ನ ಬಂಧು-ಬಳಗ ಕೊಂದು, ಪ್ರತಿ ನಿಮಿಷವೂ ಸಾಯುತ್ತಿದ್ದೀರಿ, ನಿಮ್ಮ ಅಂಧಕಾರಕ್ಕೆ ನನ್ನದೊಂದು ಧಿಕ್ಕಾರ..ಬಿಸಿಲ ಬೇಗೆಗೆ ಬಾರದ ಮಳೆಗೆ ದೂರಬೇಡಿ ಇನ್ನು ಸುಮ್ಮ ಸುಮ್ಮನೆ ಕೊಂದು ನನನ್ನು..! ಹೀಗೆ ವಿವಿಧ ಬರಹಳನ್ನೊಳಗೊಂಡ ಫಲಕಗಳನ್ನು ನೇತು ಹಾಕುವ ಮೂಲಕ ಮರಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಪರಿಸರವಾದಿಗಳು ತಮ್ಮ ಹಸಿರು ಪ್ರೇಮ ಮೆರೆದರು.

ಪಿ.ವಿ. ಹಿರೇಮಠ ಮಾತನಾಡಿ, ಹಲವು ವರ್ಷಗಳಿಂದ ಜನರ, ಪ್ರಾಣಿ, ಪಕ್ಷಿಗಳ ಒಡನಾಡಿಯಾಗಿದ್ದ ಮರಗಳನ್ನು ಅಭಿವೃದ್ಧಿ ಹೆಸರಿನಲ್ಲಿ ಕಡಿಯುತ್ತಿದ್ದಾರೆ. ನನ್ನನ್ನು ಕೊಂದು ನೀವು ಹೇಗೆ ಬದುಕುತ್ತೀರಿ ಎಂಬ ಮರದ ಪ್ರಶ್ನೆಯೊಂದಿಗೆ ಪ್ರತಿಭಟನೆ ಮಾಡಲಾಗಿದೆ. ಇದೇ ರೀತಿ ಅನೇಕ ಕಡೆಗಳಲ್ಲಿ ರಸ್ತೆಗಳ ನಿರ್ಮಾಣ ಮಾಡಬೇಕಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಿಡಗಳನ್ನು ಉಳಿಸುವ ಮೂಲಕ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತಹ ಯೋಜನೆಗಳನ್ನು ರೂಪಿಸಬೇಕು ಎಂಬುದು ನಮ್ಮ ಅಭಿಪ್ರಾಯವಾಗಿದೆ ಎಂದರು. ಪರಿಸರವಾದಿ ಡಾ| ಪ್ರಕಾಶ ಭಟ್‌, ಪ್ರಕಾಶ ಗೌಡರ, ಪು.ತಿ. ಶರ್ಮಾ, ಓಟಿಲಿ ಅನಬನ್‌, ಕಿರಣ ಹಿರೇಮಠ ಇದ್ದರು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.