![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 20, 2023, 9:30 PM IST
ಧಾರವಾಡ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಛಬ್ಬಿ ಗಣೇಶನ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಮರಳುತ್ತಿದ್ದ ಪೊಲೀಸ್ ಪೇದೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹು-ಧಾ ಬೈಪಾಸ್ ನಲ್ಲಿ ಬಳಿ ನಡೆದಿದೆ.
ಹುಚ್ಚೇಶ ಮಲ್ಲನಗೌಡ ಹಿರೇಗೌಡರ ಮೃತಪಟ್ಟ ಪೊಲೀಸ್ ಆಗಿದ್ದು, ಇನ್ನು ಬೈಕಿನ ಹಿಂಬದಿ ಕುಳಿತಿದ್ದ ಲಕ್ಷ್ಮೀ ಎಂಬ ಮಹಿಳಾ ಪೊಲೀಸ್‌ಗೆ ಗಂಭೀರ ಗಾಯಗಳಾಗಿವೆ.
ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನ ಬಂದೋಬಸ್ತ್‌ಗಾಗಿ ಛಬ್ಬಿಗೆ ಕಳಿಸಲಾಗಿತ್ತು. ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ಪೊಲೀಸ್ ಮೃತ ದೇಹ ರಸ್ತೆಯುದ್ದಕ್ಕೂ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಾರಿಯಾಗಿರುವ ವಾಹನದ ಮಾಹಿತಿ ಪಡೆಯುತ್ತಿದ್ದಾರೆ.
ಜೂಜಾಡುತ್ತಿದ್ದ 16 ಜನರ ಬಂಧನ
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹದಿನಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗರಗ ಗ್ರಾಮದ ಸಾರ್ವಜನಿಕ ಜಾಗೆಯಲ್ಲಿ ಇಸ್ಪೀಟು ಆಡುತ್ತಿದ್ದ ಸಮಯದಲ್ಲಿ ದಾಳಿ ನಡೆಸಿ 16 ಜನರನ್ನು ಬಂಧಿಸಿದ್ದಾರೆ . ಆರೋಪಿತರಿಂದ 33,000 ರೂಪಾಯಿ ನಗದು ಮತ್ತು ಜೂಜಾಟ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ . ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಿಪಿಐ ಸಮೀರ ಮುಲ್ಲಾ ಅವರ ನೇತೃತ್ವದಲ್ಲಿ ಪಿಎಸ್ ಐ ಪ್ರಕಾಶ ಡಿ . ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು . ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.