Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!
ಮನೆ ಮುಂದೆ ಬೈಕ್ ನಿಲ್ಲಿಸಿ ತೆರಳುವ ವೇಳೆ ಏಕಾಏಕಿ ದಾಳಿ
Team Udayavani, Dec 3, 2024, 10:11 PM IST
ಧಾರವಾಡ: ಮನೆ ಮುಂದೆ ಬೈಕ್ ನಿಲ್ಲಿಸಿ ಒಳಗಡೆ ತೆರಳುತ್ತಿದ್ದವನ ಮೇಲೆ ಹಾಡಹಗಲೇ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಗರಗ ಗ್ರಾಮದ ಗಿರೀಶ್ ಕರಡಿಗುಡ್ಡ (40) ಕೊಲೆಯಾದವ ಎಂಬುವವರೇ ಹತ್ಯೆಗೀಡಾದವರು. ಮಂಗಳವಾರ ಮಧ್ಯಾಹ್ನ ಗಿರೀಶ್ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘಟನೆ ನಡೆದ ಕೆಲ ಗಂಟೆಗಳ ನಂತರ ಗಿರೀಶ್ ಕೊಲೆಯಾಗಿರುವುದು ಅವರ ಪತ್ನಿಗೆ ಗೊತ್ತಾಗಿದೆ.
ಆ ಕೂಡಲೇ ಅವರು ಗರಗ ಠಾಣೆಗೆ ದೂರು ನೀಡಿದ್ದು, ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಮತ್ತು ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಗಿರೀಶ್
ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳ ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್ ನಿರ್ಧಾರ: ಅರವಿಂದ ಬೆಲ್ಲದ
Hubli: ಮೀಟರ್ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ