ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
Team Udayavani, Mar 25, 2021, 6:55 PM IST
ಧಾರವಾಡ : ಭಾರತ ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಸಂಘ, ಸಂಸ್ಥೆ, ಶಾಲಾ ಕಾಲೇಜುಗಳ ಸಹಯೋಗದಲ್ಲಿ ಒಂದು ವರ್ಷ ಪೂರ್ತಿ ಪ್ರತಿ ವಾರದ ಒಂದು ದಿನ ವಿಭಿನ್ನ ಕಾರ್ಯಕ್ರಮ ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ವಂದಿತಾ ಶರ್ಮಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಜರುಗಿದ ನಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಿಲ್ಲೆಯ ನಾಯಕರು, ನಾಗರಿಕರು ಮಹತ್ವದ ಪಾತ್ರ ನಿರ್ವಹಿಸಿದ್ದಾರೆ. ಅನೇಕರು ತಮ್ಮ ಆಸ್ತಿ, ಜೀವ ತ್ಯಾಗ ಮಾಡಿದ್ದಾರೆ. ಗುಂಡಿಗೆ ಬಲಿಯಾಗಿದ್ದಾರೆ.
ಅವರ ಸೇವೆ, ಬಲಿದಾನ ಸ್ಮರಿಸಿ, ಗೌರವಿಸುವುದು ನಮ್ಮ ಕರ್ತವ್ಯ ಎಂದರು. ಸ್ವಾತಂತ್ರÂದ ಅಮೃತ ಮಹೋತ್ಸವ ಆಚರಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಇತಿಹಾಸದಲ್ಲಿ ದಾಖಲಾಗಿರುವ ನಮ್ಮ ನಾಯಕರ ಹೋರಾಟ, ಸ್ವಾತಂತ್ರ್ಯ ಸಂಗ್ರಾಮ ಕುರಿತು ಜಾಗೃತಿ ಮೂಡಿಸುವ, ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸುವಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಂಘಟಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು.
ವರ್ಷ ಪೂರ್ತಿಯಾಗಿ ಪ್ರತಿ ವಾರಕ್ಕೊಂದರಂತೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ವಿವಿಧ ಸಂಘ, ಸಂಸ್ಥೆ, ಗ್ರಾಮ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಛಾಯಾಚಿತ್ರ ಪ್ರದರ್ಶನ, ಗೋಷ್ಠಿ, ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಜೀವನ-ಸಾಧನೆ, ಸ್ವಾತಂತ್ರ್ಯ ಹೋರಾಟ ಸ್ಥಳಗಳ ಭೇಟಿ ನೀಡುವುದು ಮುಂತಾದ ವಿಭಿನ್ನ ಕಾರ್ಯಕ್ರಮ ಸಂಘಟಿಸಲಾಗುವುದು ಎಂದರು. ಜಿಪಂ ಸಿಇಒ ಡಾ|ಸುಶೀಲಾ ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿಡಿಪಿಐ ಎಮ್.ಎಲ್. ಹಂಚಾಟೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ಚಿದಂಬರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ಇತರ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.